Home namma chikmagalur chikamagalur ಜೀವಹಾನಿ ತಪ್ಪಿಸಲು ಕರ್ನಾಟಕ ರಾಜ್ಯ ರೈತ ಸಂಘ ಮನವಿ
chikamagalurHomeLatest Newsnamma chikmagalur

ಜೀವಹಾನಿ ತಪ್ಪಿಸಲು ಕರ್ನಾಟಕ ರಾಜ್ಯ ರೈತ ಸಂಘ ಮನವಿ

Share
Share

ಚಿಕ್ಕಮಗಳೂರು: ಜಿಲ್ಲೆಯ ಕಾಡಂಚಿನ ಗ್ರಾಮಗಳೂ ಸೇರಿದಂತೆ ಕಾಡುಪ್ರಾಣಿಗಳಿಂದ ಆಗುತ್ತಿರುವ ಜೀವಹಾನಿಯನ್ನು ತಪ್ಪಿಸಲು ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಶಾಖೆ ಇಂದು ಮನವಿ ಸಲ್ಲಿಸಿದೆ.

ಪತ್ರಿಕಾ ಹೇಳಿಕೆಯಲ್ಲಿ ಈ ವಿಷಯ ತಿಳಿಸಿರುವ ರೈತ ಸಂಘದ ಜಿಲ್ಲಾಧ್ಯಕ್ಷ ಡಿ.ಮಹೇಶ್ ಅವರು ತಾಲ್ಲೂಕು ಹುಣಸೇಹಳ್ಳಿ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕ ಮಹಿಳೆಯ ಮೇಲೆ ಫೆ.೨೨ ರಂದು ದಾಳಿ ಮಾಡಿದ ಪರಿಣಾಮ ಮೃತಪಟ್ಟಿದ್ದಾರೆಂದು ಮನವಿಯಲ್ಲಿ ತಿಳಿಸಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿಗಳು ಮೃತ ಮಹಿಳೆಯ ಶವವನ್ನು ಟಾರ್ಪಲ್‌ನಲ್ಲಿ ಸುತ್ತಿ ಪಿಕಪ್ ವಾಹನದಲ್ಲಿ ಸಾಗಿಸಲು ಮುಂದಾಗಿರುವ ಅಮಾನವೀಯ ಕೃತ್ಯವನ್ನು ಖಂಡಿಸಿದ ಅವರು, ನಾಲ್ಕು ದಿನಗಳ ಅಂತರದಲ್ಲಿ ಕಾಡಾನೆ ದಾಳಿಗೆ ಎರಡು ಜೀವಗಳು ಬಲಿಯಾಗಿದ್ದು, ಈವರೆಗೆ ಒಟ್ಟು ೧೫ ಜನ ಗಾಯಗೊಂಡಿದ್ದು, ೧೦ ಜನ ಮೃತಪಟ್ಟಿದ್ದಾರೆಂದು ವಿವರಿಸಿದರು.

ಮಲೆನಾಡಿನ ಭಾಗದಲ್ಲಿ ಗ್ರಾಮಸ್ಥರು ಪ್ರಾಣವನ್ನು ಪಣಕ್ಕಿಟ್ಟು ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಸರ್ಕಾರ ಮಲೆನಾಡು ಹಾಗೂ ಬಯಲುಸೀಮೆಯ ಜನರಿಗೆ ಕಾಡುಪ್ರಾಣಿಗಳಿಂದ ಪ್ರಾಣಹಾನಿ ತಪ್ಪಿಸಲು ಮುಂದಾಗಬೇಕು, ಕೇವಲ ಪರಿಹಾರ ಘೋಷಿಸಿ ಕೈತೊಳೆದುಕೊಳುವಂತಾಗಬಾರದು ಎಂದು ತಿಳಿಸಿದ್ದಾರೆ.

ಕಾಡುಪ್ರಾಣಿಗಳ ಉಪಟಳ ಇದೇ ರೀತಿ ಮುಂದುವರೆದರೆ ಕೃಷಿ, ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ರೈತರಿಗೆ ತುಂಬಾ ತೊಂದರೆಯಾಗುತ್ತಿದ್ದು, ಟಿಂಟಕಲ್ ಬೇಲಿ, ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದ್ದರೂ ಈವರೆಗೆ ಕಾರ್ಯರೂಪಕ್ಕೆ ತಂದಿಲ್ಲ ಎಂದು ದೂರಿದ್ದಾರೆ.

ಕಾಡುಪ್ರಾಣಿಗಳು ಹಾಗೂ ಕಾಡಾನೆಗಳು ನಾಡಿಗೆ ಬರದಂತೆ ಅಗತ್ಯ ಇರುವ ಮೇವನ್ನು ಅರಣ್ಯ ಪ್ರದೇಶದಲ್ಲಿ ಪ್ರಕೃತಿದತ್ತವಾಗಿ ಅಭಿವೃದ್ಧಿಪಡಿಸುವ ವ್ಯವಸ್ಥೆಯನ್ನು ತುರ್ತಾಗಿ ಕೈಗೊಳ್ಳಬೇಕೆಂದು ಒತ್ತಾಯಿಸಿರುವ ಅವರು, ದಂಬದಹಳ್ಳಿ, ಮತ್ತಾವರ ಗ್ರಾಮಗಳ ಸುತ್ತಮುತ್ತ ಆನೆಗಳು ಓಡಾಡುತ್ತಿದ್ದು, ಕೂಡಲೇ ಸ್ಥಳಾಂತರಿಸುವಂತೆ ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಮುಖಂಡರಾದ ಗುರುಶಾಂತಪ್ಪ, ಕುಮಾರಸ್ವಾಮಿ, ಭದ್ರೇಗೌಡ, ಸಿದ್ದೇಗೌಡ, ದೇವರಾಜೇಗೌಡ, ಮತ್ತಿತರರು ಉಪಸ್ಥಿತರಿದ್ದರು.

Karnataka State Farmers’ Association appeals to avoid loss of life

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...