Home namma chikmagalur chikamagalur ಕಳ್ಳತನ ಪ್ರಕರಣ ಭೇದಿಸಿರುವ ಪೊಲೀಸರು-ಇಬ್ಬರು ಆರೋಪಿಗಳ ಬಂಧನ
chikamagalurHomeLatest Newsnamma chikmagalur

ಕಳ್ಳತನ ಪ್ರಕರಣ ಭೇದಿಸಿರುವ ಪೊಲೀಸರು-ಇಬ್ಬರು ಆರೋಪಿಗಳ ಬಂಧನ

Share
Share

ಚಿಕ್ಕಮಗಳೂರು:  ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ ಸುಮಾರು 1,60,000 ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಜಪ್ತಿ ಮಾಡಿದ್ದಾರೆ.

ದಿನಾಂಕ 19-02-2026 ರಂದು ಕೆ.ಆರ್. ವಿಜಯ್ ಕುಮಾರ್ ಎಂಬುವವರ ಮನೆಯಲ್ಲಿ ನಡೆದಿದ್ದ ಈ ಕಳ್ಳತನದ ಬಗ್ಗೆ ದಾಖಲಾಗಿದ್ದ ದೂರಿನನ್ವಯ ತನಿಖೆ ಕೈಗೊಂಡ ಪೊಲೀಸರು, ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ವೆಂಕಟೇಶ ಮತ್ತು ಪರಶುರಾಮ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ.

ಜಿಲ್ಲಾ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ಮತ್ತು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ರಚನೆಯಾಗಿದ್ದ ವಿಶೇಷ ತಂಡವು ತಾಂತ್ರಿಕ ಹಾಗೂ ವೈಜ್ಞಾನಿಕ ಆಯಾಮಗಳಿಂದ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ. ಬಂಧಿತ ಆರೋಪಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು, ಸದ್ಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಶ್ರಮಿಸಿದ ಕಡೂರು ವೃತ್ತ ನಿರೀಕ್ಷಕ ರಫೀಕ್ ಎಂ. ಮತ್ತು ಅವರ ತಂಡದ ಸಾಧನೆಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.

Police crack theft case arrest two accused

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ ಬಳಸಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಕನ್ನಡಸೇನೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಭಂವರ್‌ಸಿಂಗ್...

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ

ಮೂಡಿಗೆರೆ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕೊನೆಗೂ ಮಳೆಗಾಲದ ದರ್ಶನವಾಗಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಒಂದೆಡೆ ಆತಂಕ, ಮತ್ತೊಂದೆಡೆ ಹರ್ಷದ ವಾತಾವರಣ ನಿರ್ಮಾಣವಾಗಿದೆ. ಮಳೆಗಾಲ ಆರಂಭವಾಗಿ ತಿಂಗಳು ಕಳೆದರೂ ನಿರೀಕ್ಷಿತ ಪ್ರಮಾಣದಲ್ಲಿ ಬಾರದ...

Related Articles

ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಗುದ್ದಲಿ ಪೂಜೆ

ಚಿಕ್ಕಮಗಳೂರು: ಆರೋಗ್ಯ, ಶಿಕ್ಷಣ ಮತ್ತು ಜನರ ಬದುಕಿಗಾಗಿ ಆದ್ಯತೆಯ ಮೇಲೆ ಕೆಲಸ ಮಾಡಬೇಕಾಗಿರುವುದು ಚುನಾಯಿತ ಪ್ರತಿನಿಧಿಗಳ...

ಹಂದಿ ಬೇಟೆ: 7 ಜನರ ಬಂಧನ

ಕಡೂರು: ತಾಲ್ಲೂಕಿನ ಮಲ್ಲಾಘಟ್ಟ ಗ್ರಾಮದಿಂದ ಸಿಂಗಟಗೆರೆಗೆ ಹೋಗುವ ರಸ್ತೆಯಲ್ಲಿ ಭಾನುವಾರ ಮುಂಜಾನೆ ಹಂದಿ ಬೇಟೆಗೆ ಬಂದಿದ್ದ...

ಕೈಕುಸ್ತಿ(ಪಂಝಾ)ಆಡುತ್ತಿದ್ದ ವೇಳೆ ಯುವಕನ ಸಾವು

ಕಡೂರು:  ಕೈಕುಸ್ತಿ(ಪಂಝಾ)ಆಡುತ್ತಿದ್ದ ಸ್ನೇಹಿತರುಗಳ ನಡುವೆ ನಡೆದ ಮಾತಿನಚಕಮಕಿಯಿಂದ ಮಾರಣಾಂತಿಕ ಹಲ್ಲೆಗೆ ತಿರುಗಿ ಯುವಕನೊಬ್ಬನು ಮೃತಪಟ್ಟಿದ್ದು, ಕೊಲೆ...

ಉದ್ಯಮ ವಿಸ್ತರಣೆಗೆ ‘ಇ-ಹರಾಜು’ ಸುವರ್ಣಾವಕಾಶ

ಚಿಕ್ಕಮಗಳೂರು:  ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮದ್ಯದ ಅಂಗಡಿಗಳ ಲೈಸೆನ್ಸ್ ಇ-ಹರಾಜು ಪ್ರಕ್ರಿಯೆಯು ಜಿಲ್ಲೆಯ ಹಾಗೂ...