Home namma chikmagalur chikamagalur ಗ್ರಾಮೀಣ ಭಾಗದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ವಿವಾರಣೆಗೆ ಮನವಿ
chikamagalurHomeLatest Newsnamma chikmagalur

ಗ್ರಾಮೀಣ ಭಾಗದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ವಿವಾರಣೆಗೆ ಮನವಿ

Share
Share

ಚಿಕ್ಕಮಗಳೂರು: ‌ಗ್ರಾಮೀಣ ಭಾಗದ ಕುಟುಂಬಗಳಿಗೆ ಗ್ಯಾಸ್ ಏಜೆನ್ಸಿಗಳು ಸಿಲಿಂಡರ್ ಪೂರೈಸುತ್ತಿಲ್ಲ. ಅಧಿಕ ಹಣದಾಸೆಗಾಗಿ ಏಜೆನ್ಸಿಗಳು ಸಿಲಿಂಡರ್‌ನ್ನು ಮಾರಾಟ ಮಾಡಿ, ಗ್ರಾಮಸ್ಥರಿಗೆ ತೀವ್ರ ತೊಂದರೆ ನೀಡುತ್ತಿವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‌ಶೆಟ್ಟಿ ಬಣ) ಜಿಲ್ಲಾ ಘಟಕವು ಸೋ ಮವಾರ ಜಿಲ್ಲಾಡಳಿತಕ್ಕೆ ದೂರು ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಹಾಯಕ ನವೀನ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಕರವೇ ಜಿಲ್ಲಾ ಉಸ್ತುವಾರಿ ಅಧ್ಯಕ್ಷ ದಿನೇಶ್ ಲಕ್ಯಾ ಮತ್ತು ಸಖರಾಯಪಟ್ಟಣ ಹೋಬಳಿಯ ಅನೇಕ ಗ್ರಾಮಗಳಿಗೆ ಅನಿಲ ಸಂಪರ್ಕ ನಿಗಧಿತ ಸಮಯಕ್ಕೆ ಆಗುತ್ತಿಲ್ಲ. ಗ್ಯಾಸ್ ಏಜೆನ್ಸಿಗಳು ಗ್ರಾಮಸ್ಥರಿಗೆ ತಲುಪುವ ಸಿಲಿಂಡರ್ ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿವೆ ಎಂದರು.

ಗ್ರಾಮೀಣ ಪ್ರದೇಶದಲ್ಲಿ ಕಳೆದ ಹತ್ತು ದಿನಗಳಿಂದ ಸಿಲಿಂಡರ್ ಪೂರೈಸುತ್ತಿಲ್ಲ. ಇದರಿಂದ ಜನಸಾ ಮಾನ್ಯರಿಗೆ ತುಂಬಾ ಸಮಸ್ಯೆಯಾಗಿದೆ. ಇಲ್ಲಿರುವ ಗ್ರಾಮಸ್ಥರಿಗೆ ವಾಹನಗಳು ಇರುವುದಿಲ್ಲ. ಹೀಗಾಗಿ ಏಜೆನ್ಸಿ ಗಳು ಸಿಲಿಂಡರ್‌ಗಳನ್ನು ಹೋಟೆಲ್ ಉದ್ಯಮಕ್ಕೆ ದುಬಾರಿ ಬೆಲೆಗೆ ಮಾರಾಟ ಮಾಡಿಕೊಂಡು ವೈಯಕ್ತಿಕವಾ ಗಿ ಲಾಭ ಮಾಡಿಕೊಳ್ಳುತ್ತಿವೆ ಎಂದು ದೂರಿದರು.

ಇತ್ತೀಚೆಗೆ ಗ್ಯಾಸ್ ಏಜೆನ್ಸಿಗಳು ಮನೆ ಬಾಗಿಲಿಗೆ ಸಿಲಿಂಡರ್ ಪೂರೈಸುವ ಬದಲು ನೇರವಾಗಿ ಏಜೆನ್ಸಿ ಗಳಿಂದ ತರಬೇಕೆಂಬ ನಿಯಮ ರೂಪಿಸುತ್ತಿದೆ. ಇದು ಹತ್ತಾರು ಕಿ.ಮೀ. ಸಂಚರಿಸಲು ಗ್ರಾಮೀಣ ಭಾಗದವ ರಿಗೆ ತೀವ್ರ ಸಮಸ್ಯೆಯಾಗಿದೆ. ಇದನ್ನೇ ಉಪಯೋಗಿಸಿಕೊಂಡು ಏಜೆನ್ಸಿಗಳು ಹೋಟೆಲ್ ಉದ್ಯಮಕ್ಕೆ ಅನಧಿ ಕೃತವಾಗಿ ಮನೆ ಸಿಲಿಂಡರ್ ಪೂರೈಕೆ ಮಾಡುತ್ತಿದೆ ಎಂದು ಆರೋಪಿಸಿದರು.

ಕೂಡಲೇ ಜಿಲ್ಲಾಡಳಿತ ಸಂಬಂಧಿಸಿದ ಇಲಾಖೆಯ ಗಮನಕ್ಕೆ ತಂದು, ಗ್ರಾಮೀಣ ಪ್ರದೇಶದ ನಿವಾಸಿ ಗಳಿಗೆ ಸಮರ್ಪಕವಾಗಿ ಸಿಲಿಂಡರ್ ಪೂರೈಕೆ ಮಾಡಿ ಅನುಕೂಲ ಕಲ್ಪಿಸಿಕೊಡಬೇಕು. ಒಂದು ವೇಳೆ ನಿರ್ಲ ಕ್ಷ್ಯ ವಹಿಸಿದರೆ, ಕರವೇ ಸಂಘಟನೆ ಗ್ರಾಮೀಣ ನಿವಾಸಿಗಳೊಂದಿಗೆ ಜೊತೆಗೂಡಿ ದೊಡ್ಡ ಹೋರಾಟ ರೂಪಿ ಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ್, ಗೌರವಾಧ್ಯಕ್ಷ ರಾಜಣ್ಣ, ತಾಲ್ಲೂ ಕು ಅಧ್ಯಕ್ಷ ಕುಮಾರ್, ಸಖರಾಯಪಟ್ಟಣ ಹೋಬಳಿ ಪ್ರಧಾನ ಕಾರ್ಯದರ್ಶಿ ರೇಣುಕಪ್ಪ, ಮುಖಂಡರುಗ ಳಾದ ಪರಮೇಶ್, ಪ್ರವೀಣ್ ಮತ್ತಿತರರು ಉಪಸ್ಥಿತರಿದ್ದರು.

Appeal to resolve gas cylinder problem in rural areas

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧ ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ’ರಾಷ್ಟ್ರೀಯ ಲೋಕ್ ಅದಾಲತ್’ ಹಮ್ಮಿಕೊಳ್ಳಲಾಗಿದೆ ಎಂದು ಗೌ.ಪ್ರಧಾನ ಜಿಲ್ಲಾ...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ ಸಂಚಾರ) ಬಂದ ಕಾರೊಂದು ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ದುಡುಕುತನದಿಂದ ಡಿಕ್ಕಿ ಹೊಡೆದ ಪರಿಣಾಮ...

Related Articles

ಅಮೃತ್ 2.0 ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ

ಚಿಕ್ಕಮಗಳೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಮೃತ್ 2.0 ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕುಡಿಯುವ ನೀರಿನ...

ವಿಕಲಚೇತನ ವ್ಯಕ್ತಿಯ ₹8 ಲಕ್ಷ ಬ್ಯಾಂಕ್ ಸಾಲ ಕೇವಲ ₹15,000 ಕ್ಕೆ ಇತ್ಯರ್ಥ

ಚಿಕ್ಕಮಗಳೂರು:  ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಮ್ಮಿಕೊಂಡಿದ್ದ ಮೆಗಾ ಲೋಕ ಅದಾಲತ್‌ನಲ್ಲಿ ನ್ಯಾಯಾಂಗದ ವಿಶೇಷ...

ಎಟಿಎಂ ಕಾರ್ಡ್ ಬದಲಿಸಿ ₹3.09 ಲಕ್ಷ ವಂಚನೆ

ಕಡೂರು: ಪಟ್ಟಣದ ಜೈನ್ ಟೆಂಪಲ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಹಣ ಹಿಂಪಡೆಯಲು ಯತ್ನಿಸುತ್ತಿದ್ದ ವೇಳೆ...

ಕೆಪಿಟಿಸಿಎಲ್ ಸಿಎಸ್‌ಆರ್ ಅನುದಾನ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಕಣ್ಣಾವಲಿಗೆ ನೆರವು

ಚಿಕ್ಕಮಗಳೂರು: ಸರ್ಕಾರದ ಅನುದಾನದ ಕೊರತೆ ನಡುವೆ ಕೆಪಿಟಿಸಿಎಲ್ ಸಿಎಸ್‌ಆರ್ (ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ) ಅನುದಾನ...