Home namma chikmagalur chikamagalur ರೈತರ ಮೇಲಿನ ಪ್ರಕರಣ ಹಿಂದಕ್ಕೆ ಪಡೆಯದಿದ್ದರೆ ರಾಜ್ಯಾದ್ಯಂತ ಹೋರಾಟ
chikamagalurHomeLatest Newsnamma chikmagalur

ರೈತರ ಮೇಲಿನ ಪ್ರಕರಣ ಹಿಂದಕ್ಕೆ ಪಡೆಯದಿದ್ದರೆ ರಾಜ್ಯಾದ್ಯಂತ ಹೋರಾಟ

Share
Share

ಚಿಕ್ಕಮಗಳೂರು: ತುಂಗಭದ್ರಾ ಎಡದಂಡೆ ಭಾಗದ ರೈತರಿಗೆ ನೀರು ಹರಿಸಬೇಕು ಎಂದು ಹೋರಾಟ ನಡೆಸಿದ ರೈತ ಮುಖಂಡರ ಮೇಲೆ ಹಾಕಿರುವ ಪೊಲೀಸ್ ಕೇಸುಗಳನ್ನು ಸರಕಾರ ವಾಪಸ್ಸು ಪಡೆಯದಿದ್ದರೆ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸುವುದಾಗಿ ಅಖಿಲ ಕರ್ನಾಟಕ ರಾಜ್ಯ ಅನ್ನದಾತ ರೈತ ಸಂಘದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಸರೋಜಬಸವರಾಜು ಎಚ್ಚರಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತುಂಗಾಭದ್ರಾ ಎಡದಂಡೆ ಭಾಗದ ರೈತರಿಗೆ ಬೇಸಿಗೆ ಬೆಳಗೆ ನೀರು ಹರಿಸಬೇಕು ಎಂದು ಆಗ್ರಹಿಸಿ ನಮ್ಮ ಸಂಘದ ರಾಜ್ಯಾಧ್ಯಕ್ಷ ಶರಣೇಗೌಡ ಕೆಸರಟ್ಟಿ, ಉಪಾಧ್ಯಕ್ಷ ಶರಣಪ್ಪ ಕೊತ್ವಾಲ್ ನೇತೃತ್ವದಲ್ಲಿ ಆಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಅಲ್ಲಿನ ಜಿಲ್ಲಾ ಸಚಿವ ಶಿವರಾಜ್ ತಂಗಡಗಿ ಅವರ ಕುಮ್ಮಕ್ಕಿನಿಂದ ನಮ್ಮ ಮುಖಂಡರನ್ನು ಬಂಧಿಸಿ ಸುಳ್ಳು ಕೇಸು ದಾಖಲಿಸಲಾಗಿದೆ. ರೈತ ಹೋರಾಟವನ್ನು ಹತ್ತಿಕ್ಕುವ ಉದ್ದೇಶದಿಂದ ಅವರ ಮೇಲೆ ನಿರಂತರವಾಗಿ ಕೇಸು ದಾಖಲಿಸಲಾಗಿದೆ ಎಂದು ದೂರಿದರು.

ಈ ಬಗ್ಗೆ ಸಚಿವ ಶಿವರಾಜ್ ತಂಗಡಗಿ ಅವರ ಸರ್ವಾಧಿಕಾರಿ ಧೋರಣೆ ಬಗ್ಗೆ ಮಾನವ ಹಕ್ಕು ಆಯೋಗಕ್ಕೆ ದೂರು ಸಲ್ಲಿಸುತ್ತಿದ್ದೇವೆ. ಅವರನ್ನು ಸಚಿವ ಸಂಪುಟದಿಂದ ವಜಾ ಮಾಡುವಂತೆ ಮುಖ್ಯಮಂತ್ರಿ ಆಗ್ರಹಿಸಿದ್ದೇವೆ ಎಂದರು.

ರೈತ ಹೋರಾಟಗಾರರ ಮೇಲೆ ಸುಳ್ಳು ಕೇಸು ದಾಖಲಿಸಿರುವ ಕಾರಟಗಿ ಪೊಲೀಸ್ ಅಧಿಕಾರಿ ಸುಧೀರ್ ಬೆಂಕಿ ವಿರುದ್ಧ ಕ್ರಮ ಕೈಗೊಳ್ಳಲು ಗೃಹ ಇಲಾಖೆಗೆ ಮನವಿ ಸಲ್ಲಿಸಿದ್ದೇವೆ. ಒಂದು ವೇಳೆ ನಮ್ಮ ಮನವಿಗೆ ಸ್ಪಂದನೆ ದೊರೆಯದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ರೂಪಿಸಲು ನಿರ್ಧರಿಸಲಿದ್ದೇವೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷೆ ಪ್ರೇಮ, ರೈತ ಮುಖಂಡರಾದ ಮರೀಗೌಡ, ವಿಶ್ವನಾಥ, ಸುಖಿತ್, ಮತ್ತಿತರರಿದ್ದರು.

Statewide protest if case against farmers not withdrawn

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ ಬಳಸಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಕನ್ನಡಸೇನೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಭಂವರ್‌ಸಿಂಗ್...

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ

ಮೂಡಿಗೆರೆ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕೊನೆಗೂ ಮಳೆಗಾಲದ ದರ್ಶನವಾಗಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಒಂದೆಡೆ ಆತಂಕ, ಮತ್ತೊಂದೆಡೆ ಹರ್ಷದ ವಾತಾವರಣ ನಿರ್ಮಾಣವಾಗಿದೆ. ಮಳೆಗಾಲ ಆರಂಭವಾಗಿ ತಿಂಗಳು ಕಳೆದರೂ ನಿರೀಕ್ಷಿತ ಪ್ರಮಾಣದಲ್ಲಿ ಬಾರದ...

Related Articles

ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಗುದ್ದಲಿ ಪೂಜೆ

ಚಿಕ್ಕಮಗಳೂರು: ಆರೋಗ್ಯ, ಶಿಕ್ಷಣ ಮತ್ತು ಜನರ ಬದುಕಿಗಾಗಿ ಆದ್ಯತೆಯ ಮೇಲೆ ಕೆಲಸ ಮಾಡಬೇಕಾಗಿರುವುದು ಚುನಾಯಿತ ಪ್ರತಿನಿಧಿಗಳ...

ಹಂದಿ ಬೇಟೆ: 7 ಜನರ ಬಂಧನ

ಕಡೂರು: ತಾಲ್ಲೂಕಿನ ಮಲ್ಲಾಘಟ್ಟ ಗ್ರಾಮದಿಂದ ಸಿಂಗಟಗೆರೆಗೆ ಹೋಗುವ ರಸ್ತೆಯಲ್ಲಿ ಭಾನುವಾರ ಮುಂಜಾನೆ ಹಂದಿ ಬೇಟೆಗೆ ಬಂದಿದ್ದ...

ಕೈಕುಸ್ತಿ(ಪಂಝಾ)ಆಡುತ್ತಿದ್ದ ವೇಳೆ ಯುವಕನ ಸಾವು

ಕಡೂರು:  ಕೈಕುಸ್ತಿ(ಪಂಝಾ)ಆಡುತ್ತಿದ್ದ ಸ್ನೇಹಿತರುಗಳ ನಡುವೆ ನಡೆದ ಮಾತಿನಚಕಮಕಿಯಿಂದ ಮಾರಣಾಂತಿಕ ಹಲ್ಲೆಗೆ ತಿರುಗಿ ಯುವಕನೊಬ್ಬನು ಮೃತಪಟ್ಟಿದ್ದು, ಕೊಲೆ...

ಉದ್ಯಮ ವಿಸ್ತರಣೆಗೆ ‘ಇ-ಹರಾಜು’ ಸುವರ್ಣಾವಕಾಶ

ಚಿಕ್ಕಮಗಳೂರು:  ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮದ್ಯದ ಅಂಗಡಿಗಳ ಲೈಸೆನ್ಸ್ ಇ-ಹರಾಜು ಪ್ರಕ್ರಿಯೆಯು ಜಿಲ್ಲೆಯ ಹಾಗೂ...