Home namma chikmagalur chikamagalur ಕಳಸ ಸೇರಿದಂತೆ ಜಿಲ್ಲೆಯ ವಿವಿಧ ಕಡೆ ಮಳೆ
chikamagalurHomeLatest Newsnamma chikmagalur

ಕಳಸ ಸೇರಿದಂತೆ ಜಿಲ್ಲೆಯ ವಿವಿಧ ಕಡೆ ಮಳೆ

Share
Share

ಕಳಸ: ದಕ್ಷಿಣ ಕಾಶಿ ಎಂದೇ ಪ್ರಸಿದ್ದಿಯಾದ ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಭಾನುವಾರ ಪವಾಡ ಸದೃಶ ಘಟನೆಯೊಂದು ನಡೆದಿದೆ. ನಾಡಿನ ಸುವೃಷ್ಟಿಗಾಗಿ ಮತ್ತು ಸಮೃದ್ಧ ಮಳೆಗಾಗಿ ಕಳಸದ ಶ್ರೀ ಕಳಸೇಶ್ವರ ಸ್ವಾಮಿಗೆ ಭಕ್ತರು ಹಾಗೂ ಮಲೆನಾಡಿಗರು ವಿಶೇಷ ಪೂಜೆ ಹಮ್ಮಿಕೊಂಡಿದ್ದರು.

ಬೆಳಿಗ್ಗೆಯಿಂದಲೇ ಭಕ್ತಿಭಾವದಿಂದ ಶತಾರುದ್ರಾಭಿಷೇಕ, ಏಕಾದಶ ರುದ್ರಹೋಮ ಸೇರಿದಂತೆ ವರುಣ ದೇವನನ್ನು ಪ್ರಸನ್ನಗೊಳಿಸಲು ಹಲವು ಧಾರ್ಮಿಕ ವಿಧಿವಿಧಾನಗಳು ನಡೆದವು. ಆದರೆ, ಅಚ್ಚರಿಯೆಂಬಂತೆ ಈ ಪೂಜೆಗಳು ಸಂಪೂರ್ಣವಾಗಿ ಮುಗಿಯುವ ಮೊದಲೇ ಕಾಫಿನಾಡಿನ ಮಲೆನಾಡು ಭಾಗದಲ್ಲಿ ವರುಣದೇವ ಅಬ್ಬರಿಸಲು ಶುರುಮಾಡಿದ್ದಾನೆ.

ಕಳಸ, ಶೃಂಗೇರಿ, ಎನ್.ಆರ್. ಪುರ, ಮುತ್ತೋಡಿ, ಹೊರನಾಡು, ಕುದುರೆಮುಖ ಹಾಗೂ ಹಿರೇಬೈಲ್ ಭಾಗಗಳಲ್ಲಿ ಮಳೆ ಸುರಿದಿದ್ದು, ಮಲೆನಾಡಿಗರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಕಳೆದ ಕೆಲವು ದಿನಗಳಿಂದ ತೀವ್ರ ಬಿಸಿಲಿನ ಬೇಗೆಯಿಂದಾಗಿ ಕಾಫಿ ಮತ್ತು ಅಡಿಕೆ ತೋಟಗಳಿಗೆ ನೀರು ಹರಿಸಲು ಬೆಳೆಗಾರರು ಹರಸಾಹಸ ಪಡುತ್ತಿದ್ದರು. ಇದೀಗ ಸುರಿದ ಮಳೆಯಿಂದಾಗಿ ಮುಂದಿನ ಕನಿಷ್ಠ 15 ದಿನಗಳ ಕಾಲ ತೋಟಗಳಿಗೆ ನೀರು ಹರಿಸುವ ಅವಶ್ಯಕತೆ ಇಲ್ಲದಂತಾಗಿದ್ದು, ರೈತರು ನಿಟ್ಟುಸಿರು ಬಿಟ್ಟಿದ್ದಾರೆ.

ಕಳಸೇಶ್ವರನಿಗೆ ‘ಉಪೇ’ ಎಂದು ಜಯಘೋಷ ಹಾಕುತ್ತಿರುವ ಮಲೆನಾಡಿಗರು, ದೇವರ ಪೂಜೆಗೆ ತಕ್ಷಣವೇ ಮಳೆರಾಯ ಸ್ಪಂದಿಸಿದ್ದಕ್ಕೆ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ಈ ಮಳೆಯು ಕಾಫಿ ಬೆಳೆಗಾರರಲ್ಲಿ ಹೊಸ ಆಶಾಭಾವನೆಯನ್ನು ಮೂಡಿಸಿದ್ದು, ಮಲೆನಾಡಿನ ಹಸಿರು ಮತ್ತೆ ಕಳೆಗಟ್ಟುವಂತೆ ಮಾಡಿದೆ.

Rain in various parts of the district including Kalasa

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧ ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ’ರಾಷ್ಟ್ರೀಯ ಲೋಕ್ ಅದಾಲತ್’ ಹಮ್ಮಿಕೊಳ್ಳಲಾಗಿದೆ ಎಂದು ಗೌ.ಪ್ರಧಾನ ಜಿಲ್ಲಾ...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ ಸಂಚಾರ) ಬಂದ ಕಾರೊಂದು ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ದುಡುಕುತನದಿಂದ ಡಿಕ್ಕಿ ಹೊಡೆದ ಪರಿಣಾಮ...

Related Articles

ಅಮೃತ್ 2.0 ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ

ಚಿಕ್ಕಮಗಳೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಮೃತ್ 2.0 ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕುಡಿಯುವ ನೀರಿನ...

ವಿಕಲಚೇತನ ವ್ಯಕ್ತಿಯ ₹8 ಲಕ್ಷ ಬ್ಯಾಂಕ್ ಸಾಲ ಕೇವಲ ₹15,000 ಕ್ಕೆ ಇತ್ಯರ್ಥ

ಚಿಕ್ಕಮಗಳೂರು:  ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಮ್ಮಿಕೊಂಡಿದ್ದ ಮೆಗಾ ಲೋಕ ಅದಾಲತ್‌ನಲ್ಲಿ ನ್ಯಾಯಾಂಗದ ವಿಶೇಷ...

ಎಟಿಎಂ ಕಾರ್ಡ್ ಬದಲಿಸಿ ₹3.09 ಲಕ್ಷ ವಂಚನೆ

ಕಡೂರು: ಪಟ್ಟಣದ ಜೈನ್ ಟೆಂಪಲ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಹಣ ಹಿಂಪಡೆಯಲು ಯತ್ನಿಸುತ್ತಿದ್ದ ವೇಳೆ...

ಕೆಪಿಟಿಸಿಎಲ್ ಸಿಎಸ್‌ಆರ್ ಅನುದಾನ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಕಣ್ಣಾವಲಿಗೆ ನೆರವು

ಚಿಕ್ಕಮಗಳೂರು: ಸರ್ಕಾರದ ಅನುದಾನದ ಕೊರತೆ ನಡುವೆ ಕೆಪಿಟಿಸಿಎಲ್ ಸಿಎಸ್‌ಆರ್ (ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ) ಅನುದಾನ...