Home Crime News ಜೇನು ನೊಣಗಳ ದಾಳಿಗೆ ರೈತನ ಬಲಿ
Crime NewsHomeKadurLatest Newsnamma chikmagalur

ಜೇನು ನೊಣಗಳ ದಾಳಿಗೆ ರೈತನ ಬಲಿ

Share
Share

ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಜೇನು ನೊಣಗಳ ದಾಳಿಗೆ ರೈತರೊಬ್ಬರು ಬಲಿಯಾಗಿರುವ ದಾರುಣ ಘಟನೆ ನಡೆದಿದೆ.

ತೋಟದಲ್ಲಿ ಕೆಲಸ ಮಾಡುತ್ತಿದ್ದ 61 ವರ್ಷದ ಕರಿಯಾನಾಯ್ಕ ಎಂಬುವವರ ಮೇಲೆ ಜೇನು ಹುಳಗಳು ಏಕಾಏಕಿ ದಾಳಿ ನಡೆಸಿದ್ದು, ಈ ವೇಳೆ ಅವರು ತೀವ್ರವಾಗಿ ಅಸ್ವಸ್ಥಗೊಂಡಿದ್ದರು.

ಕೂಡಲೇ ಅವರನ್ನು ಸಖರಾಯಪಟ್ಟಣದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಯಿತು.

ಆದರೆ ಪರಿಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಮಗಳೂರಿಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.

ಈ ಘಟನೆಯಲ್ಲಿ ಕರಿಯಾನಾಯ್ಕ ಅವರ ಮಗ ಪ್ರದೀಪ್ ಅವರ ಮೇಲೂ ಜೇನು ಹುಳಗಳು ದಾಳಿ ಮಾಡಿದ್ದರೂ ಸಹ, ಅವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Farmer killed in bee attack

Share

Leave a comment

Leave a Reply

Your email address will not be published. Required fields are marked *

Don't Miss

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್ ಯೋಜನೆಯಡಿ ಬೋರ್‌ವೆಲ್ ಕಾಮಗಾರಿ ನಿರ್ವಹಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯೊಂದಿಗೆ ಮಾಡಿಕೊಂಡಿದ್ದ...

ಅಕ್ರಮ ಮದ್ಯ ಮಾರಾಟ-ಐವರು ಆರೋಪಿ ಬಂಧನ

ಚಿಕ್ಕಮಗಳೂರು: ಜಿಲ್ಲೆಯ ವಿವಿಧೆಡೆ ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಮದ್ಯ ಸೇವನೆಗೆ ಅವಕಾಶ ಮಾಡಿಕೊಡುತ್ತಿದ್ದ ಅಡ್ಡೆಗಳ ಮೇಲೆ ಪೊಲೀಸರು ಬಿರುಗಾಳಿ ದಾಳಿ ನಡೆಸಿದ್ದು, ಮಹಿಳೆ ಸೇರಿ ಐವರು ಆರೋಪಿಗಳನ್ನು...

Related Articles

ವಿಶ್ವವಿದ್ಯಾಲಯ ವಿದ್ಯಾ ಶಾಲೆಯ ನವೀಕೃತ ಕಟ್ಟಡ ಲೋಕಾರ್ಪಣೆ

ಚಿಕ್ಕಮಗಳೂರು: 105 ವರ್ಷ ಹಳೆಯ ವಿಶ್ವವಿದ್ಯಾಲಯ ವಿದ್ಯಾ ಶಾಲೆಯ ನವೀಕೃತ ಕಟ್ಟಡ ಹಾಗೂ ಆಟದ ಮೈದಾನ...

ಎರಡು ದೇವಸ್ಥಾನಗಳ ಬೀಗ ಒಡೆದು ಚಿನ್ನಾಭರಣ ಕಳವು

ಚಿಕ್ಕಮಗಳೂರು: ಒಂದೇ ದಿನ ಎರಡು ದೇವಸ್ಥಾನಗಳ ಬೀಗ ಒಡೆದು ನಗದು ಹಾಗೂ ಚಿನ್ನಾಭರಣಗಳನ್ನು ದೋಚಿರುವ ಘಟನೆ...

ನಗರದಲ್ಲಿ ಗ್ಯಾಂಗ್ ವಾರ್ ಸ್ವಯಂಪ್ರೇರಿತ ಪ್ರಕರಣ ದಾಖಲು

ಚಿಕ್ಕಮಗಳೂರು: ನಗರದ ಐ.ಜಿ ರಸ್ತೆಯಲ್ಲಿ ಸಾರ್ವಜನಿಕರ ನೆಮ್ಮದಿಗೆ ಭಂಗ ತರುವಂತೆ ಯುವಕರ ಗುಂಪೊಂದು ಭೀಕರವಾಗಿ ಬಡಿದಾಡಿಕೊಂಡಿರುವ...

ಸತ್ತಿಹಳ್ಳಿ ಗ್ರಾಮದಲ್ಲಿ ಪತಿಯಿಂದ ಪತ್ನಿಯ ಮೇಲೆ ಹಲ್ಲೆ

ಚಿಕ್ಕಮಗಳೂರು: ಕುಡಿತದ ದಾಸನಾಗಿ, ಹೆಂಡತಿಯ ನಡತೆಯ ಮೇಲೆ ಇಲ್ಲಸಲ್ಲದ ಅನುಮಾನ ಪಟ್ಟು ಸೌದೆ ಬಡಿಗೆ ಹಾಗೂ...