Home namma chikmagalur chikamagalur ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ‘ಪೊಲೀಸ್ ಓಟ’
chikamagalurHomeLatest Newsnamma chikmagalur

ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ‘ಪೊಲೀಸ್ ಓಟ’

Share
Share

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಹಯೋಗದಲ್ಲಿ ‘ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಘೋಷವಾಕ್ಯದಡಿ ಆಯೋಜಿಸಿದ್ದ ‘ಪೊಲೀಸ್ ಓಟ’ (ಕರ್ನಾಟಕ ಪೊಲೀಸ್ ರನ್) ಸ್ಪರ್ಧೆಗೆ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಭಾನುವಾರ ಚಾಲನೆ ನೀಡಿದರು.

‘ಡ್ರಗ್ಸ್ ಮುಕ್ತ ಕರ್ನಾಟಕ’, ‘ಸೈಬರ್ ಅಪರಾಧ’ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಿದ್ದ ೧೦ ಕಿ.ಮೀ ಹಾಗೂ ೫ ಕಿ.ಮೀ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು

ಈ ಓಟದಲ್ಲಿ ಪೊಲೀಸ್ ಇಲಾಖೆ, ಎಸ್‌ಬಿಐ ಅಧಿಕಾರಿ ಸಿಬ್ಬಂದಿ, ಸಾವಿರಾರು ಮಂದಿ ವಿದ್ಯಾರ್ಥಿಗಳು, ಸರ್ಕಾರಿ, ಖಾಸಗಿ ಉದ್ಯೋಗಿಗಳು, ಸಂಘ ಸಂಸ್ಥೆಯ ಪ್ರತಿನಿಧಿಗಳು ಭಾಗವಹಿಸಿದರು. ಈ ವೇಳೆ ಜಿಲ್ಲಾಧಿಕಾರಿ ನಾಗರಾಜ್, ಸ್ಪರ್ಧಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಬಳಿಕ ಮಾತನಾಡಿದ ಅವರು, ಮಾದಕ ವಸ್ತುಗಳ ವ್ಯಸನಿಂದ ವಿದ್ಯಾರ್ಥಿಗಳಿಂದ ಹಿರಿಯವರ ವರೆಗೆ ಎಲ್ಲರೂ ಮುಕ್ತರಾಗಿರಬೇಕು. ಈ ಮೂಲಕ ಸದೃಢ ಆರೋಗ್ಯ ಕಾಪಾಡಿಕೊಳ್ಳಬೇಕು. ಆಗ ಮಾತ್ರ ಸದೃಢ ಮತ್ತು ಬಲಿಷ್ಠವಾದ ಸಮಾಜವನ್ನು ಕಟ್ಟಬಹುದಾಗಿದೆ. ಯಾವುದೇ ದೇಶದ ಮಾನವ ಸಂಪನ್ಮೂಲ ಗುಣಮಟ್ಟದಿಂದ ಕೂಡಿದರೆ ಅಲ್ಲಿನ ದುಡಿಮೆ, ಉತ್ತಮ ಕೌಶಲ್ಯ ಇರಲಿದೆ. ಆಗ ದೇಶ ಅಭಿವೃದ್ಧಿ ಕಡೆ ಸಾಗಲಿದೆ. ನಮಗೆ ಒಂದು ಅವಕಾಶ ಸಿಕ್ಕಿದ್ದು, ಸದೃಢವಾಗಿದ್ದು, ದೇಶಕ್ಕೆ ಕೊಡುಗೆ ನೀಡಬಹುದಾಗಿದೆ ಎಂದು ಹೇಳಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯಾದರ್ಶಿ ವಿ.ಹನುಮಂತಪ್ಪ ಮಾತನಾಡಿ, ಮಾದಕ ವ್ಯಸನ ಮುಕ್ತ ಕರ್ನಾಟಕ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಹಾಗೂ ಎಸ್‌ಬಿಐ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಯುವ ಜನತೆ ಮಾದಕ ವಸ್ತುಗಳ ವ್ಯಸನದಿಂದ ದೂರ ಇರಬೇಕು. ವ್ಯಸನ ಮುಕ್ತ ಭಾರತ ನಿರ್ಮಾಣ ಮಾಡುವ ನಿಟ್ಟಿನಲ್ಲಿ ನಾವೆಲ್ಲರೂ ಕೈ ಜೋಡಿಸೋಣ ಎಂದು ಕೆರೆ ನೀಡಿದರು.

ಈ ವೇಳೆ ಜಿಲ್ಲಾ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಾಯಾಮ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯಾನಿರ್ವಹಣಾಧಿಕಾರಿ ಕೀರ್ತನಾ, ಎಸ್‌ಬಿಐ ಪ್ರಾದೇಶಿಕ ವ್ಯವಸ್ಥಾಪಕ ಟಿ.ಎಂ.ರವಿ ಸೇರಿದಂತೆ ಮೊದಲಾದವರಿದ್ದರು.

‘Police run’ in the district stadium premises

 

 

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...