Home namma chikmagalur chikamagalur ಕುಶಲಕರ್ಮಿಗಳ ಬದುಕಿಗೆ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಹೊಸ ಚೈತನ್ಯ
chikamagalurHomeLatest Newsnamma chikmagalur

ಕುಶಲಕರ್ಮಿಗಳ ಬದುಕಿಗೆ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಹೊಸ ಚೈತನ್ಯ

Share
Share

ಚಿಕ್ಕಮಗಳೂರು: ಸಮಾಜದ ಕಟ್ಟಕಡೆಯ ಕುಶಲಕರ್ಮಿಗಳ ಬದುಕಿನಲ್ಲಿ ಆರ್ಥಿಕ ಕ್ರಾಂತಿ ಉಂಟುಮಾಡುವ ಉದ್ದೇಶದಿಂದ ಜಾರಿಗೆ ತರಲಾದ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ನಗರದ ಆಜಾದ್ ಪಾರ್ಕ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಪ್ರಧಾನಮಂತ್ರಿ ವಿಶ್ವಕರ್ಮ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ನೀಡಿ ಅವರು ಮಾಧ್ಯಮದವರೊಂದಿಗೆ ಮಾತನಾಡಿ ಸಾಂಪ್ರದಾಯಿಕ ಕುಲಕಸುಬುಗಳನ್ನು ಕೇವಲ ಜೀವನೋಪಾಯಕ್ಕೆ ಸೀಮಿತಗೊಳಿಸದೆ, ಅವುಗಳನ್ನು ಆಧುನಿಕ ಮಾರುಕಟ್ಟೆಯ ಬೇಡಿಕೆಗೆ ತಕ್ಕಂತೆ ರೂಪಿಸುವುದು ಈ ಯೋಜನೆಯ ಆಶಯವಾಗಿದೆ. ಉದಾಹರಣೆಗೆ, ಕುಂಬಾರರು ತಯಾರಿಸುವ ಮಣ್ಣಿನ ಪಾತ್ರೆಗಳನ್ನು ಸುಧಾರಿತ ತಂತ್ರಜ್ಞಾನದ ಮೂಲಕ ಆಕರ್ಷಕವಾಗಿ ವಿನ್ಯಾಸಗೊಳಿಸಿ ವಿದೇಶಗಳಿಗೆ ರಫ್ತು ಮಾಡುವ ಹಂತಕ್ಕೆ ಬೆಳೆಸಲಾಗುತ್ತಿದೆ. ಇದರಿಂದ ಗ್ರಾಮೀಣ ಭಾಗದ ಕಲೆಗೆ ಜಾಗತಿಕ ಮನ್ನಣೆ ಸಿಗಲಿದೆ? ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ೨೧ ಕೋಟಿ ಸಾಲ ವಿತರಣೆ
ಚಿಕ್ಕಮಗಳೂರು ಜಿಲ್ಲೆಯೊಂದರಲ್ಲೇ ಈವರೆಗೆ ಅಂದಾಜು ೭,೫೦೦ ಕುಶಲಕರ್ಮಿಗಳು ಯೋಜನೆಯ ಲಾಭ ಪಡೆದಿದ್ದಾರೆ. ಈ ಪೈಕಿ ೪,೦೦೦ ಜನರಿಗೆ ತರಬೇತಿ ನೀಡಲಾಗಿದ್ದು, ವಿವಿಧ ರಾಷ್ಟ್ರೀಕೃತ ಬ್ಯಾಂಕ್‌ಗಳ ಮೂಲಕ ಒಟ್ಟು ೨೧ ಕೋಟಿ ಸಾಲ ಸೌಲಭ್ಯವನ್ನು ವಿತರಿಸಲಾಗಿದೆ. ಶೇ.೫ರಷ್ಟು ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ರೂ. ೧ ಲಕ್ಷದಿಂದ ರೂ.೩ ಲಕ್ಷದವರೆಗೆ ಸಾಲ ನೀಡಲಾಗುತ್ತಿದ್ದು, ಇದು ಕುಶಲಕರ್ಮಿಗಳಿಗೆ ದೊಡ್ಡ ಆಸರೆಯಾಗಿದೆ ಎಂದರು.

ನೋಂದಾಯಿತ ಕುಶಲಕರ್ಮಿಗಳಿಗೆ ಒಂದು ವಾರದ ವೃತ್ತಿ ಪರ ತರಬೇತಿ ನೀಡಲಾಗುತ್ತಿದ್ದು, ಈ ಅವಧಿಯಲ್ಲಿ ಶಿಷ್ಯವೇತನವನ್ನೂ ಒದಗಿಸಲಾಗುತ್ತಿದೆ. ತರಬೇತಿಯ ಯಶಸ್ವಿ ಪೂರ್ಣಗೊಳಿಸುವಿಕೆಯ ನಂತರ, ಸ್ವಂತ ಉದ್ದಿಮೆ ಆರಂಭಿಸಲು ಅನುವಾಗುವಂತೆ ೧೫,೦೦೦ ರೂ. ಮೌಲ್ಯದ ಸುಧಾರಿತ ಪರಿಕರಗಳ ಕಿಟ್ ಅನ್ನು ಸರ್ಕಾರ ಉಚಿತವಾಗಿ ನೀಡುತ್ತಿದೆ ಎಂದು ತಿಳಿಸಿದರು.

ಅನಿಲ ಅಭಾವ: ಶೀಘ್ರವೇ ಪರಿಹಾರ
ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಅಭಾವದ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಗಲ್ಫ್ ರಾಷ್ಟ್ರಗಳಲ್ಲಿನ ಯುದ್ಧದ ಪರಿಸ್ಥಿತಿಯಿಂದಾಗಿ ಆಮದಿನಲ್ಲಿ ಅಲ್ಪಮಟ್ಟಿನ ವ್ಯತ್ಯಯವಾಗಿದೆ. ಈ ಕುರಿತು ವಿದೇಶಾಂಗ ಸಚಿವರೊಂದಿಗೆ ಚರ್ಚಿಸಲಾಗಿದೆ. ಜಿಲ್ಲಾಧಿಕಾರಿಗಳ ವರದಿ ಪ್ರಕಾರ, ಗೃಹಬಳಕೆಯ ಅನಿಲ ಪೂರೈಕೆಯಲ್ಲಿ ಯಾವುದೇ ತೊಂದರೆಯಿಲ್ಲ. ವಾಣಿಜ್ಯ ಬಳಕೆಯ ಅನಿಲ ಸಮಸ್ಯೆಯೂ ಇನ್ನೆರಡು ದಿನಗಳಲ್ಲಿ ಸುಗಮಗೊಳ್ಳಲಿದೆ ಎಂದು ಭರವಸೆ ನೀಡಿದರು.

ಮೂರು ದಿನಗಳ ಕಾಲ ನಡೆಯಲಿರುವ ಈ ಮೇಳದಲ್ಲಿ ಒಟ್ಟು ೫೦ ಮಳಿಗೆಗಳನ್ನು ಸ್ಥಾಪಿಸಲಾಗಿದ್ದು, ರಾಜ್ಯದ ವಿವಿಧೆಡೆಯಿಂದ ಆಗಮಿಸಿರುವ ಕುಶಲಕರ್ಮಿಗಳು ತಮ್ಮ ಕಲಾಕೃತಿಗಳನ್ನು ಪ್ರದರ್ಶನ ಹಾಗೂ ಮಾರಾಟಕ್ಕೆ ಇರಿಸಿದ್ದಾರೆ.

ಕೇಂದ್ರ ಪರಿಸರ ಮೌಲ್ಯಮಾಪನ ಸಮಿತಿ ಅಧ್ಯಕ್ಷ ಎ.ಎನ್.ಮಹೇಶ್, ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ರಾಷ್ಟ್ರೀಯ ಸ್ಟೀರಿಂಗ್ ಸಮಿತಿಯ ಸದಸ್ಯರಾದ ಹೆಚ್.ಸಿ.ಕಲ್ಮರುಡಪ್ಪ, ಭಾಸ್ಕರ್, ಸಂತೋಷ್ ಕೋಟ್ಯಾನ್, ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಮತ್ತಿತರರು ಇದ್ದರು.

Pradhan Mantri Vishwakarma Yojana brings new vitality to the lives of artisans

 

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧ ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ’ರಾಷ್ಟ್ರೀಯ ಲೋಕ್ ಅದಾಲತ್’ ಹಮ್ಮಿಕೊಳ್ಳಲಾಗಿದೆ ಎಂದು ಗೌ.ಪ್ರಧಾನ ಜಿಲ್ಲಾ...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ ಸಂಚಾರ) ಬಂದ ಕಾರೊಂದು ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ದುಡುಕುತನದಿಂದ ಡಿಕ್ಕಿ ಹೊಡೆದ ಪರಿಣಾಮ...

Related Articles

ಅಮೃತ್ 2.0 ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ

ಚಿಕ್ಕಮಗಳೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಮೃತ್ 2.0 ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕುಡಿಯುವ ನೀರಿನ...

ವಿಕಲಚೇತನ ವ್ಯಕ್ತಿಯ ₹8 ಲಕ್ಷ ಬ್ಯಾಂಕ್ ಸಾಲ ಕೇವಲ ₹15,000 ಕ್ಕೆ ಇತ್ಯರ್ಥ

ಚಿಕ್ಕಮಗಳೂರು:  ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಮ್ಮಿಕೊಂಡಿದ್ದ ಮೆಗಾ ಲೋಕ ಅದಾಲತ್‌ನಲ್ಲಿ ನ್ಯಾಯಾಂಗದ ವಿಶೇಷ...

ಎಟಿಎಂ ಕಾರ್ಡ್ ಬದಲಿಸಿ ₹3.09 ಲಕ್ಷ ವಂಚನೆ

ಕಡೂರು: ಪಟ್ಟಣದ ಜೈನ್ ಟೆಂಪಲ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಹಣ ಹಿಂಪಡೆಯಲು ಯತ್ನಿಸುತ್ತಿದ್ದ ವೇಳೆ...

ಕೆಪಿಟಿಸಿಎಲ್ ಸಿಎಸ್‌ಆರ್ ಅನುದಾನ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಕಣ್ಣಾವಲಿಗೆ ನೆರವು

ಚಿಕ್ಕಮಗಳೂರು: ಸರ್ಕಾರದ ಅನುದಾನದ ಕೊರತೆ ನಡುವೆ ಕೆಪಿಟಿಸಿಎಲ್ ಸಿಎಸ್‌ಆರ್ (ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ) ಅನುದಾನ...