Home namma chikmagalur chikamagalur ಆಸ್ತಿ ವಿವಾದ – ಪೊಲೀಸ್ ಠಾಣೆಯ ಮುಂದೆಯೇ ಆತ್ಮಹತ್ಯೆಗೆ ಯತ್ನ
chikamagalurCrime NewsHomeLatest Newsnamma chikmagalur

ಆಸ್ತಿ ವಿವಾದ – ಪೊಲೀಸ್ ಠಾಣೆಯ ಮುಂದೆಯೇ ಆತ್ಮಹತ್ಯೆಗೆ ಯತ್ನ

Share
Share

ಚಿಕ್ಕಮಗಳೂರು: ಆಸ್ತಿ ವಿವಾದವೊಂದು ಭೀಕರ ಸ್ವರೂಪ ಪಡೆದುಕೊಂಡಿದೆ. ತಂದೆ ತಾಯಿ ಹಾಗೂ ತಂಗಿಯನ್ನು ಕಳೆದುಕೊಂಡು ಅನಾಥನಾಗಿದ್ದ ಯುವಕನೋರ್ವ ಪೊಲೀಸ್ ಠಾಣೆಯ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಾಫಿನಾಡನ್ನು ಬೆಚ್ಚಿಬೀಳಿಸಿದೆ.

ನಗರದ ಪುನೀತ್‌ ಅಲಿಯಾಸ್ ಅಪ್ಪು ಎಂಬ ಯುವಕ ತನ್ನ ಪೋಷಕರು ಬಿಟ್ಟುಹೋಗಿದ್ದ ಎರಡು ಸಣ್ಣ ಮನೆಗಳ ಹಕ್ಕಿಗಾಗಿ ಹೋರಾಡುತ್ತಿದ್ದನು. ಆದರೆ ಆತನ ಸ್ವಂತ ಅತ್ತೆಯೇ ಈ ಆಸ್ತಿಗೆ ಅಡ್ಡಗಾಲಾಗಿದ್ದು, ಪುನೀತ್ ತಂದೆ ತಮ್ಮ ಬಳಿ ಹಣ ಪಡೆದಿದ್ದಾರೆ ಎಂಬ ಕಾರಣ ನೀಡಿ ಮನೆ ಬಿಟ್ಟುಕೊಡಲು ನಿರಾಕರಿಸಿದ್ದರು. ಎನ್ನಲಾಗಿದೆ.

ಈ ಸಂಬಂಧ ನ್ಯಾಯ ಕೇಳಲು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಗೆ ಬಂದಿದ್ದ ಪುನೀತ್, ಅಲ್ಲಿಯೂ ತನಗೆ ನ್ಯಾಯ ಸಿಗುವುದಿಲ್ಲ ಎಂಬ ಹತಾಶೆಯಿಂದ ಪೊಲೀಸರ ಕಣ್ಣೆದುರೇ ಬೇಡ್‌ನಿಂದ ತನ್ನ ಕತ್ತು ಕುಯ್ದುಕೊಂಡಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕನನ್ನು ತಕ್ಷಣವೇ ಪೊಲೀಸರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಕುತ್ತಿಗೆಯ ಭಾಗದಲ್ಲಿ ತೀವ್ರ ಗಾಯವಾಗಿದ್ದ ಕಾರಣ ವೈದ್ಯರು 11 ಹೊಲಿಗೆಗಳನ್ನು ಹಾಕಿದ್ದಾರೆ.

ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಪುನೀತ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬೆನ್ನಲ್ಲೇ ಪೊಲೀಸರ ಕಣ್ಣು ತಪ್ಪಿಸಿ ಅಲ್ಲಿಂದ ಪರಾರಿಯಾಗಿದ್ದಾನೆ. ಪ್ರಸ್ತುತ ಆತನ ಅತ್ತೆ ಶಿವಮೊಗ್ಗದಲ್ಲಿದ್ದು, ಆಸ್ತಿಗಾಗಿ ಸಂಬಂಧಗಳು ಹೇಗೆ ಬಲಿಯಾಗುತ್ತಿವೆ ಎಂಬುದಕ್ಕೆ ಈ ಘಟನೆ ಕನ್ನಡಿ ಹಿಡಿದಿದೆ. ಈ ಸಂಬಂಧ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ

ಒಟ್ಟಾರೆಯಾಗಿ, ಆಸ್ತಿಗಾಗಿ ಹುಟ್ಟಿದ ಹಠ ಅನಾಥ ಯುವಕನೊಬ್ಬನನ್ನು ಸಾವಿನ ಕೂಪಕ್ಕೆ ತಳ್ಳುವ ಹಂತಕ್ಕೆ ತಲುಪಿದ್ದು, ಮನುಷ್ಯ ಸಂಬಂಧಗಳ ನಡುವಿನ ಕಂದಕವನ್ನು ಎತ್ತಿ ತೋರಿಸಿದೆ.

ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದರೂ ಹತಾಶೆಯಿಂದ ಈ ಸಾಹಸಕ್ಕೆ ಕೈಹಾಕಿದ ಪುನೀತ್‌ನ ಪರಿಸ್ಥಿತಿ ಈಗ ಸಾರ್ವಜನಿಕರಲ್ಲಿ ಮರುಕ ಉಂಟುಮಾಡಿದ್ದು ಯುವಕನಿಗೆ ಸೂಕ್ತ ನ್ಯಾಯ ಸಿಗಬೇಕು ಎಂಬ ಮಾತುಗಳು ಕೇಳಿ ಬಂದಿವೆ..

Property dispute – Suicide attempt in front of police station

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...