Home namma chikmagalur chikamagalur ಕಲ್ಲು ತೂರಾಟ ಪ್ರಕರಣದ ಎಸ್.ಐ.ಟಿ ತನಿಖೆಗೆ ಆಗ್ರಹ
chikamagalurHomeLatest Newsnamma chikmagalur

ಕಲ್ಲು ತೂರಾಟ ಪ್ರಕರಣದ ಎಸ್.ಐ.ಟಿ ತನಿಖೆಗೆ ಆಗ್ರಹ

Share
??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Share

ಚಿಕ್ಕಮಗಳೂರು: ಕಾಫಿನಾಡಿನ ವಿಜಯಪುರ ಬಡಾವಣೆಯ ಹಿಂದೂ ಮನೆಯೊಂದರ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಗೌಸ್ ಮುನೀರ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಘಟನೆಯ ಹಿಂದೆ ಕಣ್ಣಿಗೆ ಕಾಣದ ಶಕ್ತಿಗಳು ಕೆಲಸ ಮಾಡುತ್ತಿವೆ ಎಂದು ದೂರಿದ್ದಾರೆ.

ಪೊಲೀಸರು ಭಜರಂಗದಳದಂತಹ ಸಂಘಟನೆಗಳಿಗೆ ಹೆದರುತ್ತಿರುವುದು ಈ ಪ್ರಕರಣದಲ್ಲಿ ಎದ್ದು ಕಾಣುತ್ತಿದ್ದು, ಈ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸುವ ಬದಲು ಪ್ರಕರಣವನ್ನು ಕೂಡಲೇ ಎಸ್‌ಐಟಿಗೆ ಒಪ್ಪಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ನೈಜತೆಯನ್ನು ಬಹಿರಂಗಪಡಿಸಬೇಕಿತ್ತು ಎಂದು ಅಭಿಪ್ರಾಯಪಟ್ಟಿರುವ ಅವರು, ಸಿ.ಟಿ. ರವಿ ಅವರು ಮುಸ್ಲಿಮರನ್ನು ಗುರಿಯಾಗಿಸಿ ಹೇಳಿಕೆ ನೀಡುವ ಮೂಲಕ ಪ್ರತಿಭಟನೆಗಳನ್ನು ಪ್ರಚೋದಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಮುಂದುವರಿದು ಮಾತನಾಡಿದ ಅವರು, ಮುಸ್ಲಿಂ ಸಮುದಾಯದ ಮತಗಳನ್ನು ಪಡೆದು ಆಯ್ಕೆಯಾದ ಶಾಸಕರು ಈಗ ಸಮುದಾಯದ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರು ಶಾಸಕ ತಮ್ಮಯ್ಯ ಅವರು ಇಂತಹ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಪರವಾಗಿ ನಿಲ್ಲಬೇಕಿತ್ತು,

ಆದರೆ ಶಾಸಕರು ಕುಟುಂಬದೊಂದಿಗೆ ಪ್ರವಾಸದಲ್ಲಿದ್ದರೆ ಇತ್ತ ಮುಸ್ಲಿಂ ಕುಟುಂಬಗಳು ಜೈಲು ಪಾಲಾಗಿ ಕಣ್ಣೀರು ಹಾಕುತ್ತಿವೆ ಎಂದು ಕಿಡಿಕಾರಿದ್ದಾರೆ. ಗೃಹ ಸಚಿವ ಪರಮೇಶ್ವ‌ರ್ ಅವರು ಅಧಿಕಾರಿಗಳಿಂದ ತಪ್ಪು ಮಾಹಿತಿ ಪಡೆಯುತ್ತಿದ್ದು, ತಮಗೆ ಏನೂ ತಿಳಿದಿಲ್ಲ ಎಂಬಂತೆ ವರ್ತಿಸುತ್ತಿದ್ದಾರೆ.

ಹೀಗಾಗಿ ತಪ್ಪು ಮಾಹಿತಿ ನೀಡಿದ ಅಧಿಕಾರಿಯನ್ನು ಅಮಾನತುಗೊಳಿಸಿ ಸಚಿವರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ಮುಸ್ಲಿಮರ ಬಗ್ಗೆ ಮಾತನಾಡಿದರೆ ಡ್ಯಾಮೇಜ್ ಆಗುತ್ತದೆ ಎಂದು ಭಾವಿಸಿರುವ ಪಕ್ಷಗಳಿಗೆ ಮುಂದಿನ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಗೌಸ್ ಮುನೀರ್ ಎಚ್ಚರಿಸಿದ್ದಾರೆ.

Demand for SIT investigation into stone pelting case

Share

Leave a comment

Leave a Reply

Your email address will not be published. Required fields are marked *

Don't Miss

ಪ್ರತ್ಯೇಕ ಪ್ರಕರಣಗಳಲ್ಲಿ 5.20 ಲಕ್ಷ ರೂ. ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಬಾಗಿಲು ಮುರಿದು ಒಳಗೆ ನುಗ್ಗಿರುವ ಕಳ್ಳರು ಆಭರಣ ಸೇರಿದಂತೆ ೫.೨೦ ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಅಪಹರಿಸಿದ್ದಾರೆ. ಕಡೂರು ಠಾಣಾ ವ್ಯಾಪ್ತಿಯ ವೆಂಕಟೇಶ್ವರ ನಗರದ...

ಮಕ್ಕಳ ರಕ್ಷಣೆಗಾಗಿ ಮಕ್ಕಳ ರಕ್ಷಣಾ ಸಿಬ್ಬಂದಿಗಳ ಮನವಿ

ಚಿಕ್ಕಮಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲೆಯ ಮಕ್ಕಳ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಕ್ಕಳ ರಕ್ಷಣಾ ಸಿಬ್ಬಂದಿಗಳು ಇಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಮಕ್ಕಳ ರಕ್ಷಣಾ ಕಾರ್ಯಕ್ರಮಗಳು ಖಾಯಂ...

Related Articles

ನರಹಂತಕ ಆನೆ ಸೆರೆಗೆ ಸಾಕಾನೆಗಳ ತಂಡ ಆಗಮನ

ಚಿಕ್ಕಮಗಳೂರು: ಕಾಫಿ ನಾಡಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಕಾರ್ಮಿಕ ಬಲಿ; ಸೆರೆಗೆ ಸಾಕಾನೆಗಳ ತಂಡ ಆಗಮನ...

ನೈತಿಕ ಪೊಲೀಸ್ ಗಿರಿ ಪ್ರಕರಣ – ಗಂಭೀರವಾಗಿ ಪರಿಗಣನೆ

ಚಿಕ್ಕಮಗಳೂರು: ಕಾಫಿನಾಡಿನ ಸಂತೇ ಮೈದಾನದ ಬಳಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣವನ್ನು ಜಿಲ್ಲಾ ಪೊಲೀಸ್...

ಕಲ್ಲು ಎಸೆತ ಪ್ರಕರಣ: ಇಬ್ಬರು ಹಿಂದೂ ಯುವಕರ ಬಂಧನ

ಚಿಕ್ಕಮಗಳೂರು: ಕಾಫಿನಾಡಿನ ವಿಜಯಪುರ ಬಡಾವಣೆಯಲ್ಲಿ ನಡೆದಿದ್ದ ಹಿಂದೂ ಮನೆಯೊಂದರ ಮೇಲೆ ನಡೆದಿದ್ದ ಕಲ್ಲು ಎಸೆತ ಪ್ರಕರಣಕ್ಕೆ...

ದಲಿತ ಅಪ್ರಾಪ್ತ ಯುವಕನ ಮೇಲೆ ಯುವಕರ ತಂಡದಿಂದ ಹಲ್ಲೆ

ಚಿಕ್ಕಮಗಳೂರು: ನಗರದ ಸಂತೇ ಮೈದಾನದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದ್ದು, ದಲಿತ ಅಪ್ರಾಪ್ತ ಯುವಕನ ಮೇಲೆ...