Home ಸರ್ವಜ್ಞರ ತ್ರಿಪದಿಗಳು ಸಮಾಜದ ಅಂಕುಡೊಂಕು ತಿದ್ದುವ ಚಿಕಿತ್ಸಕ ಶಕ್ತಿಗಳು
HomeLatest Newsnamma chikmagalur

ಸರ್ವಜ್ಞರ ತ್ರಿಪದಿಗಳು ಸಮಾಜದ ಅಂಕುಡೊಂಕು ತಿದ್ದುವ ಚಿಕಿತ್ಸಕ ಶಕ್ತಿಗಳು

Share
Share

ಚಿಕ್ಕಮಗಳೂರು: ಕನ್ನಡದ ಮಹಾನ್ ಸಂತ, ಕವಿ ಮತ್ತು ದಾರ್ಶನಿಕ ಸರ್ವಜ್ಞರ ತ್ರಿಪದಿಗಳು ಕೇವಲ ಸಾಹಿತ್ಯವಲ್ಲ, ಅವು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಚಿಕಿತ್ಸಕ ಶಕ್ತಿಯಾಗಿವೆ ಎಂದು ಭಾರತ ಸರ್ಕಾರದ ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್.ಮಹೇಶ್ ಅವರು ಹೇಳಿದರು.

ನಗರದ ಕುವೆಂಪು ಕಲಾಮಂದಿರದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ೧೬ನೇ ಶತಮಾನದಲ್ಲಿ ಸಮಾಜದಲ್ಲಿದ್ದ ವರ್ಗ ಸಂಘರ್ಷ, ಮೇಲು-ಕೀಳು ಹಾಗೂ ಜಾತಿ ಪದ್ಧತಿಯ ವಿರುದ್ಧ ಸರ್ವಜ್ಞರು ತಮ್ಮ ಸಾಹಿತ್ಯದ ಮೂಲಕ ದೊಡ್ಡ ಹೋರಾಟವನ್ನೇ ಮಾಡಿದ್ದರು ಎಂದರು.

ಇಂದಿನ ವೇಗದ ಯುಗದಲ್ಲಿ ಜನರು ಸುದೀರ್ಘ ಕಾವ್ಯಗಳನ್ನು ಓದಲು ಸಮಯವಿಲ್ಲದಿದ್ದರೂ, ಸರ್ವಜ್ಞರ ಮೂರೇ ಸಾಲಿನ ತ್ರಿಪದಿಗಳು ಇಂದಿನ ವಾಟ್ಸಾಪ್ ಮತ್ತು ಮಾಹಿತಿ ತಂತ್ರಜ್ಞಾನದ ಕಾಲಕ್ಕೂ ಅತ್ಯಂತ ಪ್ರಸ್ತುತವಾಗಿವೆ ಎಂದ ಅವರು, ಸರ್ವಜ್ಞ ಎಂದರೆ ಎಲ್ಲವನ್ನೂ ತಿಳಿದವನು ಎಂದರ್ಥ. ಆದರೆ ಸರ್ವಜ್ಞರು ತಾವು ಎಲ್ಲರ ಬಳಿ ಒಂದೊಂದು ನುಡಿ ಕಲಿತು ಈ ಹಂತಕ್ಕೆ ತಲುಪಿದ್ದಾಗಿ ಹೇಳಿಕೊಳ್ಳುವ ಮೂಲಕ ವಿನಯದ ಪರಮಾವಧಿಯನ್ನು ತೋರಿಸಿದ್ದಾರೆ ಎಂದು ತಿಳಿಸಿದರು.

ಕರ್ನಾಟಕದ ಸರ್ವಜ್ಞರು ಮತ್ತು ತಮಿಳುನಾಡಿನ ತಿರುವಳ್ಳುವರ್ ಅವರ ಸಾಹಿತ್ಯ ಮತ್ತು ಜೀವನ ಶೈಲಿಯಲ್ಲಿ ಸಾಕಷ್ಟು ಸಾಮ್ಯತೆಗಳಿವೆ. ಈ ದಾರ್ಶನಿಕರು ಭಾಷೆ ಮತ್ತು ಪ್ರಾದೇಶಿಕ ಗಡಿಗಳನ್ನು ಮೀರಿ ನಿಲ್ಲುತ್ತಾರೆ. ಅದಕ್ಕಾಗಿಯೇ ಬೆಂಗಳೂರಿನಲ್ಲಿ ತಿರುವಳ್ಳುವರ್ ಮತ್ತು ತಮಿಳುನಾಡಿನಲ್ಲಿ ಸರ್ವಜ್ಞರ ಪ್ರತಿಮೆಯನ್ನು ಸ್ಥಾಪಿಸಿ ಉಭಯ ರಾಜ್ಯಗಳ ನಡುವಿನ ಬಾಂಧವ್ಯವನ್ನು ವೃದ್ಧಿಸಲಾಗಿದೆ ಎಂದರು.

ಕೇವಲ ಪಾರಂಪರಿಕ ವೃತ್ತಿಗಳಿಗೆ ಅಂಟಿಕೊಳ್ಳದೆ, ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವ ಮೂಲಕ ಅವರನ್ನು ಇಂಜಿನಿಯರ್, ವಕೀಲರು, ಐಎಎಸ್ ಮತ್ತು ಕೆಎಎಸ್ ಅಧಿಕಾರಿಗಳನ್ನಾಗಿ ಮಾಡುವಂತೆ ಪೋಷಕರಿಗೆ ಕರೆ ನೀಡಿದರು. ಶಾಸಕರಾದ ಎಚ್.ಡಿ. ತಮ್ಮಯ್ಯ ಅವರು ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ವಿಶೇಷ ಕಳಕಳಿ ಹೊಂದಿದ್ದು, ಸಮ ಸಮಾಜದ ನಿರ್ಮಾಣಕ್ಕೆ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.

ನಗರಸಭೆ ಅಧ್ಯಕ್ಷರಾದ ಶೀಲಾ ದಿನೇಶ್ ಅವರು ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಕೆ.ಸಿ.ನಾಗಪ್ಪ ಶೆಟ್ಟಿ ಉಪನ್ಯಾಸ ನೀಡಿದರು. ಉಪ ತಹಸೀಲ್ದಾರ್ ರಾಮರಾವ್ ದೇಸಾಯಿ, ಜಿಲ್ಲಾ ಕುಂಬಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಎಂ.ಗಂಗಾಧರ್, ತಾಲ್ಲೂಕು ಕುಂಬಾರರ ಸಂಘದ ಅಧ್ಯಕ್ಷ ಬಿ.ಆರ್.ಜಯಪ್ರಕಾಶ್, ಮುಖಂಡರಾದ ಎಂ.ಬಿ.ಅಶೋಕ್ ಕುಮಾರ್, ಕೆ.ಪರಮೇಶ್, ಹುಣಸೇಮಕ್ಕಿ ಲಕ್ಷ್ಮಣ್ ಮತ್ತಿತರರು ಕಾರ್ಯಕ್ರಮದಲ್ಲಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಸಿ.ರಮೇಶ್ ಅವರು ಸ್ವಾಗತಿಸಿದರು.

The three maxims of the omniscient are the healing powers that correct the crookedness of society.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...