Home namma chikmagalur chikamagalur ಲಾಠಿ ಚಾರ್ಜ್ ಖಂಡಿಸಿ ಇಂದು ಶೃಂಗೇರಿ ಬಂದ್
chikamagalurHomeLatest Newsnamma chikmagalur

ಲಾಠಿ ಚಾರ್ಜ್ ಖಂಡಿಸಿ ಇಂದು ಶೃಂಗೇರಿ ಬಂದ್

Share
Share

ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಶವವನ್ನು ರಾಜ್ಯ ಹೆದ್ದಾರಿಯಲ್ಲಿ ಇಟ್ಟುಕೊಂಡು ಬೆಳಗ್ಗೆಯಿಂದ ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.

ಸಂಜೆ 6 ಗಂಟೆಯಾದರೂ ಪ್ರತಿಭಟನಾಕಾರರು ಮೃತದೇಹವನ್ನು ಬಿಟ್ಟುಕೊಡದೆ ರಸ್ತೆ ತಡೆ ಮುಂದುವರಿಸಿದ್ದರಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು,

ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾದ ಪೊಲೀಸರು, ಬಿಗಿ ರಕ್ಷಣೆಯೊಂದಿಗೆ ಮೃತದೇಹವನ್ನು ಅಂಬುಲೆನ್ಸ್‌ಗೆ ಸ್ಥಳಾಂತರಿಸಲು ಯತ್ನಿಸಿದರು.

ಈ ಸಂದರ್ಭದಲ್ಲಿ ಅಕ್ರೋಶಗೊಂಡ ಪ್ರತಿಭಟನಾಕಾರರು ಅಂಬುಲೆನ್ಸ್ ಸಂಚಾರಕ್ಕೆ ತೀವ್ರ ಅಡ್ಡಿಪಡಿಸಿದ್ದರಿಂದ ಪೊಲೀಸರು ಅನಿವಾರ್ಯವಾಗಿ ಲಾಠಿ ಪ್ರಹಾರ ನಡೆಸಬೇಕಾಯಿತು. ಲಾಠಿ ಚಾರ್ಜ್ ಆರಂಭವಾಗುತ್ತಿದ್ದಂತೆ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು.

ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಬೋರಮ್ಮ ಕುಟುಂಬಕ್ಕೆ ೨೦ಲಕ್ಷ ರೂ. ಪರಿಹಾರದ ಚೆಕನ್ನು ಶಾಸಕ ಟಿ.ಡಿ.ರಾಜೇಗೌಡ ಸಂತ್ರಸ್ತ ಕುಟುಂಬಕ್ಕೆ ಹಸ್ತಾಂತರಿಸಿದರು. ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ, ಡಿಎಫ್‌ಓ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

ಒಂದು ವಾರದ ಅವಧಿಯಲ್ಲಿ ಕಾಡಾನೆ ದಾಳಿಗೆ ಸಿಲುಕಿ ಇಬ್ಬರು ಕೂಲಿಕಾರ್ಮಿಕರು ಮೃತಪಟ್ಟ ಹಿನ್ನಲೆ ಇಲ್ಲಿನ ಸ್ಥಳೀಯರು ಮೃತದೇಹವಿಟ್ಟು ಬಾರೀ ಪ್ರತಿಭಟನೆ ನಡೆಸಿದರು. ರಸ್ತೆ ತಡೆಯನ್ನು ನಡೆಸಿದರು.

ಸ್ಥಳಕ್ಕೆ ಅಧಿಕಾರಿಗಳು ಬರುವಂತೆ ಪಟ್ಟುಹಿಡಿದರು. ಸ್ಥಳಕ್ಕೆ ಶಾಸಕ ಟಿ.ಡಿ.ರಾಜೇಗೌಡ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ಅಧಿಕಾರಿ ಸೇರಿದಂತೆ ಅಧಿಕಾರಿಗಳು ಆಗಮಿಸಿದ್ದು, ಸಂತ್ರಸ್ತ ಕುಟುಂಬಕ್ಕೆ ಪರಿಹಾರದ ಚೆಕ್ ಹಸ್ತಾಂತರಿಸಿದರು.

ಕಡಬಗೆರೆಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ನಡೆದ ಲಾಠಿ ಚಾರ್ಜ್ ಹಾಗೂ ರೈತರ ಬಂಧನವನ್ನು ಖಂಡಿಸಿ ಶೃಂಗೇರಿ ಕ್ಷೇತ್ರ ರೈತ ಒಕ್ಕೂಟವು ನಾಳೆ ಫೆಬ್ರವರಿ 23, ಸೋಮವಾರದಂದು ಕ್ಷೇತ್ರಾದ್ಯಂತ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಿದೆ.

ಶಾಂತಿಯುತವಾಗಿ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಅನ್ನದಾತರ ಮೇಲೆ ನಡೆದ ದೌರ್ಜನ್ಯವನ್ನು ಒಕ್ಕೂಟವು ತೀವ್ರವಾಗಿ ಖಂಡಿಸಿದ್ದು, ಈ ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಬಂದ್ ಆಚರಿಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಕ್ಷೇತ್ರದ ಎಲ್ಲಾ ರೈತ ಬಾಂಧವರು, ಸಾರ್ವಜನಿಕರು ಹಾಗೂ ವರ್ತಕರು ಸ್ವಯಂಪ್ರೇರಿತವಾಗಿ ತಮ್ಮ ವ್ಯವಹಾರಗಳನ್ನು ಸ್ಥಗಿತಗೊಳಿಸಿ, ಈ ಬಂದ್‌ನಲ್ಲಿ ಭಾಗವಹಿಸುವ ಮೂಲಕ ರೈತರ ಪರವಾಗಿ ನಿಲ್ಲಬೇಕೆಂದು ರೈತ ಒಕ್ಕೂಟ ಈ ಮೂಲಕ ವಿನಂತಿಸಿಕೊಂಡಿದೆ.

Sringeri bandh today to condemn lathi charge

Share

Leave a comment

Leave a Reply

Your email address will not be published. Required fields are marked *

Don't Miss

ಸಂತ ಸೇವಾಲಾಲ್ ಜಯಂತಿಯಲ್ಲಿ ಸರ್ಕಾರದ ವಿರುದ್ಧದ ಆಕ್ರೋಶ

ಚಿಕ್ಕಮಗಳೂರು: ಕಾಫಿನಾಡಿನ ಕುವೆಂಪು ಕಲಾ ಮಂದಿರದಲ್ಲಿ ಆಯೋಜಿಸಲಾಗಿದ್ದ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮವು ಸಂಭ್ರಮದ ಬದಲು ಸರ್ಕಾರದ ವಿರುದ್ಧದ ಆಕ್ರೋಶದ ಅಖಾಡವಾಗಿ ಮಾರ್ಪಟ್ಟಿತು. ಸಮಾರಂಭದಲ್ಲಿ ಶಾಸಕ ತಮ್ಮಯ್ಯ ಅವರು ಭಾಷಣ ಮಾಡಲು...

ಶ್ರೀ ಸಂತ ಸೇವಾಲಾಲ್ ತತ್ವಾದರ್ಶಗಳು ಮಾsರ್ಗದರ್ಶಿ:

ಚಿಕ್ಕಮಗಳೂರು:  ಹಿಂಸೆ, ಅಸಮಾನತೆ ಇರುವ ಪ್ರಸ್ತುತ ಸಮಾಜಕ್ಕೆ ಶ್ರೀ ಸಂತ ಸೇವಾಲಾಲ್ ಅವರ ತತ್ವಾದರ್ಶಗಳು ಮಾರ್ಗದರ್ಶನ ನೀಡುತ್ತವೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು. ಜಿಲ್ಲಾಡಳಿತ, ಬಂಜಾರ ಸಂಘದಿಂದ ಕುವೆಂಪು ಕಲಾಮಂದಿರದಲ್ಲಿ ಭಾನುವಾರ...

Related Articles

ಮೃತ ಕಾರ್ಮಿಕ ಮಹಿಳೆಯ ಶವವಿಟ್ಟು ಬೃಹತ್‌ ಪ್ರತಿಭಟನೆ

ಬಾಳೆಹೊನ್ನೂರು: ಹುಣಸೆಹಳ್ಳಿಪುರ ಸಮೀಪ ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಬೋರಮ್ಮ ಮೃತಪಟ್ಟ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅರಣ್ಯ...

ಕಾಡಾನೆ ದಾಳಿಗೆ ಮತ್ತೋಂದು ಕಾರ್ಮಿಕ ಮಹಿಳೆ ಸಾವು

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಾಡಾನೆ ದಾಳಿ ಮುಂದುವರಿದಿದ್ದು, ಒಂದೇ ವಾರದಲ್ಲೇ ಇಬ್ಬರು ಕಾರ್ಮಿಕರು ಬಲಿಯಾಗಿದ್ದಾರೆ. ಜಿಲ್ಲೆಯ ಮಲೆನಾಡು...

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ

ಚಿಕ್ಕಮಗಳೂರು: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನೆನ್ನೆ ಪೊಲೀಸ್ ಕಿರುಕುಳಕ್ಕೆ ವಿಧವೆ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವಂತಹ...

ಇಬ್ಬರು ಅಮಾಯಕರನ್ನು ಬಲಿಪಡೆದಿದ್ದ ಕಾಡಾನೆ ಸೆರೆ

ಚಿಕ್ಕಮಗಳೂರು: ಕಳೆದ ಒಂದು ವಾರದಿಂದ ಮಲೆನಾಡಿಗರ ನಿದ್ದೆಗೆಡಿಸಿ, ಇಬ್ಬರು ಅಮಾಯಕರನ್ನು ಬಲಿಪಡೆದಿದ್ದ ರಕ್ಕಸ ಕಾಡಾನೆ ಕೊನೆಗೂ...