ಚಿಕ್ಕಮಗಳೂರು: ಎ ಐ ಕೃತಕ ಬುದ್ಧಿಮತ್ತೆ ಸೇರಿದಂತೆ ನೂತನ ತಂತ್ರಜ್ಞಾನಗಳನ್ನು ಯುವಜನತೆ ಇತಿ ಮಿತಿಯಲ್ಲಿ ಬಳಸಬೇಕು ಎಂದು ಎ ಐ ಟಿ ಯು ಸಿ ರಾಜ್ಯ ಉಪಾಧ್ಯಕ್ಷ ಬಿ.ಅಮ್ಜದ್ ಸಲಹೆ ಮಾಡಿದರು.
ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್ ಬಳಗದಿಂದ ನಗರದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ ಎಐ ಕೃತಕ ಬುದ್ಧಿಮತ್ತೆ ಮತ್ತು ನೂತನ ತಂತ್ರಜ್ಞಾನಗಳ ಬಳಕೆ ಕುರಿತ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾನುವಾರ ಅವರು ಮಾತನಾಡಿದರು.
ದೇಶದ ಅಭಿವೃದ್ಧಿಗೆ ನೂತನ ತಂತ್ರಜ್ಞಾನಗಳು ಅತ್ಯಗತ್ಯ ಮತ್ತು ಪೂರಕ ವಾಗಿರುವುದು ಒಂದೆಡೆಯಾದರೆ ಇನ್ನೊಂದೆಡೆ ಅವುಗಳ ದು?ರಿಣಾಮ ರಾ?ದ ಜನತೆಯ ಮೇಲಾಗುತ್ತಿದೆ, ಮೊಬೈಲ್, ಕಂಪ್ಯೂಟರ್, ಫೇಸ್ಬುಕ್ ಸೇರಿದಂತೆ ಆಧುನಿಕ ತಂತ್ರಜ್ಞಾನಗಳ ಮಿತಿಮೀರಿದ ಬಳಕೆಯಿಂದಾಗಿ ವಿದ್ಯಾರ್ಥಿಗಳು, ಯುವಜನತೆ ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ ಎಂದು ವಿ?ದಿಸಿದರು.
ಸಮಾರೋಪ ನುಡಿಗಳನ್ನಾಡಿದ ಐ ಐ ಪಿ ಸಂಸ್ಥಾಪಕ ನಂಜೇಶ್ ಬೆಣ್ಣೂರು ಈ ಶಿಬಿರದಲ್ಲಿ ಎರಡು ದಿನಗಳ ಕಾಲ ಕಲಿತ ವಿ?ಯಗಳನ್ನು ಶಿಬಿರಾರ್ಥಿಗಳು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು, ಯುವಜನತೆ ಮತ್ತು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಇಂತಹ ಶಿಬಿರಗಳನ್ನು ರಾಜ್ಯಮಟ್ಟದಲ್ಲೂ ಆಯೋಜಿಸಬೇಕು ಎಂದು ಸಲಹೆ ಮಾಡಿದರು.
ಶರಣ ಸಾಹಿತ್ಯ ಪರಿ?ತ್ತಿನ ಜಿಲ್ಲಾಧ್ಯಕ್ಷ ರವೀಶ್ ಕ್ಯಾತನಬೀಡು ಮಾತನಾಡಿ ಯುವಜನರಿಗೆ ಅತ್ಯಗತ್ಯವಾದ ಇಂತಹ ಶಿಬಿರಗಳನ್ನು ಶಾಲಾ ಕಾಲೇಜುಗಳಲ್ಲೂ ನಡೆಸಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ರಾಜ್ಯಾಧ್ಯಕ್ಷ ಎನ್.ರಾಜು ಹೊನ್ನ ಬಿತ್ತೇವು ಹೊಲಕೆಲ್ಲ ಬಳಗದಿಂದ ಮುಂಬರುವ ದಿನಗಳಲ್ಲಿ ಜಿಲ್ಲಾ ಅಥವಾ ರಾಜ್ಯಮಟ್ಟದ ಸಮ್ಮೇಳನವನ್ನು ನಡೆಸಲಾಗುವುದು, ವಿದ್ಯಾರ್ಥಿಗಳು ಮತ್ತು ಯುವಜನತೆಯನ್ನು ಜಾಗೃತಿಗೊಳಿಸುವ ನಿಟ್ಟಿನಲ್ಲಿ ಕೃತಕ ಬುದ್ಧಿಮತ್ತೆ ಸೇರಿದಂತೆ ನೂತನ ತಂತ್ರಜ್ಞಾನಗಳ ಕುರಿತ ತರಬೇತಿ ಶಿಬಿರಗಳನ್ನು ಜಿಲ್ಲಾಧ್ಯಂತ ನಡೆಸಲಾಗುವುದು ಎಂದು ತಿಳಿಸಿದರು.
ಹಾಸನ ನವ್ಕಿನ್ ಇಂಜಿನಿಯರಿಂಗ್ ಕಾಲೇಜಿನ ಎ ಐ ವಿಭಾಗದ ಮುಖ್ಯಸ್ಥ ಪ್ರೊ,ವಿವೇಕಾನಂದ, ಬೆಂಗಳೂರಿನ ಪತ್ರಕರ್ತ ಇಸ್ಮಾಯಿಲ್, ರೈತ ಸಂಘದ ಮುಖಂಡ ಗುರುಶಾಂತಪ್ಪ, ಚಿಕ್ಕಮಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಸಿ.ಡಿ.ಚಂದ್ರೇಗೌಡ, ಸಾಹಿತಿ ಡಿ.ಎಂ. ಮಂಜುನಾಥ ಸ್ವಾಮಿ, ರವೀಶ್ ಜಾನ್ ಸಾಲೆ, ನಟರಾಜ್ ಎಸ್ ಕೊಪ್ಪಲು, ವಿಜಯಕುಮಾರ್ ಪಿಳ್ಳೇನಹಳ್ಳಿ, ಚೇತನ್ ಕುಮಾರ್ ಉಪಸ್ಥಿತರಿದ್ದರು.
New technology should be used by young people in moderation.
Leave a comment