Home ಶಾಸಕ ಕೆ.ಎಸ್. ಆನಂದ್ ಆಪ್ತ ಸಹಾಯಕನಿಂದ ಶಿಷ್ಟಾಚಾರ ಉಲ್ಲಂಘನೆ
HomeKadurLatest Newsnamma chikmagalur

ಶಾಸಕ ಕೆ.ಎಸ್. ಆನಂದ್ ಆಪ್ತ ಸಹಾಯಕನಿಂದ ಶಿಷ್ಟಾಚಾರ ಉಲ್ಲಂಘನೆ

Share
Share

ಕಡೂರು: ತಾಲ್ಲೂಕು ಕಚೇರಿಯಲ್ಲಿ ನಡೆದ ಸರ್ಕಾರದ ಪ್ರಮುಖ ಸಭೆಯು ಈಗ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ. ತಾಲ್ಲೂಕಿನ ಅಭಿವೃದ್ಧಿ ಹಾಗೂ ಕಂದಾಯ ಗ್ರಾಮಗಳ ಸ್ಥಿತಿಗತಿಗಳ ಬಗ್ಗೆ ಚರ್ಚಿಸಲು ತಹಶೀಲ್ದಾರ್ ಅವರು ಸಭೆ ಕರೆದಿದ್ದರು. ಈ ಗಂಭೀರ ಸಭೆಯಲ್ಲಿ ಭೂ ದಾಖಲೆಗಳ ಉಪನಿರ್ದೇಶಕರು, ಉಪ ತಹಶೀಲ್ದಾರ್ ಹಾಗೂ ಪಿಡಿಓಗಳಂತಹ ಉನ್ನತ ಶ್ರೇಣಿಯ ಅಧಿಕಾರಿಗಳು ಹಾಜರಿದ್ದರು.

ಆದರೆ, ಸಭೆಯನ್ನು ಮುನ್ನಡೆಸಬೇಕಿದ್ದ ಶಾಸಕ ಕೆ.ಎಸ್. ಆನಂದ್ ಅವರ ಬದಲಿಗೆ ಅವರ ಆಪ್ತ ಸಹಾಯಕ ಮಂಜುನಾಥ್ ಅವರು ವೇದಿಕೆಯಲ್ಲಿ ಕಾಣಿಸಿಕೊಂಡಿರುವುದು ಅಚ್ಚರಿ ಮೂಡಿಸಿದೆ.
ಕೇವಲ ಹಾಜರಿ ಹಾಕುವುದಷ್ಟೇ ಅಲ್ಲದೆ, ಶಾಸಕರಿಗಾಗಿ ಮೀಸಲಿದ್ದ ಅಧಿಕೃತ ಆಸನದಲ್ಲಿ ಕುಳಿತು ಅಧಿಕಾರಿಗಳಿಗೆ ಖಡಕ್ ಸೂಚನೆಗಳನ್ನು ನೀಡುವ ಮೂಲಕ ಮಂಜುನಾಥ್ ಅವರು ಸಭೆಯನ್ನು ನಿಯಂತ್ರಿಸಿದ್ದಾರೆ.

ಈ ದೃಶ್ಯವು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಆಯ್ದ ಜನಪ್ರತಿನಿಧಿಗಳ ಜವಾಬ್ದಾರಿಯನ್ನು ಅವರ ಸಹಾಯಕರು ನಿಭಾಯಿಸುತ್ತಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಮೂಡಿದೆ. ಆಡಳಿತಾತ್ಮಕ ಶಿಷ್ಟಾಚಾರವನ್ನು ಗಾಳಿಗೆ ತೂರಿ ನಡೆದ ಈ ಸಭೆಯು ಪರದೆ ಹಿಂದಿನ ಅಧಿಕಾರ ಕೇಂದ್ರ’ದ ದರ್ಬಾ‌ರ್ನನಂತೆ ಭಾಸವಾಗುತ್ತಿದ್ದು, ಸರ್ಕಾರದ ಗಂಭೀರ ಸಭೆಗಳಲ್ಲಿ ಇಂತಹ ಹಸ್ತಕ್ಷೇಪವು ಆಡಳಿತ ವ್ಯವಸ್ಥೆಯ ಗಾಂಭೀರ್ಯವನ್ನು ಹಾಳುಮಾಡುತ್ತಿದೆ ಎಂಬ ಟೀಕೆಗಳು ವ್ಯಕ್ತವಾಗುತ್ತಿವೆ.

MLA K.S. Anand’s personal assistant violates etiquette

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...