Home namma chikmagalur chikamagalur ಸಖರಾಯಪಟ್ಟಣದಲ್ಲಿ ಸಿನಿಮಾ ಶೈಲಿಯ ದರೋಡೆ
chikamagalurHomeLatest Newsnamma chikmagalur

ಸಖರಾಯಪಟ್ಟಣದಲ್ಲಿ ಸಿನಿಮಾ ಶೈಲಿಯ ದರೋಡೆ

Share
Share

ಚಿಕ್ಕಮಗಳೂರು: ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿನಿಮಾ ಶೈಲಿಯ ದರೋಡೆ ಪ್ರಕರಣವೊಂದು ನಡೆದಿದ್ದು, ಲಿಫ್ಟ್ ಕೇಳುವ ನೆಪದಲ್ಲಿ ಕಾರು ಹತ್ತಿದ ಮಹಿಳೆಯರಿಬ್ಬರು ದರೋಡೆಕೋರರೊಂದಿಗೆ ಸೇರಿ ಹಣ ಮತ್ತು ಮೊಬೈಲ್ ದೋಚಿದ್ದಾರೆ.

ತುಮಕೂರು ಜಿಲ್ಲೆಯ ಪ್ರವೀಣ್ ಮತ್ತು ಚೇತನ್ ಎಂಬುವವರು ಕಡೂರಿನಿಂದ ಚಿಕ್ಕಮಗಳೂರಿಗೆ ಕಾರಿನಲ್ಲಿ ಹೊರಟಿದ್ದಾಗ, ಪರಿಚಯಸ್ಥರ ಶಿಫಾರಸಿನ ಮೇರೆಗೆ ಶ್ರಾವ್ಯ ಮತ್ತು ಕಾವ್ಯ ಎಂಬ ಹೆಸರಿನ ಇಬ್ಬರು ಮಹಿಳೆಯರನ್ನು ಕಾರಿನಲ್ಲಿ ಕೂರಿಸಿಕೊಂಡಿದ್ದರು.

ಮಾರ್ಗಮಧ್ಯೆ ಹಿರೇಗೌಜ ಬಸ್ ನಿಲ್ದಾಣದ ಬಳಿ ವಿಡಿಯೋ ಕಾಲ್ ಮಾಡುವ ನೆಪದಲ್ಲಿ ಕಾರನ್ನು ನಿಲ್ಲಿಸಿದ ಮಹಿಳೆಯರು, ಅಲ್ಲಿಯೇ ಹೊಂಚು ಹಾಕಿದ್ದ ಐವರು ದರೋಡೆಕೋರರ ಗುಂಪಿಗೆ ದಾರಿ ಮಾಡಿಕೊಟ್ಟಿದ್ದಾರೆ. ಕಾರಿಗೆ ಅಡ್ಡಬಂದ ದುಷ್ಕರ್ಮಿಗಳು ಪ್ರವೀಣ್ ಮತ್ತು ಚೇತನ್ ಮೇಲೆ ಹಲ್ಲೆ ನಡೆಸಿ, ಚಾಕು ತೋರಿಸಿ ಬೆದರಿಸಿ ಪರ್ಸ್ ಹಾಗೂ ಬೆಲೆಬಾಳುವ ಮೊಬೈಲ್ ಫೋನ್‌ಗಳನ್ನು ಕಿತ್ತುಕೊಂಡಿದ್ದಾರೆ.

ಈ ವೇಳೆ ಪ್ರವೀಣ್ ಗುಟ್ಟಾಗಿ ತಮ್ಮ ಸ್ನೇಹಿತ ಮಂಜುನಾಥ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಮಂಜುನಾಥ್ ಮತ್ತು ಅವರ ಸ್ನೇಹಿತರು ದರೋಡೆಕೋರರು ಇದ್ದ ಕಾರನ್ನು ಹಿಂಬಾಲಿಸಿ ಹಿರೇಗೌಜ ಕ್ರಾಸ್ ಬಳಿ ಅಡ್ಡಗಟ್ಟಿದ್ದಾರೆ. ಸ್ಥಳೀಯರ ಸಹಾಯದಿಂದ ರಮೇಶ್, ನವೀನ್, ರಘು, ಹರೀಶ್ ಹಾಗೂ ಶ್ರಾವ್ಯ (ವೀಣಾ) ಮತ್ತು ಕಾವ್ಯ (ಮಧು) ಎಂಬುವವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ.

ತಪ್ಪಿಸಿಕೊಂಡಿರುವ ಸುಹಾಸ್ ಎಂಬಾತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದು, ಬಂಧಿತರಿಂದ ನಗದು ಮತ್ತು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

Cinema-style robbery in Sakharayapattana

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ ಬಳಸಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಕನ್ನಡಸೇನೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಭಂವರ್‌ಸಿಂಗ್...

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ

ಮೂಡಿಗೆರೆ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕೊನೆಗೂ ಮಳೆಗಾಲದ ದರ್ಶನವಾಗಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಒಂದೆಡೆ ಆತಂಕ, ಮತ್ತೊಂದೆಡೆ ಹರ್ಷದ ವಾತಾವರಣ ನಿರ್ಮಾಣವಾಗಿದೆ. ಮಳೆಗಾಲ ಆರಂಭವಾಗಿ ತಿಂಗಳು ಕಳೆದರೂ ನಿರೀಕ್ಷಿತ ಪ್ರಮಾಣದಲ್ಲಿ ಬಾರದ...

Related Articles

ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಗುದ್ದಲಿ ಪೂಜೆ

ಚಿಕ್ಕಮಗಳೂರು: ಆರೋಗ್ಯ, ಶಿಕ್ಷಣ ಮತ್ತು ಜನರ ಬದುಕಿಗಾಗಿ ಆದ್ಯತೆಯ ಮೇಲೆ ಕೆಲಸ ಮಾಡಬೇಕಾಗಿರುವುದು ಚುನಾಯಿತ ಪ್ರತಿನಿಧಿಗಳ...

ಹಂದಿ ಬೇಟೆ: 7 ಜನರ ಬಂಧನ

ಕಡೂರು: ತಾಲ್ಲೂಕಿನ ಮಲ್ಲಾಘಟ್ಟ ಗ್ರಾಮದಿಂದ ಸಿಂಗಟಗೆರೆಗೆ ಹೋಗುವ ರಸ್ತೆಯಲ್ಲಿ ಭಾನುವಾರ ಮುಂಜಾನೆ ಹಂದಿ ಬೇಟೆಗೆ ಬಂದಿದ್ದ...

ಕೈಕುಸ್ತಿ(ಪಂಝಾ)ಆಡುತ್ತಿದ್ದ ವೇಳೆ ಯುವಕನ ಸಾವು

ಕಡೂರು:  ಕೈಕುಸ್ತಿ(ಪಂಝಾ)ಆಡುತ್ತಿದ್ದ ಸ್ನೇಹಿತರುಗಳ ನಡುವೆ ನಡೆದ ಮಾತಿನಚಕಮಕಿಯಿಂದ ಮಾರಣಾಂತಿಕ ಹಲ್ಲೆಗೆ ತಿರುಗಿ ಯುವಕನೊಬ್ಬನು ಮೃತಪಟ್ಟಿದ್ದು, ಕೊಲೆ...

ಉದ್ಯಮ ವಿಸ್ತರಣೆಗೆ ‘ಇ-ಹರಾಜು’ ಸುವರ್ಣಾವಕಾಶ

ಚಿಕ್ಕಮಗಳೂರು:  ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮದ್ಯದ ಅಂಗಡಿಗಳ ಲೈಸೆನ್ಸ್ ಇ-ಹರಾಜು ಪ್ರಕ್ರಿಯೆಯು ಜಿಲ್ಲೆಯ ಹಾಗೂ...