Home ಪ್ರವೀಣ್ ಎಚ್.ಟಿ. ಯುಪಿಎಸ್‌ಸಿ ಪರೀಕ್ಷೆಯಲ್ಲಿ 720ನೇ ರ್‍ಯಾಂಕ್
Home

ಪ್ರವೀಣ್ ಎಚ್.ಟಿ. ಯುಪಿಎಸ್‌ಸಿ ಪರೀಕ್ಷೆಯಲ್ಲಿ 720ನೇ ರ್‍ಯಾಂಕ್

Share
Share

ಚಿಕ್ಕಮಗಳೂರು: ಕಡೂರು ತಾಲೂಕಿನ ಹುಲಿಕೆರೆ ಗ್ರಾಮದ ಯುವ ಪ್ರತಿಭೆ ಪ್ರವೀಣ್ ಎಚ್.ಟಿ. ಈ ಸಾಲಿನ ಯುಪಿಎಸ್‌ಸಿ ಪರೀಕ್ಷೆಯಲ್ಲಿ ೭೨೦ನೇ ರ್‍ಯಾಂಕ್ ಪಡೆಯುವ ಮೂಲಕ ಕಾಫಿನಾಡಿಗೆ ಹೆಮ್ಮೆ ತಂದಿದ್ದಾರೆ.

ದೇಶಾದ್ಯಂತ ಒಟ್ಟು ೯೫೮ ಅಭ್ಯರ್ಥಿಗಳು ಈ ಕಠಿಣ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಅದರಲ್ಲಿ ೨೫ ಕನ್ನಡಿಗರು ಸ್ಥಾನ ಪಡೆಯುವ ಮೂಲಕ ರಾಜ್ಯದ ಕೀರ್ತಿ ಹೆಚ್ಚಿಸಿದ್ದಾರೆ. ಕಿರಣ್ ಕಮಾಟೆ ಅವರು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿ ಸಾಧನೆ ಮಾಡಿದ್ದಾರೆ.

ಹುಲಿಕೆರೆಯ ನಿವೃತ್ತ ಮುಖ್ಯ ಶಿಕ್ಷಕ ತಮ್ಮಯ್ಯ ಮತ್ತು ನೀಲಮ್ಮ ದಂಪತಿಯ ಪುತ್ರರಾದ ಪ್ರವೀಣ್ ಅವರ ಈ ಸಾಧನೆಯು ಜಿಲ್ಲೆಯ ಯುವ ಸಮುದಾಯಕ್ಕೆ ದೊಡ್ಡ ಸ್ಫೂರ್ತಿಯಾಗಿದ್ದು, ಪೋಷಕರು ಮತ್ತು ಗ್ರಾಮಸ್ಥರಲ್ಲಿ ಸಂಭ್ರಮ ಮನೆಮಾಡಿದೆ.

Praveen H.T. 720th rank in UPSC exam

Share

Leave a comment

Leave a Reply

Your email address will not be published. Required fields are marked *

Don't Miss

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು ನೆರೆಯವರ ತೋಟದ ಮನೆಯ ಹಿಂಭಾಗ ಬೆಂಕಿ ಹಚ್ಚಿಕೊಂಡು ಸಂಶಯಾಸ್ಪದವಾಗಿ ಸಾವನ್ನಪ್ಪಿರುವ ದುರಂತ ಘಟನೆ ವರದಿಯಾಗಿದೆ....

Related Articles

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...

ಕ್ರೆಡಿಟ್ ಕಾರ್ಡ್ ಮಿತಿ ಹೆಚ್ಚಿಸುವ ನೆಪದಲ್ಲಿ ₹1.59 ಲಕ್ಷ ವಂಚನೆ

ಚಿಕ್ಕಮಗಳೂರು: ಕ್ರೆಡಿಟ್ ಕಾರ್ಡ್ ಮಿತಿಯನ್ನು ಹೆಚ್ಚಿಸುವುದಾಗಿ ನಂಬಿಸಿ ಬ್ಯಾಂಕ್ ಅಧಿಕಾರಿಯಂತೆ ನಟಿಸಿದ ಸೈಬರ್ ವಂಚಕರು ವ್ಯಕ್ತಿಯೊಬ್ಬರ...