Home namma chikmagalur chikamagalur 10 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು
chikamagalurHomeLatest Newsnamma chikmagalur

10 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

Share
Share

ಶೃಂಗೇರಿ: ಹಾಡಹಗಲೇ ಮನೆಯೊಳಗೆ ನುಗ್ಗಿದ ಕಳ್ಳರು ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ಬಂಗಾರದ ಆಭರಣಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ.

ದೂರುದಾರರಾದ ರವಿರಾಜ್ ಅವರು ಈ ಬಗ್ಗೆ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶಿವರಾತ್ರಿ ಹಬ್ಬದ ಪ್ರಯುಕ್ತ ದಂಪತಿಗಳು ತಮ್ಮ ಒಡವೆಗಳ ಸಮೇತ ನೆಂಟರ ಮನೆಗೆ ಹೋಗಿದ್ದರು.

ಮರುದಿನ ಅಂದರೆ ಫೆಬ್ರವರಿ 18ರಂದು ಬೆಳಿಗ್ಗೆ 10 ಗಂಟೆಗೆ ಮನೆಗೆ ಹಿಂತಿರುಗಿದ ರೇಖಾ ಅವರು ಒಡವೆಗಳಿದ್ದ ಬ್ಯಾಗನ್ನು ಮನೆಯ ಕೋಣೆಯಲ್ಲಿಟ್ಟು, ನಂತರ ಮನೆಯ ಹಿಂಭಾಗದ ಕೆಲಸದಲ್ಲಿ ಮಗ್ನರಾಗಿದ್ದರು.

ಈ ಸಮಯದಲ್ಲಿ ರವಿರಾಜ್ ಅವರು ಕೆಲಸಕ್ಕೆಂದು ಶೃಂಗೇರಿಗೆ ತೆರಳಿದ್ದರು. ಮಧ್ಯಾಹ್ನ ಸುಮಾರು 1 ಗಂಟೆಯ ಹೊತ್ತಿಗೆ ರೇಖಾ ಅವರು ಕೋಣೆಗೆ ಬಂದು ನೋಡಿದಾಗ ಇಟ್ಟಿದ್ದ ಒಡವೆಗಳು ನಾಪತ್ತೆಯಾಗಿರುವುದು ಕಂಡುಬಂದಿದೆ.

ತಕ್ಷಣವೇ ಪತಿಗೆ ವಿಷಯ ತಿಳಿಸಿದ್ದು, ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ಮನೆಯ ಬಾಗಿಲು ಮುರಿದಿರಲಿಲ್ಲ. ಮನೆಯ ಹಿಂಭಾಗದಲ್ಲಿ ಕೆಲಸ ಮಾಡುತ್ತಿದ್ದ ಸಮಯವನ್ನು ಬಳಸಿಕೊಂಡ ಕಳ್ಳರು, ಒಳನುಗ್ಗಿ ಒಟ್ಟು 90 ಗ್ರಾಂ ತೂಕದ ಚಿನ್ನಾಭರಣಗಳನ್ನು ದೋಚಿದ್ದಾರೆ.

ಕಳುವಾದ ವಸ್ತುಗಳಲ್ಲಿ 16 ಗ್ರಾಂನ ನೆಕ್ಸಸ್, 25 ಗ್ರಾಂ ಹಾಗೂ 10 ಗ್ರಾಂನ ಎರಡು ಚೈನ್‌ಗಳು, 16 ಗ್ರಾಂನ ಬಳೆ, 15 ಗ್ರಾಂನ ಓಲೆ ಮತ್ತು 8 ಗ್ರಾಂ ತೂಕದ ನಾಲ್ಕು ಉಂಗುರಗಳು ಸೇರಿವೆ.

ಕಳುವಾದ ಆಭರಣಗಳ ಅಂದಾಜು ಮೊತ್ತ 10 ಲಕ್ಷ ರೂಪಾಯಿಗಳಾಗಿದ್ದು, ರವಿರಾಜ್ ನೀಡಿದ ದೂರಿನನ್ವಯ ಶೃಂಗೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Gold ornaments worth Rs 10 lakh stolen

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...