Home namma chikmagalur chikamagalur ಮೋಟಾರ್ ಬೈಕ್‌ ಗೆ ಜೆಸಿಬಿ ಡಿಕ್ಕಿ – ವ್ಯಕ್ತಿ ಸಾವು
chikamagalurCrime NewsHomeLatest Newsnamma chikmagalur

ಮೋಟಾರ್ ಬೈಕ್‌ ಗೆ ಜೆಸಿಬಿ ಡಿಕ್ಕಿ – ವ್ಯಕ್ತಿ ಸಾವು

Share
Share

ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಗಸರಹಳ್ಳಿ ರಸ್ತೆಯಲ್ಲಿ ಜೆಸಿಬಿ ಚಾಲಕನ ಬೇಜವಾಬ್ದಾರಿಯಿಂದ ನಡೆದ ಅಪಘಾತದಲ್ಲಿ ಮೂರ್ತಿ (45) ಎಂಬುವವರು ಮೃತಪಟ್ಟಿದ್ದಾರೆ.

ಕೆಲಸ ಮುಗಿಸಿಕೊಂಡು ಸತೀಶ್ ಎಂಬುವವರ ಮೋಟಾರ್ ಸೈಕಲ್‌ನಲ್ಲಿ ಹಿಂಬದಿ ಸವಾರನಾಗಿ ಮನೆಗೆ ಮರಳುತ್ತಿದ್ದಾಗ, ಎಸ್ಟೇಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಜೆಸಿಬಿ ಚಾಲಕ ಮಧು ಯಾವುದೇ ಸೂಚನೆ ನೀಡದೆ ಒಮ್ಮೆಲೇ ವಾಹನವನ್ನು ರಸ್ತೆಗೆ ತಂದಿದ್ದಾನೆ.

ಈ ವೇಳೆ ಬೈಕ್ ಜೆಸಿಬಿಯ ಮುಂಭಾಗದ ಬಕೆಟ್ ಡಿಕ್ಕಿ ಹೊಡೆದಿದ್ದು, ಮೂರ್ತಿಯವರ ಹಣೆಗೆ ತೀವ್ರ ಗಾಯಗಳಾಗಿದ್ದವು. ಗಾಯಾಳುವನ್ನು ತಕ್ಷಣವೇ ಚಿಕ್ಕಮಗಳೂರಿನ ಸರ್ಕಾರಿ ಆಸ್ಪತ್ರೆ ಹಾಗೂ ನಂತರ ಕೆ.ಆರ್.ಎಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಮೃತರ ಪತ್ನಿ ಹೇಮಾ ನೀಡಿದ ದೂರಿನ ಮೇರೆಗೆ ಹಾಸನ ಜಿಲ್ಲೆಯ ಹೊಳೆನರಸೀಪುರ ಮೂಲದ ಚಾಲಕ ಮಧು ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

JCB collides with motorbike – man dies

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ ಬಳಸಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಕನ್ನಡಸೇನೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಭಂವರ್‌ಸಿಂಗ್...

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ

ಮೂಡಿಗೆರೆ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕೊನೆಗೂ ಮಳೆಗಾಲದ ದರ್ಶನವಾಗಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಒಂದೆಡೆ ಆತಂಕ, ಮತ್ತೊಂದೆಡೆ ಹರ್ಷದ ವಾತಾವರಣ ನಿರ್ಮಾಣವಾಗಿದೆ. ಮಳೆಗಾಲ ಆರಂಭವಾಗಿ ತಿಂಗಳು ಕಳೆದರೂ ನಿರೀಕ್ಷಿತ ಪ್ರಮಾಣದಲ್ಲಿ ಬಾರದ...

Related Articles

ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಗುದ್ದಲಿ ಪೂಜೆ

ಚಿಕ್ಕಮಗಳೂರು: ಆರೋಗ್ಯ, ಶಿಕ್ಷಣ ಮತ್ತು ಜನರ ಬದುಕಿಗಾಗಿ ಆದ್ಯತೆಯ ಮೇಲೆ ಕೆಲಸ ಮಾಡಬೇಕಾಗಿರುವುದು ಚುನಾಯಿತ ಪ್ರತಿನಿಧಿಗಳ...

ಹಂದಿ ಬೇಟೆ: 7 ಜನರ ಬಂಧನ

ಕಡೂರು: ತಾಲ್ಲೂಕಿನ ಮಲ್ಲಾಘಟ್ಟ ಗ್ರಾಮದಿಂದ ಸಿಂಗಟಗೆರೆಗೆ ಹೋಗುವ ರಸ್ತೆಯಲ್ಲಿ ಭಾನುವಾರ ಮುಂಜಾನೆ ಹಂದಿ ಬೇಟೆಗೆ ಬಂದಿದ್ದ...

ಕೈಕುಸ್ತಿ(ಪಂಝಾ)ಆಡುತ್ತಿದ್ದ ವೇಳೆ ಯುವಕನ ಸಾವು

ಕಡೂರು:  ಕೈಕುಸ್ತಿ(ಪಂಝಾ)ಆಡುತ್ತಿದ್ದ ಸ್ನೇಹಿತರುಗಳ ನಡುವೆ ನಡೆದ ಮಾತಿನಚಕಮಕಿಯಿಂದ ಮಾರಣಾಂತಿಕ ಹಲ್ಲೆಗೆ ತಿರುಗಿ ಯುವಕನೊಬ್ಬನು ಮೃತಪಟ್ಟಿದ್ದು, ಕೊಲೆ...

ಉದ್ಯಮ ವಿಸ್ತರಣೆಗೆ ‘ಇ-ಹರಾಜು’ ಸುವರ್ಣಾವಕಾಶ

ಚಿಕ್ಕಮಗಳೂರು:  ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮದ್ಯದ ಅಂಗಡಿಗಳ ಲೈಸೆನ್ಸ್ ಇ-ಹರಾಜು ಪ್ರಕ್ರಿಯೆಯು ಜಿಲ್ಲೆಯ ಹಾಗೂ...