Home namma chikmagalur chikamagalur ವಿಮಾ ಪರಿಹಾರ ಬಡ್ಡಿ ಸಹಿತ ನೀಡಲು ಆದೇಶ
chikamagalurHomeLatest Newsnamma chikmagalur

ವಿಮಾ ಪರಿಹಾರ ಬಡ್ಡಿ ಸಹಿತ ನೀಡಲು ಆದೇಶ

Share
Share

ಚಿಕ್ಕಮಗಳೂರು: ಶಿಕ್ಷಕರ ಸಹಕಾರ ಬ್ಯಾಂಕ್‌ನಿಂದ ಸಾಲ ಪಡೆದ ಸರ್ಕಾರಿ ಶಿಕ್ಷಕರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಸಾಲ ಮರುಪಾವತಿಗೆ ವಿಮಾ ಹಣವನ್ನು ಭರಿಸದ ವಿಮಾ ಕಂಪನಿಯ ವಿರುದ್ಧ ತೀರ್ಪು ನೀಡಿರುವ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಬಡ್ಡಿ ಸಹಿತ ಹಣ ಪಾವತಿಸುವಂತೆ ಆದೇಶ ನೀಡಿದೆ.

ಕಡೂರು ಪಟ್ಟಣದ ಕೆ.ಎಂ.ದಿನೇಶ್ ಎಂಬುವವರು ನಗರದ ಮಧುವನ ಲೇಔಟ್‌ನಲ್ಲಿರುವ ಮೆ| ಶಿಕ್ಷಕರ ಸಹಕಾರ ಬ್ಯಾಂಕ್‌ನಿಂದ ಪಡೆದ ಸಾಲಕ್ಕೆ ಸಂಬಂಧಿಸಿದಂತೆ ಮೆ| ಎಕ್ಸೈಡ್ ಜೀವ ವಿಮಾ ಕಂಪನಿಯ ಚಿಕ್ಕಮಗಳೂರು ಶಾಖೆಯಿಂದ ವಿಮೆಯನ್ನು ಪಡೆದುಕೊಂಡಿದ್ದರು. ದುರದೃಷ್ಟವಶಾತ್ ೨೦೨೩ರ ಅಕ್ಟೋಬರ್ ೨೬ ರಂದು ದಿನೇಶ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದರು.

ಈ ಹಿನ್ನೆಲೆಯಲ್ಲಿ ಸಾಲ ಮರುಪಾವತಿಸಲು ವಿಮಾ ಕಂಪನಿಯಿಂದ ವಿಮಾ ಪರಿಹಾರದ ಮೊತ್ತವನ್ನು ನೀಡುವಂತೆ ಕೋರಿದ್ದರೂ ವಿಮಾ ಕಂಪನಿ ಹಣ ಪಾವತಿಸದೆ ಸೇವಾ ನ್ಯೂನತೆ ಎಸಗಿತ್ತೆನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ೨೦೨೫ರ ಜುಲೈ ೮ ರಂದು ಮೆ| ಎಕ್ಸೈಡ್ ಜೀವ ವಿಮಾ ಕಂಪನಿಯ ಬೆಂಗಳೂರು ಕಚೇರಿಯ ವ್ಯವಸ್ಥಾಪಕರು ಹಾಗೂ ಚಿಕ್ಕಮಗಳೂರು ಶಾಖಾ ವ್ಯವಸ್ಥಾಪಕರು, ಮೆ|ಶಿಕ್ಷಕರ ಸಹಕಾರ ಬ್ಯಾಂಕ್‌ನ ಉಡುಪಿ ಪ್ರಧಾನ ಕಚೇರಿ ಮತ್ತು ಚಿಕ್ಕಮಗಳೂರು ಶಾಖೆಯ ವ್ಯವಸ್ಥಾಪಕರುಗಳ ವಿರುದ್ಧ ಆಯೋಗಕ್ಕೆ ದೂರು ಸಲ್ಲಿಸಲಾಗಿತ್ತು.

ಈ ಬಗ್ಗೆ ವಿಚಾರಣೆ ನಡೆಸಿದ ಆಯೋಗವು ಜನವರಿ ೨೩ ರಂದು ತೀರ್ಪು ನೀಡಿದ್ದು, ಮೆ| ಎಕ್ಸೈಡ್ ಜೀವ ವಿಮಾ ಕಂಪನಿಯ ಬೆಂಗಳೂರು ಕಚೇರಿ ಹಾಗೂ ಚಿಕ್ಕಮಗಳೂರು ಶಾಖಾ ಕಚೇರಿಯ ವಿರುದ್ಧದ ದೂರನ್ನು ಖರ್ಚಿನೊಂದಿಗೆ ಭಾಗಶಃ ಪುರಸ್ಕರಿಸಿ ಮೆ|ಶಿಕ್ಷಕರ ಸಹಕಾರಿ ಬ್ಯಾಂಕ್‌ನ ಉಡುಪಿ ಪ್ರಧಾನ ಕಚೇರಿ ಮತ್ತು ಚಿಕ್ಕಮಗಳೂರು ಶಾಖೆ ವಿರುದ್ಧದ ದೂರನ್ನು ವಜಾಗೊಳಿಸಿದೆ.

ವಿಮಾ ಕಂಪನಿಯು ವಿಮಾ ಪರಿಹಾರ ಮೊತ್ತ ೧೧.೫೦ ಲಕ್ಷ ರೂ.ಗಳನ್ನು ೨೦೨೪ರ ಫೆಬ್ರವರಿ ೮ ರಿಂದ ಇದುವರೆಗೆ ವಾರ್ಷಿಕ ಶೇ.೯ರ ಬಡ್ಡಿ ಸಹಿತ ಪಾವತಿಸುವಂತೆ ಆದೇಶಿಸಲಾಗಿದೆ. ಅಲ್ಲದೆ, ಪರಿಹಾರವಾಗಿ ೪೦ ಸಾವಿರ ರೂ. ಹಾಗೂ ವ್ಯಾಜ್ಯದ ಖರ್ಚು-ವೆಚ್ಚವೆಂದು ೧೦ ಸಾವಿರ ರೂ.ಗಳನ್ನು ಜಯಂತಿ ಅವರಿಗೆ ನೀಡುವಂತೆ ಆದೇಶ ನೀಡಲಾಗಿದೆ. ತಪ್ಪಿದಲ್ಲಿ ಆದೇಶದ ಮೊತ್ತಕ್ಕೆ ಶೇ.೬ ಭವಿಷ್ಯ ಬಡ್ಡಿಯನ್ನು ಪಾವತಿಸುವಂತೆ ಆದೇಶಿಸಿದೆ.

ಆಯೋಗದ ಅಧ್ಯಕ್ಷರಾದ ಎನ್.ಆರ್.ಚೆನ್ನಕೇಶವ, ಸದಸ್ಯರಾದ ಈ.ಪ್ರೇಮಾ ಮತ್ತು ಡಾ.ಮಂಜುನಾಥ ಎಂ,ಬಮ್ಮನಕಟ್ಟಿ ಅವರು ಈ ತೀರ್ಪನ್ನು ಪ್ರಕಟಿಸಿದ್ದು, ಗ್ರಾಹಕರ ಹಿತರಕ್ಷಣೆ ಮಾಡಲಾಗಿದೆ.
ಪ್ರಕರಣದಲ್ಲಿ ಅರ್ಜಿದಾರರ ಪರವಾಗಿ ವಕೀಲರಾದ ಎಂ.ಕೆ.ರಮೇಶ್ ಅವರು ವಾದ ಮಂಡಿಸಿದ್ದರು.

Order to pay insurance compensation with interest

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....