Home namma chikmagalur chikamagalur ರೈತನಿಂದ 50 ಸಾವಿರ ಕಿತ್ತುಕೊಂಡು ಹೋದ ದುಷ್ಕರ್ಮಿಗಳು
chikamagalurCrime NewsHomeKadurLatest Newsnamma chikmagalur

ರೈತನಿಂದ 50 ಸಾವಿರ ಕಿತ್ತುಕೊಂಡು ಹೋದ ದುಷ್ಕರ್ಮಿಗಳು

Share
Share

ಚಿಕ್ಕಮಗಳೂರು: ರೈತನೊಬ್ಬ ತಾನು ಬೆಳೆದ ತರಕಾರಿಯನ್ನು ಚಿಕ್ಕಮಗಳೂರು ಎಪಿಎಂಸಿಯಲ್ಲಿ ಮಾರಾಟ ಮಾಡಿ ಹಣ ಪಡೆದು ಊರಿಗೆ ಹೋಗಲು ಬಸ್ಸಿಗೆ ಕಾಯುತ್ತಿದ್ದಾಗ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ತಾವು ಸಖರಾಯಪಟ್ಟಣಕ್ಕೆ ತೆರಳುತಿದ್ದ ಲಕ್ಯಾವರೆಗೆ ರೈತನಿಗೆ ಡ್ರಾಪ್ ಕೊಡುವುದಾಗಿ ನಂಬಿಸಿ ಕರೆದುಕೊಂಡು ಹೋಗಿ ಮಾರ್ಗ ಮಧ್ಯದಲ್ಲಿ ರೈತನ ಬಳಿಯಿಂದ ಹಣ ಕಸಿದುಕೊಂಡು ಪರಾರಿಯಾಗಿರುವ ಘಟನೆ ಮಂಗಳವಾರ ಬೆಳಗಿನ ಜಾವ ನಡೆದಿದೆ.

ಕುರಿಚಿಕ್ಕನಹಳ್ಳಿಯ ನಿಂಗೇಗೌಡ ಹಣ ಕಳೆದುಕೊಂಡ ರೈತ. ನಿಂಗೇಗೌಡ ತಾವು ಬೆಳೆದ ಆಲೂಗಡ್ಡೆ ಹಾಗೂ ಬೀನ್ಸ್ ಅನ್ನು ಎಪಿಎಂಸಿಯಲ್ಲಿ ಮಾರಾಟ ಮಾಡಿ ಅದರ ಬಾಬ್ತು 50 ಸಾವಿರ ಹಣ ಪಡೆದು ಮಂಗಳವಾರ ಮುಂಜಾನೆ 5.30ಕ್ಕೆ ತಮ್ಮ ಊರಿಗೆ ತೆರಳಲು ಎಐಟಿ ಸರ್ಕಲ್ ಬಳಿ ಬಸ್ಸಿಗೆ ಕಾಯುತ್ತಿದ್ದರು. ಈ ವೇಳೆ ಬೈಕ್ ನಲ್ಲಿ ಬಂದ ಅಪರಿಚಿತರಿಬ್ಬರು ನಿಂಗೇಗೌಡರನ್ನು ಮಾತನಾಡಿಸಿದ್ದಾರೆ.

ಈ ವೇಳೆ ಅವರು ತಾವು ಕುರಿಚಿಕ್ಕನಹಳ್ಳಿಗೆ ಹೋಗಲು ಬಸ್ಸಿಗೆ ಕಾಯುತ್ತಿರುವುದಾಗಿ ತಿಳಿಸಿದ್ದಾರೆ. ಆಗ ಬೈಕ್ ನಲ್ಲಿ ಬಂದವರು ನಾವು ಸಖರಾಯಪಟ್ಟಣಕ್ಕೆ ತೆರಳುತ್ತಿದ್ದು ಮಾರ್ಗ ಮಧ್ಯೆ ನಿಮ್ಮ ಊರಿಗೆ ಬಿಡುತ್ತೇವೆ ಎಂದು ಬೈಕ್ ನಲ್ಲಿ ಕರೆದುಕೊಂಡು ಹೋಗಿದ್ದಾರೆ.

ನಗರವನ್ನು ದಾಟಿ ಕಣಿವೆ ದೇವಾಸ್ಥಾನದ ಬಳಿ ಹೋಗುತ್ತಿದ್ದಂತೆ ಬೈಕ್ ನಿಲ್ಲಿಸಿದ ದುಷ್ಕರ್ಮಿಗಳು ನಿಂಗೇಗೌಡ ಅವರ ಮೇಲೆ ಹಲ್ಲೆ ನಡೆಸಿ ಅವರ ಜೇಬಿನಲ್ಲಿದ್ದ 50 ಸಾವಿರ ರೂ. ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Miscreants snatched 50 thousand from farmer

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...