Home namma chikmagalur chikamagalur ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು
chikamagalurHomeLatest Newsnamma chikmagalur

ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು

Share
Share
ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ಕಾಡಾನೆಗಳು ಚಿಕ್ಕಮಗಳೂರು ನಗರದಿಂದ ಕೇವಲ 5 ಕಿಮೀ ದೂರದ ಮತ್ತಾವರ ಗ್ರಾಮದ ಹಾಸುಪಾಸಿನಲ್ಲಿ ಬೀಡು ಬಿಟ್ಟಿರುವುದು ಚಿಕ್ಕಮಗಳೂರು  ನಗರ ನಿವಾಸಿಗಳ ನಿದ್ದೆಗೆಡಿಸಿದೆ.
ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಕ್ಷರಶಃ ಮಲೆನಾಡಿಗರ ನೆಮ್ಮದಿ ಕೆಡಿಸಿದೆ. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಗಜಪಡೆಗಳ ಸಂಚಾರ ಮಿತಿಮೀರಿದ್ದು, ಕಾಫಿ ತೋಟದ ಕಾರ್ಮಿಕರು ಹಾಗೂ ಸ್ಥಳೀಯ ನಿವಾಸಿಗಳು ಪ್ರತಿ ಕ್ಷಣವೂ ಆತಂಕದಲ್ಲೇ ಬದುಕುವಂತಾಗಿದೆ.
ಇನ್ನೂ ​ಚಿಕ್ಕಮಗಳೂರು ನಗರಕ್ಕೆ ತೀರಾ ಸಮೀಪದಲ್ಲಿರುವ ಮತ್ತವರ ಮತ್ತು ನಲ್ಲೂರು ಗ್ರಾಮಗಳ ಸುತ್ತಮುತ್ತ 2 ಪುಂಡಾನೆಗಳು ಬೀಡುಬಿಟ್ಟಿವೆ. ಈ ಆನೆಗಳು ಎಸ್ಟೇಟ್‌ಗಳ ನಡುವೆ ಓಡಾಟ ನಡೆಸುತ್ತಿರುವುದರಿಂದ ತೋಟದ ಕೆಲಸಕ್ಕೆ ಹೋಗಲು ಕಾರ್ಮಿಕರು ಭಯಪಡುತ್ತಿದ್ದಾರೆ.
ಒಂಟಿ ಆನೆಗಳಷ್ಟೇ ಅಲ್ಲದೇ ಹಿಂಡು ಹಿಂಡಾಗಿ ಆನೆಗಳು ಕಾಣಿಸಿಕೊಳ್ಳುತ್ತಿರುವುದು ಕೃಷಿಕರ ನಿದ್ದೆಗೆಡಿಸಿದೆ. ಬೆಳೆ ಹಾನಿ ಭೀತಿಯ ಜೊತೆ ಜೀ ಭಯವೂ ಕಾಡುತ್ತಿದೆ. ​ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದ್ದು, ಸಾರ್ವಜನಿಕರು ಜಾಗರೂಕತೆಯಿಂದ ಇರಲು ಸೂಚಿಸಲಾಗಿದೆ.
Wild elephants approaching Chikmagalur city
Share

Leave a comment

Leave a Reply

Your email address will not be published. Required fields are marked *

Don't Miss

ಸರ್ವಜ್ಞರ ತ್ರಿಪದಿಗಳು ಸಮಾಜದ ಅಂಕುಡೊಂಕು ತಿದ್ದುವ ಚಿಕಿತ್ಸಕ ಶಕ್ತಿಗಳು

ಚಿಕ್ಕಮಗಳೂರು: ಕನ್ನಡದ ಮಹಾನ್ ಸಂತ, ಕವಿ ಮತ್ತು ದಾರ್ಶನಿಕ ಸರ್ವಜ್ಞರ ತ್ರಿಪದಿಗಳು ಕೇವಲ ಸಾಹಿತ್ಯವಲ್ಲ, ಅವು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಚಿಕಿತ್ಸಕ ಶಕ್ತಿಯಾಗಿವೆ ಎಂದು ಭಾರತ ಸರ್ಕಾರದ ರಾಜ್ಯ ಪರಿಸರ ಮೌಲ್ಯಮಾಪನ...

ರಸ್ತೆ ಅಪಘಾತದಲ್ಲಿ ಬೈಕ್ ಸಾವಾರನ ಸಾವು

ಎನ್. ಆರ್ ಪುರ: ಬಾಳೆಹೊನ್ನೂರು ಸಮೀಪದ ಮಸೀದಿಕೆರೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಮೃತರನ್ನು 21 ವರ್ಷದ ಗೋಕುಲ್ ಎಂದು...

Related Articles

ನಯನ ಔಟ್ -ಇಕ್ಕಟ್ಟಿನಲ್ಲಿ ತಮ್ಮಯ್ಯ ? ರಾಜೇಗೌಡ-ಆನಂದ್ ಸೇಫ್-ಶ್ರೀನಿವಾಸ್ ಗೆ ತ್ರೀ ಶಂಕು ಸ್ಥಿತಿ ?

ಚಿಕ್ಕಮಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಮೂರು ಬಣವಾಗಿರುವುದು ಸ್ಪಷ್ಟವಾಗಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಬಣ ,ಇನ್ನೊಂದು...

ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ

ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ  ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಬಿಸಿಯೂಟದ...

ಸಂಸ್ಕೃತಿ, ಸಾಹಿತ್ಯ, ಕಲೆಯಿಂದ ಸುಸಂಸ್ಕೃತ ಸಮುದಾಯ ಕಟ್ಟಲು ಸಾಧ್ಯ

ಚಿಕ್ಕಮಗಳೂರು: ಸಂಸ್ಕೃತಿ, ಸಾಹಿತ್ಯ, ಕಲೆಯ ಮೂಲಕ ಮಾತ್ರ ಸುಸಂಸ್ಕೃತ ಸಮುದಾಯವನ್ನು ಕಟ್ಟಬಹುದು ಎಂದು ಬಸವತತ್ವ ಪೀಠಾಧ್ಯಕ್ಷರಾದ...

2.25 ಲಕ್ಷ ರೂ ಮಾಂಗಲ್ಯ ಸರ ಕಳ್ಳತನ

ಚಿಕ್ಕಮಗಳೂರು:  ಚಂದ್ರನಗರ ನಿವಾಸಿ ವೃದ್ಧ ಮಹಿಳೆ ಒಬ್ಬರು ವಾಕ್ ಮಾಡುತ್ತಿದ್ದ ವೇಳೆ ಚಿನ್ನದ ಮಾಂಗಲ್ಯದ ಸರಗಳ್ಳತನ...