Home namma chikmagalur chikamagalur ಇಂದಿನಿಂದ ಆರೋಗ್ಯ ಇಲಾಖೆಯ ಅಧಿಕಾರಿ ನೌಕರರು ಅರ್ನಿದಿಷ್ಟಾವಧಿ ಮುಷ್ಕರ
chikamagalurHomeLatest Newsnamma chikmagalur

ಇಂದಿನಿಂದ ಆರೋಗ್ಯ ಇಲಾಖೆಯ ಅಧಿಕಾರಿ ನೌಕರರು ಅರ್ನಿದಿಷ್ಟಾವಧಿ ಮುಷ್ಕರ

Share
filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:8; brp_del_th:0.0004,0.0000; brp_del_sen:0.1300,0.1300; motionR: 0; delta:1; bokeh:1; module: photo;hw-remosaic: false;touch: (-1.0, -1.0);sceneMode: 3145728;cct_value: 0;AI_Scene: (-1, -1);aec_lux: 244.05704;aec_lux_index: 0;albedo: ;confidence: ;motionLevel: 0;weatherinfo: null;temperature: 38;
Share

ಚಿಕ್ಕಮಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾ.೧೧ ರಿಂದ ೧೫ ರವರೆಗೆ ಸಮಸ್ತ ಆರೋಗ್ಯ ಇಲಾಖೆಯ ಅಧಿಕಾರಿ ನೌಕರರು ಅರ್ನಿದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ ಎಂದು ಕರ್ನಾಟಕ ಸರಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಡಾ. ಶ್ರೀನಿವಾಸ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ವೈದ್ಯಾಧಿಕಾರಿಗಳ ಸಂಘ, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘ, ಇಲಾಖೆಯ ಎಲ್ಲ ವೃಂದ ಸಂಘಗಳ ಸಹಯೋಗದೊಂದಿಗೆ ಮುಷ್ಕರ ಹಮ್ಮಿಕೊಂಡಿದ್ದು, ಸರಕಾರ ನಮ್ಮ ಮುಷ್ಕರಕ್ಕೆ ಮನ್ನಣೆ ನೀಡದಿದ್ದಲ್ಲಿ ಮಾ.೧೬ ರಿಂದ ಅನಿರ್ದಿಷ್ಟಾವಧಿವರೆಗೆ ಕರ್ತವ್ಯಕ್ಕೆ ಹಾಜರಾಗಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.

ರಾಜ್ಯದ ಎಲ್ಲ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಔಷಧಿ ಪೂರೈಕೆ ಮಾಡುವುದು, ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪ್ರತಿ ೩ ವರ್ಷಕ್ಕೊಮ್ಮೆ ತಿದ್ದುಪಡಿ ಮಾಡಲು ಆದೇಶವಿದ್ದರೂ ಅದನ್ನು ಉಲ್ಲಂಘಿಸಿ ೧೯೭೩ ದಿಂದೀಚೆಗೆ ನೇಮಕಾತಿ ನಿಯಮಗಳನ್ನೇ ತಿದ್ದುಪಡಿ ಮಾಡದಿರುವುದು ಸಂಘ ಖಂಡಿಸುತ್ತದೆ ಎಂದರು.

ಇಲಾಖೆಯ ಎಲ್ಲ ವೃಂದಗಳ ಜೇಷ್ಠತಾ ಪಟ್ಟಿಯನ್ನು ಶೀಘ್ರ ಪ್ರಕಟಿಸಬೇಕು. ಎಲ್ಲ ವೃಂದದ ಅಧಿಕಾರಿ ನೌಕರರಿಗೆ ಮುಂಬಡ್ತಿ ನೀಡಬೇಕು. ಸೇವಾನಿರತ ವೈದ್ಯರು, ಅಧಿಕಾರಿ ನೌಕರರ ಉನ್ನತ ವ್ಯಾಸಂಗ, ಸ್ನಾತಕೋತ್ತರ ವ್ಯಾಂಸಂಗಕ್ಕೆ ಅವಕಾಶ ನೀಡುವುದು, ಇಲಾಖೆಯ ವರ್ಗಾವಣೆ ಕಾಯಿದೆಯಲ್ಲಿನ ನ್ಯೂನತೆಗಳನ್ನು ಸರಿಪಡಿಸದೆ ಅವೈಜ್ಞಾನಿಕವಾಗಿ ಕೌನ್ಸೆಲಿಂಗ್ ವರ್ಗಾವಣೆ ಮಾಡಬಾರದು ಎಂಬುದು ನಮ್ಮ ಮುಖ್ಯ ಬೇಡಿಕೆಯಾಗಿದೆ ಎಂದು ಹೇಳಿದರು.

ಅಲ್ಲದೆ ಸಾರ್ವನಿಕರಿಗೆ ಉತ್ತಮ ಸೇವೆ ನೀಡುವ ದೃಷ್ಟಿಯಿಂದ ಇಲಾಖೆಯಲ್ಲಿ ಖಾಲಿ ಇರುವ ವೈದ್ಯರು, ಅರೆ ವೈದ್ಯಕೀಯ ಹಾಗೂ ಇತರೆ ವೃಂದದ ಹುದ್ದೆಗಳನ್ನು ಭರ್ತಿಮಾಡಬೇಕು. ಗುತ್ತಿಗೆ ವೈದ್ಯರು, ನೌಕರರು ಹಾಗೂ ಎನ್‌ಎಚ್‌ಎಂ ಗುತ್ತಿಗೆ ನೌಕರರಿಗೆ ಕಾಲಕಾಲಕ್ಕೆ ಸೂಕ್ತ ವೇತನ ಹೆಚ್ಚಳ ಮಾಡಬೇಕು, ಇಲಾಖೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಡಿ ಕಾರ್ಯನಿರತ ಸುಮಾರು ೬ ಸಾವಿರ ನೌಕರರಿಗೆ ಹಲವು ವರ್ಷದಿಂದ ೩-೪ ತಿಂಗಳಿಗೊಮ್ಮೆ ವೇತನ ನೀಡುವುದು ತಪ್ಪಬೇಕು ಹಾಗೂ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ತಜ್ಞವೈದ್ಯರು ಇತರೆ ಸಿಬ್ಬಂದಿ ವೈದ್ಯಕೀಯ ಶಿಕ್ಷಣ ಇಲಾಖೆಯ ಮಾದರಿಯಲ್ಲಿ ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ಹಮ್ಮಿಕೊಂಡಿರುವುದಾಗಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಸಂಘದ ಅಧ್ಯಕ್ಷೆ ವಸಂತಕುಮಾರಿ, ಖಜಾಂಚಿ ಅನುಪಮ, ಅಧಿಕಾರಿ, ಸಿಬ್ಬಂದಿಯಾದ ದೇವರಾಜ್, ವೆಂಕಟೇಶ್ ಮತ್ತಿತರರಿದ್ದರು.

Health Department officials and employees to go on indefinite strike from today

Share

Leave a comment

Leave a Reply

Your email address will not be published. Required fields are marked *

Don't Miss

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್ ಎಂಬುವವರ ಮನೆ ಮುಂದೆ ನಿಲ್ಲಿಸಲಾಗಿದ್ದ ಆಟೋರಿಕ್ಷಾ ಹಾಗೂ ಅವರ ಮನೆಯ ಮೇಲೆ ಬೃಹತ್ ಮರವೊಂದು...

ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲೆ – ಅಂಗನವಾಡಿಗಳಿಗೆ ರಜೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ವರುಣನ ಆರ್ಭಟ ಮುಂದುವರಿದಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ. ನಾಳೆ...

Related Articles

ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ

ಕಡೂರು: ಮುಂಗಾರು ಮಳೆಯ ಕೊರತೆಯಿಂದ ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ ಎದುರಾಗಿದ್ದು, ಕುಡಿಯುವ ನೀರು, ಜಾನುವಾರುಗಳ...

ಜು.21ಕ್ಕೆ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶ

ಚಿಕ್ಕಮಗಳೂರು : ೪೬ನೇ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶವನ್ನು ಜು.೨೧...

ಅಕ್ರಮವಾಗಿ ಸಾಗಿಸುತ್ತಿ ಕಾಡುಜಾತಿಯ ಮರಗಳ ದಿಮ್ಮಿಗಳ ವಶ

ಮೂಡಿಗೆರೆ: ಕಾಡುಜಾತಿಯ ಮರಗಳ ದಿಮ್ಮಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದುದನ್ನು ತಾಲ್ಲೂಕಿನ ಹಂಡುಗುಳಿ ಗ್ರಾಮದ ಸಮೀಪ ಅರಣ್ಯ ಇಲಾಖೆ...

ಜವಾಹರ್ ನವೋದಯ ವಿದ್ಯಾಲಯದಲ್ಲಿ ಪ್ರವೇಶಕ್ಕೆ ಆಹ್ವಾನ

ಚಿಕ್ಕಮಗಳೂರು:  ಸೀಗೋಡುವಿನ ಪಿ.ಎಂ.ಶ್ರೀ ಜವಾಹರ ನವೋದಯ ವಿದ್ಯಾಲಯವು  ವಸತಿಯುತ ಸಹಶಿಕ್ಷಣ ವಿದ್ಯಾಲಯವಾಗಿದ್ದು, ಗ್ರಾಮೀಣ ಪ್ರದೇಶದ ಪ್ರತಿಭಾವಂತ...