Home namma chikmagalur chikamagalur ಬಾಳೆಹೊನ್ನೂರಿನಲ್ಲಿ ನಡೆದ ಸಭೆಯಲ್ಲಿ ಅರಣ್ಯ ಸಚಿವರ ಭಾಷಣಕ್ಕೆ ಅಡ್ಡಿ
chikamagalurHomeLatest Newsnamma chikmagalur

ಬಾಳೆಹೊನ್ನೂರಿನಲ್ಲಿ ನಡೆದ ಸಭೆಯಲ್ಲಿ ಅರಣ್ಯ ಸಚಿವರ ಭಾಷಣಕ್ಕೆ ಅಡ್ಡಿ

Share
Share

ಎನ್.ಆರ್ ಪುರ: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ನೇತೃತ್ವದಲ್ಲಿ ನಡೆಯುತ್ತಿದ್ದ ಸಭೆಯು ತೀವ್ರ ಗದ್ದಲ ಮತ್ತು ವಾಗ್ವಾದಕ್ಕೆ ಸಾಕ್ಷಿಯಾಯಿತು.

ಕಾಡುಪ್ರಾಣಿ ಮಾನವ ಸಂಘರ್ಷ, ಬೆಳೆ ಹಾಗೂ ಜೀವ ಹಾನಿ ಮತ್ತು ಪರಿಹಾರದ ಕುರಿತು ಸಚಿವ ಈಶ್ವರ ಖಂಡ್ರೆ ಅವರು ರೈತರು ಹಾಗೂ ಬೆಳೆಗಾರರೊಂದಿಗೆ ಚರ್ಚೆ ನಡೆಸುತ್ತಿದ್ದ ವೇಳೆ ಸಚಿವರು, ಸೆಕ್ಷನ್ 4 ವಿಚಾರ ರಾತ್ರೋರಾತ್ರಿ ಪರಿಹಾರ ಕಂಡುಕೊಳ್ಳುವುದು ಕಷ್ಟ ಎಂದು ಹೇಳಿಕೆ ನೀಡಿದರು.

ಈ ಮಾತಿನಿಂದ ಅಸಮಾಧಾನಗೊಂಡ ಬಿಜೆಪಿ ಕಾರ್ಯಕರ್ತ ಅಂಬ್ಲೂರು ರಾಮಕೃಷ್ಣ ಜವಾಬ್ದಾರಿಯುತ ಸಚಿವರಾಗಿ ನೀವು ಇಂತಹ ಮಾತುಗಳನ್ನು ಹೇಳುವುದು ಸರಿಯಲ್ಲ ಎಂದು ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಿದರು.

ಸಚಿವರ ಭಾಷಣಕ್ಕೆ ಅಡ್ಡಿಪಡಿಸಿದ ಅಂಬೂರು ರಾಮಕೃಷ್ಣ ಅವರ ವಿರುದ್ಧ ಸ್ಥಳದಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಶಾಸಕ ರಾಜೇಗೌಡ ತೀವ್ರ ಆಕ್ರೋಶ ಹೊರಹಾಕಿದರು. ನಿಮ್ಮ ಸರ್ಕಾರ ಮತ್ತು ಸಚಿವರು ಅಧಿಕಾರದಲ್ಲಿದ್ದಾಗ ಈ ನಿಟ್ಟಿನಲ್ಲಿ ಏನು ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸುವ ಮೂಲಕ ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.

ಈ ವಾಗ್ವಾದದಿಂದಾಗಿ ಸಂವಾದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿ ಕೈಮೀರುತ್ತಿದ್ದಂತೆ ಎಎಸ್ಪಿ ಜಯಕುಮಾರ್ ಮತ್ತು ಅಲ್ಲಿದ್ದ ರೈತರು ಅಂಬೂರು ರಾಮಕೃಷ್ಣ ಅವರನ್ನು ಸಮಾಧಾನಪಡಿಸಿ ಗದ್ದಲವನ್ನು ತಣ್ಣಗಾಗಿಸಿದರು. ಅಂತಿಮವಾಗಿ ಗೊಂದಲದ ನಡುವೆಯೇ ಸಂವಾದ ಪುನಃ ಮುಂದುವರಿಯಿತು.

Forest Minister’s speech disrupted at meeting in Balehonnur

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...