Home namma chikmagalur chikamagalur ದಲಿತರಿಗೆ ರಾಜ್ಯ ಬಜೆಟ್‌ನಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ ದಸಂಸ ಪ್ರತಿಭಟನೆ
chikamagalurHomeLatest Newsnamma chikmagalur

ದಲಿತರಿಗೆ ರಾಜ್ಯ ಬಜೆಟ್‌ನಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ ದಸಂಸ ಪ್ರತಿಭಟನೆ

Share
Share

ಚಿಕ್ಕಮಗಳೂರು: ದಲಿತ ಸಮುದಾಯಕ್ಕೆ ರಾಜ್ಯ ಬಜೆಟ್‌ನಲ್ಲಿ ಅನ್ಯಾಯಗವಾಗದೇ ಶೇ.೨೪.೧ ರಷ್ಟು ಜನಸಂಖ್ಯಾನುಸಾರವಾಗಿ ತಕ್ಕ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿ ದಲಿತ ಸಂ ಘರ್ಷ ಸಮಿತಿ ಮುಖಂಡರುಗಳು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಈ ಕುರಿತು ದಸಂಸ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಪಿ.ಟಿ.ಚಂದ್ರಶೇಖರ್ ಮಾತ ನಾಡಿ ಎಸ್‌ಸಿ, ಎಸ್ಟಿ ಮೀಸಲಾತಿಗೆ ನಿಗಧೀಪಡಿಸಿರುವ ಆಧಾಯ ಮಿತಿ ವಾರ್ಷಿಕ ೧೫ ಲಕ್ಷಕ್ಕೆ ಏರಿಸಬೇಕು. ಎಸ್‌ಸಿಪಿ, ಎಸ್‌ಪಿ ಹಣವನ್ನು ಬೇರೆ ಯೋಜನೆಗಳಿಗೆ ಬಳಸಬಾರದು ಹಾಗೂ ಬಳಸಿರುವ ಹಣವನ್ನು ವಾ ಪಸ್ ದಲಿತರ ಅಭಿವೃದ್ದಿಗೆ ಮೀಸಲಿಡಬೇಕು ಎಂದು ಹೇಳಿದರು.

ಕೆಎಸ್‌ಎಫ್‌ಸಿ ಮತ್ತು ಬ್ಯಾಂಕ್‌ಗಳಿಂದ ದಲಿತರಿಗೆ ಶೇ.೪ ಬಡ್ಡಿಯಂತೆ ೧೦ ಕೋಟಿ ರೂ.ವರೆಗೆ ಉದ್ಯಮ ನಡೆಸಲು ಸಾಲಸೌಲಭ್ಯ ನೀಡುವ ಯೋಜನೆಗಳಲ್ಲಿರುವ ಷರತ್ತುಗಳನ್ನು ಸಡಿಲಪಡಿಸಿ ನಗರ ಪ್ರದೇಶದಲ್ಲಿ ನಿವೇಶನ, ಮನೆ ಇತರೆ ಚರಾಸ್ತಿಗಳ ಕೋಲ್ಯಾಟರಲ್ ಇರಬೇಕು ಎಂಬ ನಿಯಮ ಸಡಿಲಪಡಿಸಬೇಕು ಎಂ ದು ತಿಳಿಸಿದರು.

ಎಸ್ಸಿ,ಎಸ್ಟಿ ಹಾಸ್ಟೆಲ್‌ಗಳಿಗೆ ಪೀಠೋಪಕರಣ, ಪಾಠೋಪಕರಣಗಳು ಸಮರ್ಪಕವಾಗಿ ಪೂರೈಕೆ ಮಾಡ ಬೇಕು. ಹಾಸ್ಟೆಲ್ ಬಯಸಿ ಅರ್ಜಿ ಸಲ್ಲಿಸುವ ಎಲ್ಲಾ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪ್ರವೇಶವನ್ನು ನೀಡಬೇಕು. ಪ್ರತಿ ಗ್ರಾಮದಲ್ಲಿ ದಲಿತರಿಗೆ ಸ್ಮಶಾನ ಭೂಮಿ ಇರಿಸಬೇಕು. ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಎ ಲ್ಲಾ ನಿಗಮ ಮಂಡಳಿಗೆ ಸಾಲಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹ ಫಲಾನುಭವಿಗೆ ಸಾಲ ಮಂಜೂರು ಮಾಡಬೇ ಕು ಎಂದು ಹೇಳಿದರು.

ರಾಜ್ಯದಲ್ಲಿ ನಾಗರೀಕ ಹಕ್ಕುಗಳ ರಕ್ಷಣೆ ಕಾಯಿದೆ ಮತ್ತು ದೌರ್ಜನ್ಯ ತಡೆಕಾಯ್ದೆಗಳ ಅನುಷ್ಟಾನ ಸಮ ರ್ಪಕವಾಗಿ ಆಗುತ್ತಿಲ್ಲ. ಅಪರಾಧಗಳ ಪತ್ತೆ ಮತ್ತು ವಿಚಾರಣೆ ಸರಿಯಾಗಿ ನಡೆದು ರಕ್ಷಣೆಯಾಗುವ ಪ್ರಮಾಣ ಸರಿಯಾಗಿ ಆಗುವಂತೆ ನಿಗಾವಹಿಸಲು ಪ್ರತ್ಯೇಕ ಸಮಿತಿಯನ್ನು ಸ್ಥಾಪಿಸಬೇಕು ಎಂದರು.

ಅರ್ಚಕ ಮತ್ತು ಪೌರಕಾರ್ಮಿಕ ವೃತ್ತಿಯನ್ನು ಸಾರ್ವತ್ರಿಕಗೊಳಿಸಬೇಕು. ಈ ಎರಡು ವೃತ್ತಿಗಳಲ್ಲಿ ಮೀ ಸಲಾತಿ ನೀತಿಯನ್ನು ಅನುಷ್ಟಾನಕ್ಕೆ ತರಬೇಕು. ಹಂಗಾಮಿ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು. ಖಾಸಗೀ ಕ್ಷೇತ್ರಗಳಲ್ಲಿ ಸಾಮಾಜಿಕ ನ್ಯಾಯದ ಹಿನ್ನೆಲೆಯ ಮೀಸಲಾತಿಯನ್ನು ಜಾರಿಗೊಳಿಸಬೇಕು. ಎಸ್ಸಿ, ಎಸ್ಟಿ ಸಮುದಾಯ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ತಿಳಿಸಿದರು.

ಆ ನಿಟ್ಟಿನಲ್ಲಿ ರಾಜ್ಯಾದ್ಯಂತ ಇಂದು ಪ್ರತಿ ಜಿಲ್ಲಾ ಕೇಂದ್ರದಲ್ಲಿ ದಸಂಸ ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ದಲಿತರ ಅಭಿವೃದ್ದಿಗೆ ಅನುದಾನ ಮೀಸಲಿರಿಸಿ, ದಲಿತರಿಗೆ ಬಳಸಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ದಸಂಸ ಮುಖಂಡರಾದ ಅಶೋಕ್ ರಾಜರತ್ನಂ, ಸುರೇಶ್, ರವೀಂದ್ರ, ಪುಟ್ಟಸ್ವಾ ಮಿ, ದಿವಾಕರ್, ಮರ್ಲೆ ಅಣ್ಣಯ್ಯ, ಶ್ರೀನಿವಾಸ್, ಸಣ್ಣಯ್ಯ, ಕೃಷ್ಣಮೂರ್ತಿ, ಮಂಜಯ್ಯ, ಸ್ಪಂದನ, ಸುಜಾತ, ಗಿರಿಜ, ಶಾರದ, ಭೀಮಯ್ಯ ಮತ್ತಿತರರು ಹಾಜರಿದ್ದರು.

Dasamsa protests demanding justice for Dalits in state budget

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...