ಚಿಕ್ಕಮಗಳೂರು : ಚಲಿಸುತ್ತಿದ್ದ ಕಾರಿನ ಮೇಲೆ ಮರದ ರೀಪರ್ ತುಂಬಿದ್ದ ಲಾರಿ ಪಲ್ಟಿಯಾಗಿ ಕಾರ್ ಅಪ್ಪಚ್ಚಿ ಯಾದ್ರು ಮೂವರು ಅದೃಷ್ಟವಶಾತ್ ಪವಾಡಸದೃಶದಂತೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಲಕ್ಕಾ ಕ್ರಾಸ್ ಬಳಿ ಕಳೆದ ರಾತ್ರಿ ನಡೆದಿದೆ.
ಕಾರಿನಲ್ಲಿದ್ದ ಚಿಕ್ಕಮಗಳೂರಿನ ಕಲ್ಯಾಣ ನಗರದ ಪ್ರಭಾಕರ್, ನಳಿನ ಹಾಗೂ ನೇಹಾ ಎಂಬುವವರು ಅದೃಷ್ಟವಶಾತ್ ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ರಾಷ್ಟ್ರೀಯ ಹೆದ್ದಾರಿ 173 ರ ಮೂಲಕ ಕಡೂರಿ ನಿಂದ ಚಿಕ್ಕಮಗಳೂರಿಗೆ ಬರುತ್ತಿತ್ತು.
ರೀಪರ್ ತುಂಬಿದ್ದ ಲಾರಿ ಚಿಕ್ಕಮಗಳೂರಿನಿಂದ ಕಡೂರು ಕಡೆ ಹೊರಟಿತ್ತು. ಲಕ್ಯಾ ಕ್ರಾಸ್ ಬಳಿ ನಿಯಂತ್ರಣ ಕಳೆದುಕೊಂಡ ಲಾರಿ ಪಲ್ಟಿಯಾಗಿದೆ. ಈ ವೇಳೆ ಲಾರಿಯಲ್ಲಿ ತುಂಬಲಾಗಿದ್ದ ರೀಪರ್ ಗಳು ಏಕಾಏಕಿ ಕಾರಿನ ಮೇಲೆ ಸಂಪೂರ್ಣವಾಗಿ ಕುಸಿದು ಬಿದ್ದು ಕಾರು ಜಖಂಗೊಂಡಿದೆ ಆದರೂ, ಕಾರಿನಲ್ಲಿದ್ದ ಮೂವರು ಆಶ್ಚರ್ಯಕರ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಲಾರಿಯ ಚಾಲಕ ಹಾಗೂ ಕ್ಲೀನರ್ ಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ರವಾನಿಸಲಾಗಿದೆ. ಘಟನೆಯಿಂದಾಗಿ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು.
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
A lorry loaded with Reaper overturned near Lakka Cross
Leave a comment