Home namma chikmagalur chikamagalur ರೆಸಾರ್ಟ್‌ನಲ್ಲಿ ಹೌಸ್ ಕೀಪಿಂಗ್ ಮೇಲೆ ಹಲ್ಲೆ- ಮೊಬೈಲ್ ಕಳವು
chikamagalurCrime NewsHomenamma chikmagalur

ರೆಸಾರ್ಟ್‌ನಲ್ಲಿ ಹೌಸ್ ಕೀಪಿಂಗ್ ಮೇಲೆ ಹಲ್ಲೆ- ಮೊಬೈಲ್ ಕಳವು

Share
Share

ಚಿಕ್ಕಮಗಳೂರು: ರೆಸಾರ್ಟ್ ಸಿಬ್ಬಂದಿಯೊಬ್ಬರು ಸಂಚಿಗೆ ಬಲಿಯಾಗಿ ಹಣ ಹಾಗೂ ಮೊಬೈಲ್ ಕಳೆದುಕೊಂಡಿದ್ದಾರೆ. ಕಳಸ ತಾಲ್ಲೂಕಿನ ರಿವರ್ ಮಿಸ್ಟ್ ರೆಸಾರ್ಟ್‌ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಪೋದುಮ್ ಮುರಾರಿ ಎಂಬುವವರು  ರಜೆಯಲ್ಲಿದ್ದಾಗ ಈ ಘಟನೆ ನಡೆದಿದೆ.

ಅಂದು ಬೆಳಿಗ್ಗೆ ರೆಸಾರ್ಟ್ ಚಾಲಕ ಅಜಿತ್ ಎಂಬಾತ ಮುರಾರಿ ಅವರನ್ನು ಸಂಸ್ಥೆ ವರೆಗೆ ಬಿಟ್ಟು, ನಂತರ ಚಿಕ್ಕಮಗಳೂರಿನಲ್ಲಿ ತನ್ನ ಸ್ನೇಹಿತರು ನೀಡುವ ಪಾರ್ಸೆಲ್ ಪಡೆದು ತರುವಂತೆ ತಿಳಿಸಿದ್ದನು.

ಮುರಾರಿ ಅವರು ತಮ್ಮ ಸಂಬಳದ ಹಣದಲ್ಲಿ 17,000 ರೂಪಾಯಿ ಮೌಲ್ಯದ ಎರಡು ಹೊಸ ಮೊಬೈಲ್ ಖರೀದಿಸಿ ಅಜಿತ್‌ ಕರೆ ಮಾಡಿದಾಗ, ಆತ ತನ್ನ ಸ್ನೇಹಿತರೊಂದಿಗೆ ಕಾನ್ಸರೆನ್ಸ್ ಕಾಲ್ ಮೂಲಕ ಮಾತನಾಡಿಸಿ ಸ್ಥಳವೊಂದಕ್ಕೆ ಬರುವಂತೆ ಸೂಚಿಸಿದ್ದನು.

ಅಜಿತ್ ನೀಡಿದ ಮಾಹಿತಿಯಂತೆ ಬಂದ ಆತನ ಸ್ನೇಹಿತರು ಮುರಾರಿ ಅವರನ್ನು ಬೈಕ್‌ನಲ್ಲಿ ಪಟ್ಟಣದ ಹೊರವಲಯಕ್ಕೆ ಕರೆದೊಯ್ದು ತೀವ್ರವಾಗಿ ಹಲ್ಲೆ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಮುರಾರಿ ಬಳಿಯಿದ್ದ ಎರಡು ಹೊಸ ಮೊಬೈಲ್ ಫೋನ್‌ಗಳು ಹಾಗೂ 3,600 ರೂಪಾಯಿ ನಗದನ್ನು ಬಲವಂತವಾಗಿ ಕಿತ್ತುಕೊಂಡು ಅಲ್ಲಿಂದ ಪರಾರಿಯಾಗಿದ್ದಾರೆ.

ಹಲ್ಲೆಗೊಳಗಾದ ಮುರಾರಿ ಅವರು ಕೂಡಲೇ ತಮ್ಮ ರೆಸಾರ್ಟ್ ಮ್ಯಾನೇಜರ್ ಮೋಹನ್ ಕುಮಾರ್ ಅವರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಮ್ಯಾನೇಜರ್ ಅವರ ನೆರವಿನೊಂದಿಗೆ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಸಂತ್ರಸ್ತರಿಗೆ ಭಾಷೆಯ ಸಮಸ್ಯೆ ಇದ್ದುದರಿಂದ ಮ್ಯಾನೇಜರ್ ಅವರ ಮೂಲಕವೇ ದೂರು ದಾಖಲಿಸಲಾಗಿದ್ದು,

ಪೊಲೀಸರು ಅಜಿತ್ ಹಾಗೂ ಆತನ ಸ್ನೇಹಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Housekeeping attacked at resort mobile stolen

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ ಬಳಸಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಕನ್ನಡಸೇನೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಭಂವರ್‌ಸಿಂಗ್...

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ

ಮೂಡಿಗೆರೆ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕೊನೆಗೂ ಮಳೆಗಾಲದ ದರ್ಶನವಾಗಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಒಂದೆಡೆ ಆತಂಕ, ಮತ್ತೊಂದೆಡೆ ಹರ್ಷದ ವಾತಾವರಣ ನಿರ್ಮಾಣವಾಗಿದೆ. ಮಳೆಗಾಲ ಆರಂಭವಾಗಿ ತಿಂಗಳು ಕಳೆದರೂ ನಿರೀಕ್ಷಿತ ಪ್ರಮಾಣದಲ್ಲಿ ಬಾರದ...

Related Articles

ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಗುದ್ದಲಿ ಪೂಜೆ

ಚಿಕ್ಕಮಗಳೂರು: ಆರೋಗ್ಯ, ಶಿಕ್ಷಣ ಮತ್ತು ಜನರ ಬದುಕಿಗಾಗಿ ಆದ್ಯತೆಯ ಮೇಲೆ ಕೆಲಸ ಮಾಡಬೇಕಾಗಿರುವುದು ಚುನಾಯಿತ ಪ್ರತಿನಿಧಿಗಳ...

ಹಂದಿ ಬೇಟೆ: 7 ಜನರ ಬಂಧನ

ಕಡೂರು: ತಾಲ್ಲೂಕಿನ ಮಲ್ಲಾಘಟ್ಟ ಗ್ರಾಮದಿಂದ ಸಿಂಗಟಗೆರೆಗೆ ಹೋಗುವ ರಸ್ತೆಯಲ್ಲಿ ಭಾನುವಾರ ಮುಂಜಾನೆ ಹಂದಿ ಬೇಟೆಗೆ ಬಂದಿದ್ದ...

ಕೈಕುಸ್ತಿ(ಪಂಝಾ)ಆಡುತ್ತಿದ್ದ ವೇಳೆ ಯುವಕನ ಸಾವು

ಕಡೂರು:  ಕೈಕುಸ್ತಿ(ಪಂಝಾ)ಆಡುತ್ತಿದ್ದ ಸ್ನೇಹಿತರುಗಳ ನಡುವೆ ನಡೆದ ಮಾತಿನಚಕಮಕಿಯಿಂದ ಮಾರಣಾಂತಿಕ ಹಲ್ಲೆಗೆ ತಿರುಗಿ ಯುವಕನೊಬ್ಬನು ಮೃತಪಟ್ಟಿದ್ದು, ಕೊಲೆ...

ಉದ್ಯಮ ವಿಸ್ತರಣೆಗೆ ‘ಇ-ಹರಾಜು’ ಸುವರ್ಣಾವಕಾಶ

ಚಿಕ್ಕಮಗಳೂರು:  ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮದ್ಯದ ಅಂಗಡಿಗಳ ಲೈಸೆನ್ಸ್ ಇ-ಹರಾಜು ಪ್ರಕ್ರಿಯೆಯು ಜಿಲ್ಲೆಯ ಹಾಗೂ...