Home ಅಂತರ ಜಿಲ್ಲಾ ಕಳ್ಳರ ಜಾಲವನ್ನು ಭೇದಿಸಿದ ಜಿಲ್ಲಾ ಪೊಲೀಸರು
HomeLatest Newsnamma chikmagalur

ಅಂತರ ಜಿಲ್ಲಾ ಕಳ್ಳರ ಜಾಲವನ್ನು ಭೇದಿಸಿದ ಜಿಲ್ಲಾ ಪೊಲೀಸರು

Share
Share

ಚಿಕ್ಕಮಗಳೂರು:  ಜಿಲ್ಲೆಯ ಸಬ್ಬರಾಯಪಟ್ಟಣ ಮತ್ತು ತರೀಕೆರೆ ಸೇರಿದಂತೆ ರಾಜ್ಯದ ವಿವಿಧೆಡೆ ಮನೆಗಳ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಕುಖ್ಯಾತ ಅಂತರ ಜಿಲ್ಲಾ ಕಳ್ಳರ ಜಾಲವನ್ನು ಪೊಲೀಸರು ಭೇದಿಸಿದ್ದಾರೆ.

ಮೈಸೂರು ಮೂಲದ ಮಹಮ್ಮದ್ ಫರಾಜ್ ಮತ್ತು ಚಿಕ್ಕಮಗಳೂರಿನ ಭೂದೇಶ್ ಗೌಡ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಅವರಿಂದ ಸುಮಾರು ೩೦,೧೩,೨೦೦ ರೂಪಾಯಿ ಮೌಲ್ಯದ ಸ್ವತ್ತನ್ನು ಜಪ್ತಿ ಮಾಡಿದ್ದಾರೆ.

ಈ ಕಾರ್ಯಾಚರಣೆಯ ವೇಳೆ ಆರೋಪಿಗಳಿಂದ ೧೯೬.೩೫೦ ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ಕಳ್ಳತನದ ಕೃತ್ಯಕ್ಕೆ ಬಳಸುತ್ತಿದ್ದ ಬಿಳಿ ಬಣ್ಣದ ಐ೨೦ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತರು ಚಿಕ್ಕಮಗಳೂರು ಜಿಲ್ಲೆಯ ಸಬ್ಬರಾಯಪಟ್ಟಣ, ತರೀಕೆರೆ ಮಾತ್ರವಲ್ಲದೆ ಮೈಸೂರು, ಗದಗ, ಹುಬ್ಬಳ್ಳಿ ಮತ್ತು ಹಾಸನದ ಹಳೇಬೀಡು ಸೇರಿದಂತೆ ಹಲವು ಕಡೆಗಳಲ್ಲಿ ಕಳ್ಳತನ ಮಾಡಿರುವುದಾಗಿ ವಿಚಾರಣೆಯ ವೇಳೆ ಒಪ್ಪಿಕೊಂಡಿದ್ದಾರೆ.

ಜಿಲ್ಲಾ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ್ ಸಿ.ಟಿ. ಅವರ ಮಾರ್ಗದರ್ಶನದಲ್ಲಿ, ತರೀಕೆರೆ ಡಿವೈಎಸ್‌ಪಿ ಹೆಚ್. ಪರಶುರಾಮಪ್ಪ ಮತ್ತು ಕಡೂರು ಸಿಪಿಐ ರಫೀಕ್ ನೇತೃತ್ವದ ವಿಶೇಷ ತಂಡವು ತಾಂತ್ರಿಕ ಹಾಗೂ ವೈಜ್ಞಾನಿಕ ತನಿಖೆಯ ಮೂಲಕ ಈ ಯಶಸ್ವಿ ಪತ್ತೆ ಕಾರ್ಯ ನಡೆಸಿದೆ. ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಈ ಕಾರ್ಯಾಚರಣೆಯಲ್ಲಿ ಶ್ರಮಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.

District police bust inter-district thieves’ network

Share

Leave a comment

Leave a Reply

Your email address will not be published. Required fields are marked *

Don't Miss

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು ನೆರೆಯವರ ತೋಟದ ಮನೆಯ ಹಿಂಭಾಗ ಬೆಂಕಿ ಹಚ್ಚಿಕೊಂಡು ಸಂಶಯಾಸ್ಪದವಾಗಿ ಸಾವನ್ನಪ್ಪಿರುವ ದುರಂತ ಘಟನೆ ವರದಿಯಾಗಿದೆ....

Related Articles

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...

ಕ್ರೆಡಿಟ್ ಕಾರ್ಡ್ ಮಿತಿ ಹೆಚ್ಚಿಸುವ ನೆಪದಲ್ಲಿ ₹1.59 ಲಕ್ಷ ವಂಚನೆ

ಚಿಕ್ಕಮಗಳೂರು: ಕ್ರೆಡಿಟ್ ಕಾರ್ಡ್ ಮಿತಿಯನ್ನು ಹೆಚ್ಚಿಸುವುದಾಗಿ ನಂಬಿಸಿ ಬ್ಯಾಂಕ್ ಅಧಿಕಾರಿಯಂತೆ ನಟಿಸಿದ ಸೈಬರ್ ವಂಚಕರು ವ್ಯಕ್ತಿಯೊಬ್ಬರ...