Home namma chikmagalur chikamagalur ಅಕ್ರಮ ಇಸ್ಪೀಟು ಜೂಜಾಟ-9 ಜನ ಬಂಧನ
chikamagalurCrime NewsHomeLatest Newsnamma chikmagalur

ಅಕ್ರಮ ಇಸ್ಪೀಟು ಜೂಜಾಟ-9 ಜನ ಬಂಧನ

Share
Share

ಕೊಪ್ಪ: ತಾಲ್ಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಇಸ್ಪೀಟು ಜೂಜಾಟದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಭಂಡಿಗಡಿ ಗ್ರಾಮದ ಶಕಟಾಪುರ ಮಠದ ರಸ್ತೆಯ ಅಕೇಶಿಯಾ ಪ್ಲಾಂಟೇಷನ್ ಬಳಿಯ ಸರ್ಕಾರಿ ಕಾಡಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಜೂಜಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಹರಿಹರಪುರ ಪೊಲೀಸ್ ಠಾಣೆಯ ಪಿಎಸ್‌ಐ ಶ್ರೀಧ‌ರ್ ನಾಯ್ಕ ಮತ್ತು ಸಿಬ್ಬಂದಿ ಪಂಚರ ಸಮಕ್ಷಮ ಸ್ಥಳಕ್ಕೆ ಭೇಟಿ ನೀಡಿ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಭಂಡಿಗಡಿ ಮತ್ತು ಸುತ್ತಮುತ್ತಲ ಗ್ರಾಮಗಳ ನಿವಾಸಿಗಳಾದ ಅರುಣ ಹೆಚ್.ಎ (34), ಶಿವರಾಮ್ ಬಿ.ಟಿ (41), ಸೂಚನ್ ಎ.ಎಸ್ (32), ಸಚಿನ್ ಎ.ಎಸ್ (34), ರಮೇಶ್ ಹೆಗ್ಡೆ (33), ರಾಘವೇಂದ್ರ (46), ರಾಘವೇಂದ್ರ ಎಎನ್ (42), ಅರುಣ (33) ಮತ್ತು ಪ್ರಸನ್ನ ಎ.ವೈ (42) ಎಂಬ ಒಂಬತ್ತು ಜನರನ್ನು ಬಂಧಿಸಲಾಗಿದೆ.

ಬಂಧಿತರಿಂದ ಪೊಲೀಸರು 52 ಇಸ್ಪೀಟ್ ಎಲೆಗಳು, 3,930 ರೂಪಾಯಿ ನಗದು ಹಣ, ಪ್ಲಾಸ್ಟಿಕ್ ಚೀಲ ಹಾಗೂ ಕ್ಯಾಂಡಲ್ ಸೇರಿದಂತೆ ಜೂಜಾಟಕ್ಕೆ ಬಳಸುತ್ತಿದ್ದ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ. ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಜೂಜಾಟ ನಡೆಸುತ್ತಿದ್ದ ಆರೋಪಿಗಳ ವಿರುದ್ಧ ಹರಿಹರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Illegal card gambling – 9 people arrested

Share

Leave a comment

Leave a Reply

Your email address will not be published. Required fields are marked *

Don't Miss

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು ನೆರೆಯವರ ತೋಟದ ಮನೆಯ ಹಿಂಭಾಗ ಬೆಂಕಿ ಹಚ್ಚಿಕೊಂಡು ಸಂಶಯಾಸ್ಪದವಾಗಿ ಸಾವನ್ನಪ್ಪಿರುವ ದುರಂತ ಘಟನೆ ವರದಿಯಾಗಿದೆ....

Related Articles

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...

ಕ್ರೆಡಿಟ್ ಕಾರ್ಡ್ ಮಿತಿ ಹೆಚ್ಚಿಸುವ ನೆಪದಲ್ಲಿ ₹1.59 ಲಕ್ಷ ವಂಚನೆ

ಚಿಕ್ಕಮಗಳೂರು: ಕ್ರೆಡಿಟ್ ಕಾರ್ಡ್ ಮಿತಿಯನ್ನು ಹೆಚ್ಚಿಸುವುದಾಗಿ ನಂಬಿಸಿ ಬ್ಯಾಂಕ್ ಅಧಿಕಾರಿಯಂತೆ ನಟಿಸಿದ ಸೈಬರ್ ವಂಚಕರು ವ್ಯಕ್ತಿಯೊಬ್ಬರ...