Home namma chikmagalur chikamagalur ಪ್ರಿಯಾಂಕ್ ಖರ್ಗೆ ನಾಲಿಗೆ ಬಿಗಿ ಹಿಡಿದು ಮಾತನಾಡಲಿ
chikamagalurHomeLatest Newsnamma chikmagalur

ಪ್ರಿಯಾಂಕ್ ಖರ್ಗೆ ನಾಲಿಗೆ ಬಿಗಿ ಹಿಡಿದು ಮಾತನಾಡಲಿ

Share
Share

ಚಿಕ್ಕಮಗಳೂರು: ಸಿಎಂ ಬದಲಾವಣೆ ವಿಷಯವನ್ನು ಮರೆಮಾಚುವ ಉz್ದೆÃಶದಿಂದ ಸಚಿವ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ ಗುರಿಯಾಗಿಸಿಕೊಂಡು ಆರೋಪ ಮಾಡುತ್ತಿದ್ದಾರೆ. ಸಚಿವ ಸ್ಥಾನ ಸಿಕ್ಕಿದೆ ಎಂಬ ಕಾರಣಕ್ಕೆ ಅವರಿಗೆ ಅಹಂಕಾರದ ಪಿತ್ತ ನೆತ್ತಿಗೇರಿದೆ. ಆರ್‌ಎಸ್‌ಎಸ್ ಹಾಗೂ ಆರ್‌ಎಸ್‌ಎಸ್ ನಾಯಕರ ವಿರುದ್ಧ ಮಾತನಾಡುವ ಮೊದಲು ಪ್ರಿಯಾಂಕ್ ಖರ್ಗೆ ಅವರು ತಮ್ಮ ನಾಲಿಗೆ ಬಿಗಿ ಹಿಡಿದುಕೊಳ್ಳಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್ ದೇಶ ಕಟ್ಟುವುದನ್ನು ಹಾಗೂ ಒಗ್ಗೂಡಿಸುವುದನ್ನು ಹೇಳಿಕೊಡುತ್ತದೆ. ಎಂದೂ ಸಹ ದೇಶ ವಿಭಜನೆ ಮಾಡುವ, ಕುತಂತ್ರ ರಾಜಕಾರಣ ಮಾಡುವುದನ್ನು ಹೇಳಿಕೊಡುವುದಿಲ್ಲ. ಇದನ್ನು ಅರಿಯದ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ ನಾಯಕರನ್ನು ತೇಜೋವಧೆ ಮಾಡುವ ಹೇಳಿಕೆ ನೀಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಯ ಮಲೆನಾಡು ಭಾಗದಲ್ಲಿ ದಿನೇ ದಿನೇ ಆನೆ ದಾಳಿ ಹೆಚ್ಚಾಗಿ ಜನ ಪ್ರಾಣಕಳೆದುಕೊಳ್ಳುವಂತಾಗಿದೆ. ಆನೆ ಹಾವಳಿ ನಿಯಂತ್ರಿಸುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಖಾಂಡ್ಯ ಭಾಗದಲ್ಲಿಯೂ ಸೋಮವಾರ ಆನೆ ದಾಳಿಯಿಂದ ಯಲ್ಲಪ್ಪ ಎಂಬ ಕಾರ್ಮಿಕ ಮೃತಪಟ್ಟಿದ್ದಾನೆ. ಕೂಡಲೇ ಹಾವಳಿ ನೀಡುತ್ತಿರುವ ಆನೆಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಬೇಕು. ಮಲೆನಾಡಿನ ಜನ, ಕಾರ್ಮಿಕರು, ತೋಟದ ಮಾಲಿಕರಿಗೆ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ಐದು ಮಂದಿ ಶಾಸಕರು ನಿಶಕ್ತರಾಗಿ ಕೈಕಟ್ಟಿ ಕುಳಿತಿದ್ದಾರೆ. ಅವರ ಏಳಿಗೆಯನ್ನು ನೋಡುತ್ತಿದ್ದಾರೆಯೇ ಹೊರತು ಜನರಿಗೆ ಅನುಕೂಲ ಒದಗಿಸುತ್ತಿಲ್ಲ. ಮುಂದಿನ ದಿನಗಳಲ್ಲಾದರೂ ಮತನೀಡಿ ಗೆಲ್ಲಿಸಿದ ಜನರ ಋಣ ತೀರಿಸುವ ಕೆಲಸ ಮಾಡಲಿ ಎಂದು ಹೇಳಿದರು.

ಜಿಲ್ಲೆಗೆ ನೂತನ ಡಿಸಿ ಹಾಗೂ ಎಸ್‌ಪಿ ಬಂದು ಒಂದು ತಿಂಗಳು ಕಳೆದಿದೆ. ಆದರೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಅಧಿಕಾರಿಗಳು ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿಲ್ಲ. ನಗರದ ವಿಜಯಪುರ ಬಡಾವಣೆಯಲ್ಲಿ ಮುಸ್ಲಿಂ ಯುವಕರು ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಪ್ರಕರಣಕ್ಕೆ ಸಂಬAಧಿಸಿದAತೆ ಇಬ್ಬರು ಯುವಕರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿತ್ತು. ಆದರೆ ಪೊಲೀಸರು ಆ ಇಬ್ಬರನ್ನು ರಾತ್ರಿಯೇ ಬಿಟ್ಟು ಕಳುಹಿಸಿದ್ದಾರೆ. ಕಲ್ಲು ತೂರಾಟವಾದ ಮನೆಯವರ ರಕ್ಷಣೆಗೆ ಬಂದವರ ಮೇಲೆಯೇ ಪ್ರಕರಣ ದಾಖಲಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಿಸಿ ಹಾಗೂ ಎಸ್‌ಪಿ ಸರ್ಕಾರದ ಕೈಗೊಂಬೆಯAತೆ ಕೆಲಸ ಮಾಡಬಾರದು. ತಮ್ಮ ಅಧಿಕಾರ ಬಳಸಿ ಜನರಿಗೆ ಸ್ಪಂದಿಸುವ ಕೆಲಸ ಮಾಡಬೇಕು. ವಿಜಯಪುರದಲ್ಲಿ ಮನೆ ಮೇಲೆ ಕಲ್ಲು ತೂರಾಟ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳದೇ ಇದ್ದಲ್ಲಿ ಬಿಜೆಪಿಯಿಂದಲೇ ತಂಡ ಕಟ್ಟಿಕೊಂಡು ಜನರ ರಕ್ಷಣೆ ಮಾಡಲು ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಕಲ್ಮರುಡಪ್ಪ, ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ನಗರಾಧ್ಯಕ್ಷ ಕೆ.ಎಸ್.ಪುಷ್ಪರಾಜ್, ಪ್ರಮುಖರಾದ ಈಶ್ವರಹಳ್ಳಿ ಮಹೇಶ್, ಕೋಟೆ ಪ್ರದೀಪ್ ಮತ್ತಿತರರಿದ್ದರು.

Let Priyank Kharge hold his tongue and speak.

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...