Home namma chikmagalur chikamagalur ಅಪರಿಚಿತ ಲಿಂಕ್ ಕ್ಲಿಕ್ಕಿಸಿದ್ದಕ್ಕೆ 3 ಲಕ್ಷ ರೂ ವಂಚನೆ
chikamagalurCrime NewsHomeLatest Newsnamma chikmagalur

ಅಪರಿಚಿತ ಲಿಂಕ್ ಕ್ಲಿಕ್ಕಿಸಿದ್ದಕ್ಕೆ 3 ಲಕ್ಷ ರೂ ವಂಚನೆ

Share
Share

ಚಿಕ್ಕಮಗಳೂರು: ಗೂಗಲ್‌ನಲ್ಲಿ ಸಿಗುವ ಅಪರಿಚಿತ ವೆಬ್‌ಸೈಟ್‌ಗಳು ಮತ್ತು ಫೋನ್ ನಂಬರ್‌ಗಳನ್ನು ಕುರುಡಾಗಿ ನಂಬಿದರೆ ಎಂತಹ ಅಪಾಯ ಕಾಯುತ್ತಿರುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.

ಉಜ್ಜಯಿನಿ ಮಹಾಕಾಳಿ ದರ್ಶನಕ್ಕೆ ತೆರಳಲು ಆನ್ನೈನ್ ನಲ್ಲಿ ರೂಮ್ ಬುಕ್ ಮಾಡಲು ಅಪರಿಚಿತ ಲಿಂಕ್ ಕ್ಲಿಕ್ಕಿಸಿ ಸೈಬರ್ ವಂಚಕರ ಜಾಲಕ್ಕೆ ಸಿಲುಕಿ ಸಂದೀಪ್ ಎಂಬುವರು ಬರೋಬ್ಬರಿ 3,09,855 ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ.

ಸಂದೀಪ್ ಅವರು ಗೂಗಲ್‌ನಲ್ಲಿ ‘Mahakal Bhakta Niwas Ujjain’ ಎಂಬ ವೆಬ್‌ಸೈಟ್ ಹುಡುಕಿ ಅದರಲ್ಲಿನ ಮೊಬೈಲ್ ಸಂಖ್ಯೆಗೆ ಕರೆ ಮಾಡಿದ್ದಾರೆ. ಮೊದಲು ಒಂದು ರೂಮ್ ಬುಕ್ ಮಾಡಲು 4,095 ರೂ.ಗಳನ್ನು ವರ್ಗಾಯಿಸಿದ್ದಾರೆ.

ಆದರೆ, ಹಣ ತಲುಪಿಲ್ಲ ಅಥವಾ ‘ಹೋಲ್ಡ್’ ಆಗಿದೆ ಎಂದು ನಂಬಿಸಿದ ವಂಚಕರು, ಹಣ ವಾಪಸ್ ಪಡೆಯಬೇಕಾದರೆ ಮತ್ತೆ ಹಣ ಹಾಕಬೇಕು ಎಂದು ಪದೇ ಪದೇ ಹೇಳಿದ್ದಾರೆ. ಅವರ ಮಾತನ್ನು ನಂಬಿದ ಸಂದೀಪ್. ಹಂತಹಂತವಾಗಿ ವಿವಿಧ ಬ್ಯಾಂಕ್ ಖಾತೆಗಳಿಂದ ಒಟ್ಟು 3 ಲಕ್ಷಕ್ಕೂ ಅಧಿಕ ಹಣವನ್ನು ವರ್ಗಾಯಿಸಿದ್ದಾರೆ.

ಕೊನೆಗೆ ರೂಮ್ ಕೂಡ ಬುಕ್ ಆಗದೆ ಮತ್ತು ಹಣವೂ ವಾಪಸ್ ಬರದೇ ಇದ್ದಾಗ ತಮಗೆ ಮೋಸ ಹೋಗಿರುವುದು ಅರಿವಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಪ್ರವಾಸಕ್ಕೆ ಹೋಗುವ ಮುನ್ನ ಅಧಿಕೃತ ವೆಬ್‌ಸೈಟ್‌ಗಳನ್ನು ಮಾತ್ರ ಬಳಸಿ ಮತ್ತು ಇಂತಹ ಆನ್‌ಲೈನ್ ವಂಚನೆಗಳ ಬಗ್ಗೆ ಜಾಗರೂಕರಾಗಿರಿ ಎಂದು ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Rs 3 lakh fraud for clicking on an unknown link

Share

Leave a comment

Leave a Reply

Your email address will not be published. Required fields are marked *

Don't Miss

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು ನೆರೆಯವರ ತೋಟದ ಮನೆಯ ಹಿಂಭಾಗ ಬೆಂಕಿ ಹಚ್ಚಿಕೊಂಡು ಸಂಶಯಾಸ್ಪದವಾಗಿ ಸಾವನ್ನಪ್ಪಿರುವ ದುರಂತ ಘಟನೆ ವರದಿಯಾಗಿದೆ....

Related Articles

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...

ಕ್ರೆಡಿಟ್ ಕಾರ್ಡ್ ಮಿತಿ ಹೆಚ್ಚಿಸುವ ನೆಪದಲ್ಲಿ ₹1.59 ಲಕ್ಷ ವಂಚನೆ

ಚಿಕ್ಕಮಗಳೂರು: ಕ್ರೆಡಿಟ್ ಕಾರ್ಡ್ ಮಿತಿಯನ್ನು ಹೆಚ್ಚಿಸುವುದಾಗಿ ನಂಬಿಸಿ ಬ್ಯಾಂಕ್ ಅಧಿಕಾರಿಯಂತೆ ನಟಿಸಿದ ಸೈಬರ್ ವಂಚಕರು ವ್ಯಕ್ತಿಯೊಬ್ಬರ...