Home namma chikmagalur chikamagalur ಕ್ಯಾಂಟೀನ್‌ನಲ್ಲಿ ಆಕಸ್ಮಿಕ ಅಗ್ನಿ ಅವಘಡ
chikamagalurCrime NewsHomeLatest Newsnamma chikmagalur

ಕ್ಯಾಂಟೀನ್‌ನಲ್ಲಿ ಆಕಸ್ಮಿಕ ಅಗ್ನಿ ಅವಘಡ

Share
Share

ಚಿಕ್ಕಮಗಳೂರು: ಮನೆಯೊಂದರಲ್ಲಿ ನಡೆಸುತ್ತಿದ್ದ ಕ್ಯಾಂಟೀನ್‌ನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ.

ಟೌನ್ ಪೊಲೀಸ್ ಠಾಣೆಯ ಸಮೀಪದಲ್ಲೇ ಇರುವ ಸುರೇಶ್ ಮತ್ತು ಅವರ ಪತ್ನಿ ವೆಳ್ಳಿ ಎಂಬುವವರು ಈ ಕ್ಯಾಂಟೀನ್ ನಡೆಸುತ್ತಿದ್ದು, ಬೆಂಕಿಯ ಕೆನ್ನಾಲಿಗೆಗೆ ಕ್ಯಾಂಟೀನ್‌ನಲ್ಲಿದ್ದ ಪೀಠೋಪಕರಣಗಳು, ದಿನಸಿ ಸಾಮಗ್ರಿಗಳು ಸೇರಿದಂತೆ ಹಲವು ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.

ದುರದೃಷ್ಟವಶಾತ್, ಬೆಂಕಿ ಆವರಿಸಿದ ಸಂದರ್ಭದಲ್ಲಿ ಅದನ್ನು ನಂದಿಸಲು ಹೋದ ಸುರೇಶ್ ಅವರ ಪತ್ನಿ ವೆಳ್ಳಿಯವರಿಗೆ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತರುವ ಮೂಲಕ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.

ಏಕಾಏಕಿ ಸಂಭವಿಸಿದ ಈ ಅಗ್ನಿ ಅವಘಡದಿಂದ ಮಾಲೀಕ ಸುರೇಶ್ ಅವರ ಕುಟುಂಬಕ್ಕೆ ಬೃಹತ್ ಪ್ರಮಾಣದ ಆರ್ಥಿಕ ನಷ್ಟ ಉಂಟಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

Accidental fire in the canteen

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ ಬಳಸಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಕನ್ನಡಸೇನೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಭಂವರ್‌ಸಿಂಗ್...

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ

ಮೂಡಿಗೆರೆ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕೊನೆಗೂ ಮಳೆಗಾಲದ ದರ್ಶನವಾಗಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಒಂದೆಡೆ ಆತಂಕ, ಮತ್ತೊಂದೆಡೆ ಹರ್ಷದ ವಾತಾವರಣ ನಿರ್ಮಾಣವಾಗಿದೆ. ಮಳೆಗಾಲ ಆರಂಭವಾಗಿ ತಿಂಗಳು ಕಳೆದರೂ ನಿರೀಕ್ಷಿತ ಪ್ರಮಾಣದಲ್ಲಿ ಬಾರದ...

Related Articles

ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಗುದ್ದಲಿ ಪೂಜೆ

ಚಿಕ್ಕಮಗಳೂರು: ಆರೋಗ್ಯ, ಶಿಕ್ಷಣ ಮತ್ತು ಜನರ ಬದುಕಿಗಾಗಿ ಆದ್ಯತೆಯ ಮೇಲೆ ಕೆಲಸ ಮಾಡಬೇಕಾಗಿರುವುದು ಚುನಾಯಿತ ಪ್ರತಿನಿಧಿಗಳ...

ಹಂದಿ ಬೇಟೆ: 7 ಜನರ ಬಂಧನ

ಕಡೂರು: ತಾಲ್ಲೂಕಿನ ಮಲ್ಲಾಘಟ್ಟ ಗ್ರಾಮದಿಂದ ಸಿಂಗಟಗೆರೆಗೆ ಹೋಗುವ ರಸ್ತೆಯಲ್ಲಿ ಭಾನುವಾರ ಮುಂಜಾನೆ ಹಂದಿ ಬೇಟೆಗೆ ಬಂದಿದ್ದ...

ಕೈಕುಸ್ತಿ(ಪಂಝಾ)ಆಡುತ್ತಿದ್ದ ವೇಳೆ ಯುವಕನ ಸಾವು

ಕಡೂರು:  ಕೈಕುಸ್ತಿ(ಪಂಝಾ)ಆಡುತ್ತಿದ್ದ ಸ್ನೇಹಿತರುಗಳ ನಡುವೆ ನಡೆದ ಮಾತಿನಚಕಮಕಿಯಿಂದ ಮಾರಣಾಂತಿಕ ಹಲ್ಲೆಗೆ ತಿರುಗಿ ಯುವಕನೊಬ್ಬನು ಮೃತಪಟ್ಟಿದ್ದು, ಕೊಲೆ...

ಉದ್ಯಮ ವಿಸ್ತರಣೆಗೆ ‘ಇ-ಹರಾಜು’ ಸುವರ್ಣಾವಕಾಶ

ಚಿಕ್ಕಮಗಳೂರು:  ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮದ್ಯದ ಅಂಗಡಿಗಳ ಲೈಸೆನ್ಸ್ ಇ-ಹರಾಜು ಪ್ರಕ್ರಿಯೆಯು ಜಿಲ್ಲೆಯ ಹಾಗೂ...