Home namma chikmagalur chikamagalur ಕಲ್ಲು ಎಸೆತ ಪ್ರಕರಣ: ಇಬ್ಬರು ಹಿಂದೂ ಯುವಕರ ಬಂಧನ
chikamagalurLatest Newsnamma chikmagalur

ಕಲ್ಲು ಎಸೆತ ಪ್ರಕರಣ: ಇಬ್ಬರು ಹಿಂದೂ ಯುವಕರ ಬಂಧನ

Share
Share

ಚಿಕ್ಕಮಗಳೂರು: ಕಾಫಿನಾಡಿನ ವಿಜಯಪುರ ಬಡಾವಣೆಯಲ್ಲಿ ನಡೆದಿದ್ದ ಹಿಂದೂ ಮನೆಯೊಂದರ ಮೇಲೆ ನಡೆದಿದ್ದ ಕಲ್ಲು ಎಸೆತ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಪೊಲೀಸರು ಇಬ್ಬರು ಹಿಂದೂ ಯುವಕರನ್ನು ಬಂಧಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಗೌರಿ ಕಾಲುವೆಯ ಭರತ್ (23) ಹಾಗೂ ರಾಮನಹಳ್ಳಿಯ ದಿಲೀಪ್ (27) ಎಂಬುವವರನ್ನು ಬಂಧಿಸಿದ್ದಾರೆ.

ಈ ಇಬ್ಬರು ಯುವಕರು ಘಟನೆ ನಡೆಯುವುದಕ್ಕಿಂತ ಮೂರು ದಿನಗಳ ಹಿಂದಿನಿಂದಲೇ ಕಲ್ಲುತೂರಾಟ ನಡೆದಿರುವ ಮನೆಯ ಸುತ್ತ ಬೈಕಿನಲ್ಲಿ ಓಡಾಡುತ್ತಾ ಅವರನ್ನು ಹಿಂಬಾಲಿಸುತ್ತಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಮೂರ್ನಾಲ್ಕು ದಿನಗಳ ಹಿಂದೆ ಸರ್ಕಾರಿ ಕ್ವಾರ್ಟಸ್್ರ ನಲ್ಲಿ ವಾಸವಿರುವ ಸುಧಾ ತಮ್ಮ ಮನೆಯ ಅವರಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಈ ಯುವಕರನ್ನು ಪ್ರಶ್ನಿಸಿದ್ದಕ್ಕೆ ಕಿರಿಕ್ ನಡೆದಿತ್ತು ಎನ್ನಲಾಗಿದೆ.

ನಮ್ಮ ಮನೆಯ ಅಸುಪಾಸು ಯಾಕೆ ಓಡಾಡುತ್ತೀರಿ ಎಂದು ಪ್ರಶ್ನಿಸಿದ್ದಕ್ಕೆ ಯುವಕರು ಅವರೊಂದಿಗೆ ವಾಗ್ವಾದ ನಡೆಸಿದ್ದರು ಎನ್ನಲಾಗಿದೆ. ಈ ಘಟನೆಯ ಬೆನ್ನಲ್ಲೇ ಮನೆಗಳ ಮೇಲೆ ಕಲ್ಲು ಎಸೆತ ನಡೆದಿದ್ದು ಸದ್ಯ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ಚುರುಕುಗೊಳಿಸಿದ್ದಾರೆ.

Stone pelting case: Two Hindu youths arrested

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...