Home namma chikmagalur chikamagalur ದಲಿತ ಅಪ್ರಾಪ್ತ ಯುವಕನ ಮೇಲೆ ಯುವಕರ ತಂಡದಿಂದ ಹಲ್ಲೆ
chikamagalurHomeLatest Newsnamma chikmagalur

ದಲಿತ ಅಪ್ರಾಪ್ತ ಯುವಕನ ಮೇಲೆ ಯುವಕರ ತಂಡದಿಂದ ಹಲ್ಲೆ

Share
Share

ಚಿಕ್ಕಮಗಳೂರು: ನಗರದ ಸಂತೇ ಮೈದಾನದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದ್ದು, ದಲಿತ ಅಪ್ರಾಪ್ತ ಯುವಕನ ಮೇಲೆ ಮುಸ್ಲಿಂ ಯುವಕರ ತಂಡವೊಂದು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ.

ಮುಸ್ಲಿಂ ಸಮುದಾಯದ ಅಪ್ರಾಪ್ತ ಯುವತಿಯ ಜೊತೆ ದಲಿತ ಯುವಕ ಇದ್ದ ಎಂಬ ಕಾರಣಕ್ಕೆ ಈ ಸಂಘರ್ಷ ನಡೆದಿದ್ದು, ಮುಸ್ಲಿಂ ಯುವಕರು ಪ್ರಶ್ನಿಸುತ್ತಿದ್ದಂತೆ ಯುವತಿ ಸ್ಥಳದಿಂದ ನಿರ್ಗಮಿಸಿದ್ದಾರೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಯುವಕ ಮತ್ತು ಯುವತಿ ಇಬ್ಬರೂ ಸ್ನೇಹಿತರಾಗಿದ್ದು, ಎರಡೂ ಕುಟುಂಬಗಳಿಗೂ ಪರಸ್ಪರ ಪರಿಚಯವಿತ್ತು ಎಂದು ತಿಳಿದುಬಂದಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ನಗರ ಪೊಲೀಸ್‌ ಠಾಣೆಯಲ್ಲಿ ಹಲ್ಲೆ ನಡೆಸಿದ ಎಂಟು ಜನರ ವಿರುದ್ಧ ಅಟ್ರಾಸಿಟಿ ಸೇರಿದಂತೆ ವಿವಿಧ ಕಲಂ ಅಡಿ ಪ್ರಕರಣ ದಾಖಲಾಗಿದ್ದು, ಈಗಾಗಲೇ ನಯಾಜ್, ತಬ್ರಿಜ್ ಹಾಗೂ ಹನೀಫ್ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ತಲೆಮರೆಸಿಕೊಂಡಿರುವ ಉಳಿದ ನಾಲ್ಕು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾ‌ರ್ ನಗರ ಪೊಲೀಸ್‌ ಠಾಣೆಯಲ್ಲೇ ಮೊಕ್ಕಾಂ ಹೂಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

Dalit minor attacked by a group of youths

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...