Home namma chikmagalur chikamagalur ನೈತಿಕ ಪೊಲೀಸ್ ಗಿರಿ ಪ್ರಕರಣ – ಗಂಭೀರವಾಗಿ ಪರಿಗಣನೆ
chikamagalurCrime NewsHomeLatest Newsnamma chikmagalur

ನೈತಿಕ ಪೊಲೀಸ್ ಗಿರಿ ಪ್ರಕರಣ – ಗಂಭೀರವಾಗಿ ಪರಿಗಣನೆ

Share
Share

ಚಿಕ್ಕಮಗಳೂರು: ಕಾಫಿನಾಡಿನ ಸಂತೇ ಮೈದಾನದ ಬಳಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣವನ್ನು ಜಿಲ್ಲಾ ಪೊಲೀಸ್ ಇಲಾಖೆ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ಅಪ್ರಾಪ್ತ ಯುವಕ ಮತ್ತು ಯುವತಿಯನ್ನು ಅಡ್ಡಗಟ್ಟಿ, ದಲಿತ ಸಮುದಾಯಕ್ಕೆ ಸೇರಿದ ಯುವಕನಿಗೆ ಬೆದರಿಕೆ ಹಾಕಿ ಹಲ್ಲೆ ನಡೆಸಲಾಗಿದ್ದು. ಈ ಕೃತ್ಯದಲ್ಲಿ ಭಾಗಿಯಾದ ಎಂಟು ಜನರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಸೇರಿದಂತೆ ವಿವಿಧ ಗಂಭೀರ ಕಲಂ ಅಡಿ ಪ್ರಕರಣ ದಾಖಲಾಗಿದ್ದು, ಈಗಾಗಲೇ ನಯಾಜ್, ತಬ್ರಿಜ್ ಮತ್ತು ಹನೀಫ್ ಎಂಬ ಮೂರು ಆರೋಪಿಗಳನ್ನು ಬಂಧಿಸಲಾಗಿದೆ.

ಉಳಿದ ನಾಲ್ವರು ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ ಎಂದು ತಿಳಿಸಿದ್ದಾರೆ. ಘಟನೆ ನಡೆದ ನಂತರ ಅವರು ಖುದ್ದಾಗಿ ನಗರ ಪೊಲೀಸ್‌ ಠಾಣೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದು, ತನಿಖೆಯನ್ನು ಚುರುಕುಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಪೊಲೀಸ್ ಬಂದೋಬಸ್ತ್ ಅನ್ನು ಕೈಗೊಳ್ಳಲಾಗಿದೆ ಎಂದು ಜಿತೇಂದ್ರ ಕುಮಾರ್ ದಯಾಮ ಮಾಹಿತಿ ನೀಡಿದ್ದಾರೆ.

Moral Police Giri Case – Serious Consideration

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...