Home ರಾಜ್ಯ ಸರ್ಕಾರದ ವಿರುದ್ಧ ಎದ್ದೇಳು ಕರ್ನಾಟಕ ಪ್ರತಿಭಟನೆ
HomeLatest Newsnamma chikmagalur

ರಾಜ್ಯ ಸರ್ಕಾರದ ವಿರುದ್ಧ ಎದ್ದೇಳು ಕರ್ನಾಟಕ ಪ್ರತಿಭಟನೆ

Share
Share

ಚಿಕ್ಕಮಗಳೂರು:  ಗುರುದತ್ತಾತ್ರೇಯ ಬಾಬಬುಡನ್ ದರ್ಗಾದಲ್ಲಿ ಜ್ಯಾತ್ಯತೀತವಾಗಿ ಉರೂಸ್ ನಡೆಸಲು ಜಿಲ್ಲಾಡಳಿತ ಅವಕಾಶ ನೀಡಿಲ್ಲ ಎಂದು ಆರೋಪಿಸಿ ಪ್ರತಿಭಟನೆಗೆ ಮುಂದಾದ ಎದ್ದೇಳು ಕರ್ನಾಟಕ ರಾಜ್ಯ ಸಮಿತಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿದ ಮುಖಂಡರು, ಐಡಿ ಪೀಠ ಗ್ರಾಮದ ಬಾಬಾ ಬುಡನ್ ದರ್ಗಾದಲ್ಲಿ ಬುಧವಾರ ಜಿಲ್ಲಾಡಳಿತ ಉರೂಸ್‌ಗೆ ಚಾಲನೆ ನೀಡಿದ್ದು, ಈ ವೇಳೆ ಜಿಲ್ಲಾಡಳಿತ ನ್ಯಾಯಾಲಯದ ಆದೇಶಗಳನ್ನು ಗಾಳಿಗೆ ತೂರಿದೆ, ಅಲ್ಲದೇ ಸಂವಿಧಾನಿಕ ಜಾತ್ಯತೀತ ತತ್ವಗಳಿಗೆ ತಿಲಾಂಜನ ಹಾಡಿದೆ ಎಂದು ಆಕ್ರೋಷ ವ್ಯಕ್ತಪಡಿಸಿದರು.

ಬಾಬಾ ಬುಡನ್ ದರ್ಗಾದಲ್ಲಿ ಸಂಘಪರಿವಾರ ನಡೆಸುವ ದತ್ತಜಯಂತಿಯಂತಹ ಧಾರ್ಮಿಕ ಆಚರಣೆಗಳ ವೇಳೆ ಮನುವಾದಿಗಳ ತಾಳಕ್ಕೆ ತಕ್ಕಂತೆ ಕುಣಿಯುವ ಜಿಲ್ಲಾಡಳಿತ ತಲತಲಾಂತಗಳಿಂದ ರೂಢಿಯಲ್ಲಿರುವ ಉರೂಸ್ ಆಚರಣೆ ವೇಳೆ ತಾರತಮ್ಯ ಮಾಡುತ್ತಿದೆ. ಈ ಮೂಲಕ ಒಂದು ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡುತ್ತಿದೆ ಎಂದು ಆರೋಪಿಸಿದರು.

ಹಿಂದಿನ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ನ್ಯಾಯಮೂರ್ತಿ ನಾಗಮೋಹನ್‌ದಾಸ್ ನೇತೃತ್ವದ ಸಮಿತಿ ನೀಡಿದ ವರದಿಯಂತೆ ಉರೂಸ್ ನಡೆಸಲು ಜಿಲ್ಲಾಡಳಿತ ಅವಕಾಶ ನೀಡಬೇಕಾಗಿತ್ತು, ಆದರೆ ಜಿಲ್ಲಾಡಳಿತ ಉರೂಸ್ ಸಂದರ್ಭದಲ್ಲಿ ದರ್ಗಾದ ಆವರಣದಲ್ಲಿರುವ ಗೋರಿಗಳಿಗೆ ಹಸಿರು ಬಟ್ಟೆ ಹಾಕಲು ಅವಕಾಶ ನೀಡಿಲ್ಲ. ಶಾಖಾದ್ರಿ, ಸಜ್ಜಾದ್ ಎ ನಿಶಾನ್ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗೂ ಜಿಲ್ಲಾಡಳಿತ ಅವಕಾಶ ನೀಡದೇ ಸಂವಿಧಾನದ ಜಾತ್ಯತೀತ ತತ್ವಗಳನ್ನು ಗಾಳಿಗೆ ತೂರಲಾಗಿದೆ ಎಂದು ದೂರಿದರು.

ಬಿ.ಜೆ.ಪಿ. ಸರಕಾರದ ಅವಧಿಯಲ್ಲಿ ಸಚಿವರಾದ ಮಾಧುಸ್ವಾಮಿ, ಅಂಗಾರ ಹಾಗೂ ಶಶಿಕಲಾ ಜೊಲ್ಲೆ ನೇತೃತ್ವದ ಉಪ ಸಮಿತಿ ಎರಡು ಸಮುದಾಯದ ಮಹಿಳೆಯರನ್ನೊಳಗೊಂಡಂತೆ ೮ ಜನ ಸದಸ್ಯರ ವ್ಯವಸ್ಥಾಪನಾ ಸಮಿತಿ ರಚನೆ ಮಾಡಿತ್ತು. ಅಲ್ಲದೇ ದರ್ಗಾದಲ್ಲಿ ಯಾವ ಯಾವ ಆಚರಣೆಗಳನ್ನು ನಡೆಸಬೇಕೆಂದೂ ಹೇಳಿತ್ತು ಎಂದರು.

ಗುರುದತ್ತಾತ್ರೇಯ ಬಾಬಬುಡನ್ ದರ್ಗಾದಲ್ಲಿ ವ್ಯವಸ್ಥಾಪನಾಸಮಿತಿಯ ಅವಧಿಪೂರ್ಣಗೊಂಡಿದ್ದು, ರಾಜ್ಯದ ಕಾಂಗ್ರೆಸ್ ಸರಕಾರ ಹೊಸ ಸಮಿತಿಯನ್ನು ರಚನೆ ಮಾಡದೇ ಮುಸ್ಲಿಂದ ಸಮುದಾಯಕ್ಕೆ ಅನ್ಯಾಯ ಮಾಡಿದೆ ಎಂದು ದೂರಿದರು.

ರಾಜ್ಯ ಸರಕಾರ ಈ ಸಂಬಂಧ ಕೂಡಲೇ ನ್ಯಾಯಬದ್ಧ ತೀರ್ಪು ತೆಗೆದುಕೊಳ್ಳಬೇಕು, ಹಾಗೆಯೇ ನಾಗಮೋಹನ್ ದಾಸ್ ವರದಿಯನ್ನು ಸಂಪೂರ್ಣವಾಗಿ ಜಾರಿ ಮಾಡಬೇಕು, ತಪ್ಪಿದಲ್ಲಿ ಎದ್ದೇಳು ಕರ್ನಾಟಕ ರಾಜ್ಯಾದ್ಯಂತ ಉಗ್ರ ಹೋರಾಟಕ್ಕೆ ಅಣಿಯಾಗಲಿದೆ ಎಂದು ಎಚ್ಚರಿಸಿದರು.

ಈ ವೇಳೆ ನಮ್ಮ ನಡೆ ಗಿರಿ ಕಡೆ ಎಂಬ ಘೋಷಣೆಯೊಂದಿಗೆ ಮುಖಂಡರು ಜಿಲ್ಲಾಧಿಕಾರಿ ಕಚೇರಿಯತ್ತ ಹೊರಟರು, ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಮುಖಂಡರನ್ನು ತಡೆದರು, ಈ ವೇಳೆ ಪೊಲೀಸರು ಮತ್ತು ಹೋರಾಟಗಾರರ ನಡುವೆ ಕೆಲ ಹೊತ್ತು ಮಾತಿನ ಚಕಮಕಿ ನಡೆಯಿತು. ಈ ವೇಳೆ ಮುಖಂಡರನ್ನು ಪೊಲೀಸರು ಬಂಧಿಸಿದರು.

ಎದ್ದೇಳು ಕರ್ನಾಟಕ ರಾಜ್ಯ ಸಮಿತಿ ಸಂಚಾಲಕರಾದ ಕೆ.ಎಲ್.ಅಶೋಕ್, ಗೌಸ್ ಮೊಹಿದ್ದೀನ್, ವೆಂಕಟೇಶ್ ಹಾಗಲಗಂಚಿ, ಗೌಸ್ ಮುನೀರ್ ಹಾಗೂ ವಿವಿಧ ಸಂಘಟನೆಗಳ ಮುಖಂಡರಾದ ಅಜ್ಮತ್ ಪಾಶ, ಜಂಶೀದ್‌ಖಾನ್, ಗಣೇಶ್ ಮತ್ತಿತರರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಸಮಾವೇಶಗೊಂಡು ಜಿಲ್ಲಾಡಳಿತ ಹಾಗೂ ರಾಜ್ಯ ಸರಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Rise up Karnataka protest against the state government

Share

Leave a comment

Leave a Reply

Your email address will not be published. Required fields are marked *

Don't Miss

ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ

ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ  ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಬಿಸಿಯೂಟದ ಕೋಣೆಯಲ್ಲಿ ಮಕ್ಕಳಿಗೆ ಹಾಲು ಕಾಯಿಸುವ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಕ್ಷಣಾರ್ಧದಲ್ಲಿ ಅಡುಗೆ ಪಾತ್ರೆಗಳು...

ಸಂಸ್ಕೃತಿ, ಸಾಹಿತ್ಯ, ಕಲೆಯಿಂದ ಸುಸಂಸ್ಕೃತ ಸಮುದಾಯ ಕಟ್ಟಲು ಸಾಧ್ಯ

ಚಿಕ್ಕಮಗಳೂರು: ಸಂಸ್ಕೃತಿ, ಸಾಹಿತ್ಯ, ಕಲೆಯ ಮೂಲಕ ಮಾತ್ರ ಸುಸಂಸ್ಕೃತ ಸಮುದಾಯವನ್ನು ಕಟ್ಟಬಹುದು ಎಂದು ಬಸವತತ್ವ ಪೀಠಾಧ್ಯಕ್ಷರಾದ ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ತಿಳಿಸಿದರು. ದೊಡ್ಡ ಕುರುಬರಹಳ್ಳಿಯ ಬಸವತತ್ವ ಪೀಠದ ಆವರಣದಲ್ಲಿ ಕರ್ನಾಟಕ...

Related Articles

ಆಧುನಿಕ ಸೌಲಭ್ಯಗಳೊಂದಿಗೆ ಮಿಲನ್ ಚಿತ್ರಮಂದಿರ ಪುನರಾರಂಭ

ಚಿಕ್ಕಮಗಳೂರು: ದಶಕಗಳ ಕಾಲ ಸಿನಿ ರಸಿಕರಿಗೆ ಭರಪೂರ ಮನರಂಜನೆ ಒದಗಿಸಿ ಕಳೆದೆರಡು ವರ್ಷಗಳ ಹಿಂದೆ ಮುಚ್ಚಲ್ಪಟ್ಟಿದ್ದ...

ದೇವನೂರು ಸರ್ಕಾರಿ ಶಾಲೆ ನೂತನ ಕಟ್ಟಡ ಜೂನ್‌ನಲ್ಲಿ ಉದ್ಘಾಟನೆ

ಚಿಕ್ಕಮಗಳೂರು: ಕಡೂರು ತಾಲ್ಲೂಕು ದೇವನೂರಿನ ಸರ್ಕಾರಿ ಶಾಲೆಯಲ್ಲಿ ೧೨೨ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ೫೦ ಲಕ್ಷ...

ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್ ಸರ್ವಕಾಲಿಕ ದಾಖಲೆಯ ಬಜೆಟ್ ಆಗಲಿದೆ

ಚಿಕ್ಕಮಗಳೂರು: ಸಿದ್ದರಾಮಯ್ಯನವರು ಮಂಡಿಸಲಿರುವ ಬಜೆಟ್ ಸರ್ವಕಾಲಿಕ ದಾಖಲೆಯ ಬಜೆಟ್ ಆಗಲಿದೆ ಎಂದು ವಿಧಾನ ಪರಿಷತ್ ಸದಸ್ಯ...

ಕೊಪ್ಪ ಪಟ್ಟಣದ ಮನೆಯಲ್ಲಿ ಚಿನ್ನಾಭರಣ ಕಳ್ಳತನ

ಕೊಪ್ಪ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಕೈಚಳಕ ತೋರಿಸುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ...