Home namma chikmagalur chikamagalur ದುಬೈ ವಿಮಾನ ನಿಲ್ದಾಣದಲ್ಲಿ ಸಿಲುಕಿದ ಎಸ್.ಎಲ್.ಭೋಜೇಗೌಡ
chikamagalurHomeLatest Newsnamma chikmagalur

ದುಬೈ ವಿಮಾನ ನಿಲ್ದಾಣದಲ್ಲಿ ಸಿಲುಕಿದ ಎಸ್.ಎಲ್.ಭೋಜೇಗೌಡ

Share
Share

ಚಿಕ್ಕಮಗಳೂರು: ದುಬೈ ವಿಮಾನ ನಿಲ್ದಾಣದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಸಿಲುಕಿದ್ದಾರೆ.

ದುಬೈ ವಿಮಾನ ನಿಲ್ದಾಣದಿಂದ ಮಾತನಾಡಿದ ಅವರು, ‘ನಾನು ಜೊಹನ್ಸ್ ಬರ್ಗ್‌ನಿಂದ ದುಬೈ ಮೂಲಕ ಭಾರತಕ್ಕೆ ಬರಬೇಕಿತ್ತು. ದುಬೈನಲ್ಲಿ ಎಲ್ಲಾ ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ.
ವಿಮಾನದಲ್ಲಿ ಕುಳಿತಿದ್ದ ನಮ್ಮನ್ನು ಕೆಳಗೆ ಇಳಿಸಿದ್ದಾರೆ. ಮುಂದೆ ಏನು ಎಂಬುದನ್ನು ಯಾರೂ ಹೇಳುತ್ತಿಲ್ಲ’ ಎಂದರು.

ಇಲ್ಲಿರುವ ಎಲ್ಲರೂ ಆತಂಕದಲ್ಲಿದ್ದಾರೆ. ಊಟ-ತಿಂಡಿಗೂ ತೊಂದರೆಯಾಗಿದೆ. ಮೊಬೈಲ್ ದೂರವಾಣಿಯಲ್ಲಿ ಬ್ಯಾಟರಿ ಕೂಡ ಕಡಿಮೆಯಾಗಿದೆ. ವಿಮಾನ ನಿಲ್ದಾಣದಲ್ಲಿ ಜನ ಹೆಚ್ಚಾಗಿರುವುದರಿಂದ ಚಾರ್ಜ್ ಮಾಡಿಕೊಳ್ಳುವುದು ಕೂಡ ಕಷ್ಟವಿದೆ. ಏನು ಮಾಡಬೇಕು ಎಂಬುದನ್ನು ಯಾರೂ ಹೇಳುತ್ತಿಲ್ಲ ಎಂದು ಹೇಳಿದರು.

‘ವಿಸಾ ಇದ್ದವರು ಮಾತ್ರ ವಿಮಾನ ನಿಲ್ದಾಣದಿಂದ ಆಚೆ ಹೋಗಲು ಅವಕಾಶ ಇದೆ. ನನಗೆ ಅಮೆರಿಕ ವಿಸಾ ಇದೆ. ಆದರೆ, ಆಚೆ ಹೋದರೆ ಎಷ್ಟು ಸುರಕ್ಷಿತ ಎನ್ನುವುದು ಕೂಡ ಮುಖ್ಯ. ಆದ್ದರಿಂದ ಪತ್ನಿ ಜತೆಗೆ ಇಲ್ಲೇ ಇದ್ದೇನೆ. ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ. ಮುಂದೇನು ಎಂಬ ಆತಂಕವಿದೆ’ ಎಂದರು.

SL Bhojegowda stranded at Dubai airport

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...