Home ಹೆಣ್ಣುಮಕ್ಕಳಿಂದ ತಂದೆಯ ಅಂತ್ಯಸಂಸ್ಕಾರ
HomeKadurLatest News

ಹೆಣ್ಣುಮಕ್ಕಳಿಂದ ತಂದೆಯ ಅಂತ್ಯಸಂಸ್ಕಾರ

Share
Share

ಕಡೂರು: ಲಿಂಗ ಸಮಾನತೆಯನ್ನು ಸಾರುವ ಅಪರೂಪದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಬೀರೂರಿನಲ್ಲಿ ನಡೆದಿದ್ದು, ಹೆಣ್ಣುಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಬೀರೂರಿನ ಭಾವಸಾರ ಸಮಾಜದ ವಿಶ್ವನಾಥ್ ಇತ್ತೀಚೆಗೆ ನಿಧನರಾಗಿದ್ದು, ಅವರಿಗೆ ಗಂಡು ಮಕ್ಕಳಿಲ್ಲದ ಕಾರಣ ಹಿರಿಯ ಮಗಳು ಐಶ್ವರ್ಯ ಅವರೇ ತಂದೆಯ ಅಂತಿಮ ವಿಧಿವಿಧಾನಗಳನ್ನು ಪೂರೈಸಲು ನಿರ್ಧರಿಸಿದರು.

ಸಂಪ್ರದಾಯದಂತೆ ಹೆಗಲ ಮೇಲೆ ಮಣ್ಣಿನ ಕುಡಿಕೆ ಹೊತ್ತು ಮೃತದೇಹದ ಸುತ್ತ ಪ್ರದಕ್ಷಿಣೆ ಹಾಕಿ ಅಂತ್ಯಕ್ರಿಯೆ ನೆರವೇರಿಸುವ ಮೂಲಕ ಈ ಯುವತಿಯರು ಗಮನ ಸೆಳೆದಿದ್ದಾರೆ. ಈ ಮಹತ್ವದ ಕಾರ್ಯದಲ್ಲಿ ಐಶ್ವರ್ಯ ಅವರಿಗೆ ಅವರ ತಂಗಿ ಮತ್ತು ಭಾವ ಕೂಡ ಸಾಥ್ ನೀಡಿದ್ದಾರೆ.

ಸಾಮಾನ್ಯವಾಗಿ ಅಂತ್ಯಸಂಸ್ಕಾರದ ವಿಧಿವಿಧಾನಗಳನ್ನು ಗಂಡುಮಕ್ಕಳೇ ಮಾಡಬೇಕು ಎಂಬ ಸಂಪ್ರದಾಯ ರೂಢಿಯಲ್ಲಿದೆ. ಆದರೆ ಕುಟುಂಬದ ಹಿರಿಯರು ಈ ಹೆಣ್ಣುಮಕ್ಕಳ ನಿರ್ಧಾರಕ್ಕೆ ಸಂಪೂರ್ಣ ಬೆಂಬಲ ಸೂಚಿಸಿ ಒಪ್ಪಿಗೆ ನೀಡಿದ್ದು ವಿಶೇಷವಾಗಿತ್ತು.

ಬೀರೂರಿನ ಹಿಂದೂ ರುದ್ರಭೂಮಿಯಲ್ಲಿ ನಡೆದ ಈ ಅಂತ್ಯಕ್ರಿಯೆಯು ಲಿಂಗ ತಾರತಮ್ಯವನ್ನು ಮೆಟ್ಟಿ ನಿಂತಿದ್ದು, ಯುವತಿಯ ಈ ಧೈರ್ಯದ ನಿರ್ಧಾರಕ್ಕೆ ಸಮಾಜದ ಗಣ್ಯರು ಹಾಗೂ ಸ್ನೇಹಿತರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

Daughters cremate father

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧ ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ’ರಾಷ್ಟ್ರೀಯ ಲೋಕ್ ಅದಾಲತ್’ ಹಮ್ಮಿಕೊಳ್ಳಲಾಗಿದೆ ಎಂದು ಗೌ.ಪ್ರಧಾನ ಜಿಲ್ಲಾ...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ ಸಂಚಾರ) ಬಂದ ಕಾರೊಂದು ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ದುಡುಕುತನದಿಂದ ಡಿಕ್ಕಿ ಹೊಡೆದ ಪರಿಣಾಮ...

Related Articles

ಅಮೃತ್ 2.0 ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ

ಚಿಕ್ಕಮಗಳೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಮೃತ್ 2.0 ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕುಡಿಯುವ ನೀರಿನ...

ವಿಕಲಚೇತನ ವ್ಯಕ್ತಿಯ ₹8 ಲಕ್ಷ ಬ್ಯಾಂಕ್ ಸಾಲ ಕೇವಲ ₹15,000 ಕ್ಕೆ ಇತ್ಯರ್ಥ

ಚಿಕ್ಕಮಗಳೂರು:  ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಮ್ಮಿಕೊಂಡಿದ್ದ ಮೆಗಾ ಲೋಕ ಅದಾಲತ್‌ನಲ್ಲಿ ನ್ಯಾಯಾಂಗದ ವಿಶೇಷ...

ಎಟಿಎಂ ಕಾರ್ಡ್ ಬದಲಿಸಿ ₹3.09 ಲಕ್ಷ ವಂಚನೆ

ಕಡೂರು: ಪಟ್ಟಣದ ಜೈನ್ ಟೆಂಪಲ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಹಣ ಹಿಂಪಡೆಯಲು ಯತ್ನಿಸುತ್ತಿದ್ದ ವೇಳೆ...

ಕೆಪಿಟಿಸಿಎಲ್ ಸಿಎಸ್‌ಆರ್ ಅನುದಾನ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಕಣ್ಣಾವಲಿಗೆ ನೆರವು

ಚಿಕ್ಕಮಗಳೂರು: ಸರ್ಕಾರದ ಅನುದಾನದ ಕೊರತೆ ನಡುವೆ ಕೆಪಿಟಿಸಿಎಲ್ ಸಿಎಸ್‌ಆರ್ (ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ) ಅನುದಾನ...