Home namma chikmagalur chikamagalur ಫೆ.̄25ಕ್ಕೆ ಪೌರಕಾರ್ಮಿಕರಿಗೊಂದು ನಮನ
chikamagalurHomeLatest Newsnamma chikmagalur

ಫೆ.̄25ಕ್ಕೆ ಪೌರಕಾರ್ಮಿಕರಿಗೊಂದು ನಮನ

Share
Oplus_153223168
Share

ಚಿಕ್ಕಮಗಳೂರು: ಸ್ವಚ್ಛ ನಗರ ಸುಂದರ ಪರಿಸರ ಪೌರ ಕಾರ್ಮಿಕರ ಸೇವೆಗೆ ನಾಗರಿಕರ ನಮನ ಎಂಬ ಘೋಷವಾಕ್ಯದೊಂದಿಗೆ ಫೆ.೨೫ ರಂದು ಬೆಳಗ್ಗೆ ೧೦ ಗಂಟೆಗೆ ನಗರಸಭೆ ಆವರಣದಲ್ಲಿ ಪೌರಕಾರ್ಮಿಕರಿಗೊಂದು ನಮನ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಹರಿಚಿತ್ತ ಫೌಂಡೇಶನ್ ಸಂಸ್ಥಾಪಕ ಹರೀಶ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದ ಅಂಗವಾಗಿ ಪೌರ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಅಂದು ೨೫ ಪೌರಕಾರ್ಮಿಕರು ಹಾಗೂ ಸಾಧನೆ ಮಾಡಿರುವ ಸಾಧಕರನ್ನು ಸನ್ಮಾನಿಸಲು ನಿರ್ಧರಿಸಲಾಗಿದೆ ಎಂದರು.

ಇದೊಂದು ವಿನೂತನ, ವಿಭಿನ್ನ ಕಾರ್ಯಕ್ರಮವಾಗಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಎನ್.ಎಂ ನಾಗರಾಜ್ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರಕುಮಾರ್ ದಯಾಮ, ನಗರಸಭಾಧ್ಯಕ್ಷೆ ಶೀಲಾದಿನೇಶ್, ಪೌರಾಯುಕ್ತ ಬಿ.ಸಿ. ಬಸವರಾಜ್ ಮತ್ತಿತರರು ಭಾಗವಹಿಸಲಿದ್ದಾರೆಂದು ತಿಳಿಸಿದರು.

ಸಮಾಜದ ಮುಖ್ಯವಾದ ನೈರ್ಮಲ್ಯದ ಕಾಯಕ ಮಾಡುವ ಮೂಲಕ ಶುದ್ಧ ರಸ್ತೆ, ಸ್ವಚ್ಛ ಗಾಳಿ ಈ ಎಲ್ಲವುಗಳಿಗೂ ಪ್ರಮುಖರಾಗಿರುವ ಪೌರ ಕಾರ್ಮಿಕರನ್ನು ಗೌರವಿಸಿ ಸನ್ಮಾನಿಸಲು ತೀರ್ಮಾನಿಸಲಾಗಿದ್ದು, ಇವರು ಸಾರ್ವಜನಿಕರ ಆರೋಗ್ಯ ಕಾಪಾಡುವ ಕಾವಲುಗಾರರು ಎಂದು ಶ್ಲಾಘಿಸಿದರು.

ತಮ್ಮ ಆರೋಗ್ಯವನ್ನು ಲೆಕ್ಕಿಸದೆ ಜೀವವನ್ನು ಪಣಕಿಟ್ಟು ಅಮೂಲ್ಯವಾದ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರ ಸಮರ್ಪಣಾ ಮನೋಭಾವ ತ್ಯಾಗ ಜೀವಿಗಳಿಗೆ ಸಾರ್ವಜನಿಕವಾಗಿ ಅಭಿನಂದಿಸಲು ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪೌರಕಾರ್ಮಿಕರಿಗೆ ಇನ್ನಷ್ಟು ಶಕ್ತಿ ತುಂಬಲು ಪ್ರೇರೇಪಿಸಬೇಕೆಂದು ಮನವಿ ಮಾಡಿದರು.

ಹರಿಚಿತ್ತ ಫೌಂಡೇಶನ್ ವತಿಯಿಂದ ಹಲವಾರು ಸಾಮಾಜಿಕ ಕಾರ್ಯಗಳನ್ನು ನಡೆಸಲು ಮುಂದಾಗಿದ್ದು, ಈಗಾಗಲೇ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಕಸ ವಿಂಗಡಣೆ ಕುರಿತು ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುತ್ತಿದ್ದೇವೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಚೈತ್ರ, ರತ್ನ, ಭೂಮಿಕ ಟಿವಿ ಸಂಸ್ಥಾಪಕ ಅನಿಲ್‌ಆನಂದ್, ಪೌರ ಕಾರ್ಮಿಕ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

A tribute to civil servants on February 25th

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...