Home namma chikmagalur chikamagalur ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ
chikamagalurHomeLatest Newsnamma chikmagalur

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

Share
Share

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು.

ಜಿ.ಪಂ.ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಇಂದು ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ -೧ ರ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಒಟ್ಟು ೫೨ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಬೀರೂರು ೬, ಚಿಕ್ಕಮಗಳೂರು ೧೧, ಕಡೂರು ೧೦, ಕೊಪ್ಪ ೪, ಮೂಡಿಗೆರೆ ೫, ನರಸಿಂಹರಾಜಪುರ ೪, ಶೃಂಗೇರಿ ೨, ತರೀಕೆರೆ ೧೦, ಕೇಂದ್ರಗಳಾಗಿದ್ದು, ಹೊಸದಾಗಿ ಪರೀಕ್ಷೆ ತೆಗೆದುಕೊಂಡಿರುವ ೧೨,೮೨೯ ವಿದ್ಯಾರ್ಥಿಗಳು, ರಿಪೀಟರ್‍ಸ್ ೭೨೮ ಅಭ್ಯರ್ಥಿಗಳು ಸೇರಿದಂತೆ ಒಟ್ಟು ೧೩,೫೫೭ ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳಲ್ಲಿ ಸಿಸಿಟಿವಿ ಅಳವಡಿಸಿದ್ದು, ಪ್ರತೀ ಪರೀಕ್ಷಾ ಕೇಂದ್ರದ ಸಿಸಿ ಟಿವಿ ವೀಕ್ಷಣೆಗೆ ನಿಯಂತ್ರಣ ಕೊಠಡಿ ಮೂಲಕ ವೆಬ್‌ಕಾಸ್ಟಿಂಗ್ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ದಿನದಂದು ನಿರಂತರ ವಿದ್ಯುತ್ ಸರಬರಾಜು ಮಾಡಲು ಮೆಸ್ಕಾಂ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದ ಅವರು, ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಪ್ರಸ್ತುತ ವರ್ಷ ಪರೀಕ್ಷೆ ಬರೆಯುವ ಪ್ರತೀ ವಿದ್ಯಾರ್ಥಿಗೂ ತಾನು ಪರೀಕ್ಷೆ ಬರೆಯುವ ಕೇಂದ್ರದ ಬಗ್ಗೆ ಶಾಲಾ ಮುಖ್ಯಶಿಕ್ಷಕರು ಮತ್ತು ಸಹಶಿಕ್ಷಕರಿಂದ ಮಾಹಿತಿ ಒದಗಿಸಲು ತಿಳಿಸಲಾಗಿದೆ.

ಪ್ರತೀ ಪರೀಕ್ಷಾ ಕೇಂದ್ರದಲ್ಲಿ ಉತ್ತಮ ಶೌಚಾಲಯ ವ್ಯವಸ್ಥೆ, ಆಸನದ ವ್ಯವಸ್ಥೆ, ಪ್ರತೀ ಕೊಠಡಿಗೆ ಗಾಳಿ-ಬೆಳಕಿನ ವ್ಯವಸ್ಥೆ ಹಾಗೂ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು. ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರದೊಳಗೆ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲ್ಟಟ್ಟ ಅಧಿಕಾರಿ, ಸಿಬ್ಬಂದಿಗಳನ್ನು ಹೊರತುಪಡಿಸಿ ಇತರೆ ವ್ಯಕ್ತಿಗಳು ಕಡ್ಡಾಯವಾಗಿ ಪರೀಕ್ಷಾ ಕೇಂದ್ರದೊಳಗೆ ಪ್ರವೇಶಿಸುವಂತಿಲ್ಲ.

ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ತೆಗೆದುಕೊಂಡು ಹೋಗುವಂತಿಲ್ಲ ಎಂದ ಅವರು, ಪರೀಕ್ಷಾ ಕೇಂದ್ರಗಳ ೨೦೦ ಮೀಟರ್ ಸುತ್ತ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಪ್ರಶ್ನೆಪತ್ರಿಕೆ ಸೋರಿಕೆ ಅಥವಾ ನಕಲು ತಡೆಯಲು ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ತಿಳಿಸಿದರು.

ಗ್ರಾಮೀಣ ಪ್ರದೇಶದಿಂದ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರ ತೋರಿಸಿ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ನಿಗದಿತ ಸಮಯಕ್ಕಿಂತ ಅರ್ಧಗಂಟೆ ಮುಂಚಿತವಾಗಿ ತಲುಪಬೇಕು. ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೆ ನಿರ್ಭೀತಿಯಿಂದ ಪರೀಕ್ಷೆ ಬರೆಯುವಂತೆ ಹೇಳಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ.ಜಯಕುಮಾರ್, ಡಯಟ್ ಪ್ರಾಂಶುಪಾಲ ಸುಂದರೇಶ್, ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ನೋಡಲ್ ಅಧಿಕಾರಿಯಾಗಿ ನೇಮಕವಾಗಿರುವ ದಯಾವತಿ, ಉಪನಿರ್ದೇಶಕ ತಿಮ್ಮರಾಜು ಹಾಗೂ ಎಲ್ಲಾ ಶಾಲೆಗಳ ಮುಖ್ಯೋಪಾಧ್ಯಾಯರು ಹಾಜರಿದ್ದರು.

SSLC exam: Necessary preparations in the district – District Magistrate

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧ ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ’ರಾಷ್ಟ್ರೀಯ ಲೋಕ್ ಅದಾಲತ್’ ಹಮ್ಮಿಕೊಳ್ಳಲಾಗಿದೆ ಎಂದು ಗೌ.ಪ್ರಧಾನ ಜಿಲ್ಲಾ...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ ಸಂಚಾರ) ಬಂದ ಕಾರೊಂದು ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ದುಡುಕುತನದಿಂದ ಡಿಕ್ಕಿ ಹೊಡೆದ ಪರಿಣಾಮ...

Related Articles

ಅಮೃತ್ 2.0 ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ

ಚಿಕ್ಕಮಗಳೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಮೃತ್ 2.0 ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕುಡಿಯುವ ನೀರಿನ...

ವಿಕಲಚೇತನ ವ್ಯಕ್ತಿಯ ₹8 ಲಕ್ಷ ಬ್ಯಾಂಕ್ ಸಾಲ ಕೇವಲ ₹15,000 ಕ್ಕೆ ಇತ್ಯರ್ಥ

ಚಿಕ್ಕಮಗಳೂರು:  ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಮ್ಮಿಕೊಂಡಿದ್ದ ಮೆಗಾ ಲೋಕ ಅದಾಲತ್‌ನಲ್ಲಿ ನ್ಯಾಯಾಂಗದ ವಿಶೇಷ...

ಎಟಿಎಂ ಕಾರ್ಡ್ ಬದಲಿಸಿ ₹3.09 ಲಕ್ಷ ವಂಚನೆ

ಕಡೂರು: ಪಟ್ಟಣದ ಜೈನ್ ಟೆಂಪಲ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಹಣ ಹಿಂಪಡೆಯಲು ಯತ್ನಿಸುತ್ತಿದ್ದ ವೇಳೆ...

ಕೆಪಿಟಿಸಿಎಲ್ ಸಿಎಸ್‌ಆರ್ ಅನುದಾನ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಕಣ್ಣಾವಲಿಗೆ ನೆರವು

ಚಿಕ್ಕಮಗಳೂರು: ಸರ್ಕಾರದ ಅನುದಾನದ ಕೊರತೆ ನಡುವೆ ಕೆಪಿಟಿಸಿಎಲ್ ಸಿಎಸ್‌ಆರ್ (ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ) ಅನುದಾನ...