Home namma chikmagalur chikamagalur ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್ ಸರ್ವಕಾಲಿಕ ದಾಖಲೆಯ ಬಜೆಟ್ ಆಗಲಿದೆ
chikamagalurHomeLatest Newsnamma chikmagalur

ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್ ಸರ್ವಕಾಲಿಕ ದಾಖಲೆಯ ಬಜೆಟ್ ಆಗಲಿದೆ

Share
???????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Share

ಚಿಕ್ಕಮಗಳೂರು: ಸಿದ್ದರಾಮಯ್ಯನವರು ಮಂಡಿಸಲಿರುವ ಬಜೆಟ್ ಸರ್ವಕಾಲಿಕ ದಾಖಲೆಯ ಬಜೆಟ್ ಆಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಭವಿಷ್ಯ ನುಡಿದರು

ಸುದ್ದಿಗೋಷ್ಠಿಯಲ್ಲಿ ಮಾತನಾಡಿ ರಾಜ್ಯ ಸರ್ಕಾರದ ಆರ್ಥಿಕ ನೀತಿ ಹಾಗೂ ಮುಂಬರುವ ಬಜೆಟ್ ಕುರಿತು  ತೀವ್ರ ವಾಗ್ದಾಳಿ ನಡೆಸಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಲಿರುವ ಬಜೆಟ್ ಸರ್ವಕಾಲಿಕ ದಾಖಲೆಯ ಬಜೆಟ್ ಆಗಲಿದೆ ಎಂದು ಭವಿಷ್ಯ ನುಡಿದಿದರು

ಕಳೆದ ಮೂರು ವರ್ಷಗಳಿಂದ ಗ್ಯಾರಂಟಿ ಯೋಜನೆಗಳಿಗಾಗಿ ಎಸ್ಸಿ-ಎಸ್ಟಿ ಸಮುದಾಯದ ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ವರ್ಷವೂ ಕೂಡ ಸುಮಾರು 15 ಸಾವಿರ ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ಅನುಮಾನವಿದ್ದು, ಒಂದು ವೇಳೆ ಹಾಗೆ ಮಾಡಿದರೆ ಒಟ್ಟು ಮೊತ್ತ 54 ಸಾವಿರ ಕೋಟಿಗೆ ತಲುಪಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಹಿಂದಿನ ಅನ್ಯಾಯಗಳನ್ನು ಸರಿಪಡಿಸಿ, ಈ ಬಾರಿ ಹಣವನ್ನು ಬೇರೆಡೆಗೆ ಬಳಸಿಕೊಳ್ಳುವುದಿಲ್ಲ ಎಂದು ಬಜೆಟ್‌ನಲ್ಲಿ ಅಧಿಕೃತವಾಗಿ ಘೋಷಿಸಬೇಕು ಹಾಗೂ ಕೂಡಲೇ ಬಾಕಿ ಇರುವ 39 ಸಾವಿರ ಕೋಟಿ ರೂಪಾಯಿಗಳನ್ನು ವಾಪಸ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದ ಅವರು, ಪ್ರಸ್ತುತ ರಾಜ್ಯದ ಒಟ್ಟು ಸಾಲ 8 ಲಕ್ಷ 14 ಸಾವಿರ ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ ಮತ್ತು ಕಳೆದ ವರ್ಷವೊಂದರಲ್ಲೇ 1 ಲಕ್ಷದ 14 ಸಾವಿರ ಕೋಟಿ ಸಾಲ ಮಾಡಲಾಗಿದೆ ಎಂದು ತಿಳಿಸಿದರು. ಅತಿ ಹೆಚ್ಚು ಬಜೆಟ್ ಮಂಡಿಸಿದ ಹಾಗೂ ಅತಿ ಹೆಚ್ಚು ಸಾಲ ಮಾಡಿದ ಖ್ಯಾತಿ ಸಿದ್ದರಾಮಯ್ಯನವರ ಹೆಸರಿನಲ್ಲಿದೆ ಎಂದು ವ್ಯಂಗ್ಯವಾಡಿದರು.

ರವಿ, ಇದು ‘ಚಾಣಾಕ್ಯ ನೀತಿ’ಯಲ್ಲ ಬದಲಾಗಿ ಬೆಲೆ ಏರಿಕೆ ಮಾಡಿ ಖಜಾನೆ ತುಂಬಿಸುವ ಹಾಗೂ ಸಾಲ ಮಾಡಿಯಾದರೂ ಮಜಾ ಮಾಡು ಎನ್ನುವ ‘ಚಾರ್ವಾಕ ನೀತಿ’ ಎಂದು ಟೀಕಿಸಿದ್ದಾರೆ. 2025 26ನೇ ಸಾಲಿನಲ್ಲಿ ಬಡ್ಡಿ ಕಟ್ಟುವುದಕ್ಕಾಗಿಯೇ 48 ಸಾವಿರ ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದ್ದು, ಇಷ್ಟೆಲ್ಲ ಸಾಲದ ಹೊರತಾಗಿಯೂ ಔಷಧಿ ಖರೀದಿ, ನಿಗಮ ಮಂಡಳಿಗಳಿಗೆ ಅನುದಾನವಿಲ್ಲ ಮತ್ತು ಗುತ್ತಿಗೆದಾರರಿಗೆ 38 ಸಾವಿರ ಕೋಟಿ ರೂಪಾಯಿ ಬಾಕಿ ಉಳಿಸಿಕೊಳ್ಳಲಾಗಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.

ಅಗತ್ಯ ವಸ್ತುಗಳ ಬೆಲೆ ಏರಿಕೆಯಾದರೂ ಸರ್ಕಾರದ ಖಜಾನೆ ತುಂಬದಿರುವುದು ಹಣ ಸೋರಿಕೆಯಾಗುತ್ತಿರುವ ಅನುಮಾನ ಮೂಡಿಸುತ್ತಿದೆ ಎಂದ ಅವರು, ಕೆ.ಪಿ.ಎಸ್.ಸಿ. ಹಗರಣವನ್ನು ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸುವುದರ ಜೊತೆಗೆ, ದಾಖಲೆ ಬಜೆಟ್ ಮಂಡಿಸಲಿರುವ ಸಿಎಂಗೆ ಶುಭ ಹಾರೈಸಿ ಅನ್ಯಾಯಗಳನ್ನು ಸರಿಪಡಿಸುವಂತೆ ಮನವಿ ಮಾಡಿದರು.

Siddaramaiah’s budget to be presented will be an all-time record budget

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...