Home namma chikmagalur chikamagalur ಟ್ರಾಫಿಕ್ ನಿಯಮ ಉಲ್ಲಂಘಿಸಿದ ವ್ಯಕ್ತಿಗೆ ನ್ಯಾಯಾಲಯ ಕಮ್ಯುನಿಟಿ ಸೇವೆ ಶಿಕ್ಷೆ
chikamagalurHomeLatest Newsnamma chikmagalur

ಟ್ರಾಫಿಕ್ ನಿಯಮ ಉಲ್ಲಂಘಿಸಿದ ವ್ಯಕ್ತಿಗೆ ನ್ಯಾಯಾಲಯ ಕಮ್ಯುನಿಟಿ ಸೇವೆ ಶಿಕ್ಷೆ

Share
Share

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ವಿಶಿಷ್ಟ ರೀತಿಯ ಶಿಕ್ಷೆ ವಿಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಟ್ರಾಫಿಕ್ ನಿಯಮಗಳನ್ನು ಪದೇ ಪದೇ ಉಲ್ಲಂಘಿಸಿದ್ದ ವ್ಯಕ್ತಿಗೆ ನ್ಯಾಯಾಲಯ ಕಮ್ಯುನಿಟಿ ಸೇವೆ ಶಿಕ್ಷೆ ನೀಡಿದೆ.

ಕಡೂರು ತಾಲೂಕಿನ ಬಿಸಿಲೇಹಳ್ಳಿ ಗ್ರಾಮದ ರಂಜಿತ್ ಎಂಬಾತ ಹಲವಾರು ಬಾರಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ ಬಳಿಕ, ನ್ಯಾಯಾಲಯದಲ್ಲಿ ರಂಜಿತ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.

ಇದನ್ನ ಗಮನಿಸಿದ ನ್ಯಾಯಾಲಯ, ರಂಜಿತ್‌ಗೆ ವಿಭಿನ್ನ ರೀತಿಯ ಶಿಕ್ಷೆ ವಿಧಿಸಿದೆ. ಮಾರ್ಚ್ 17ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕಡೂರು ಪಟ್ಟಣದ ಮರವಂಜಿ ಸರ್ಕಲ್‌ನಲ್ಲಿ ಕೈಯಲ್ಲಿ ಬೋರ್ಡ್ ಹಿಡಿದು ನಿಲ್ಲುವಂತೆ ಸೂಚಿಸಿದೆ. ಈ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದೇ ಶಿಕ್ಷೆಯ ಉದ್ದೇಶವಾಗಿದೆ.

ಇದಲ್ಲದೆ, ರಂಜಿತ್ ಶಿಕ್ಷೆಯನ್ನು ಸರಿಯಾಗಿ ಪಾಲಿಸುತ್ತಾನೆಯೇ ಎಂಬುದನ್ನು ಗಮನಿಸಲು ಒಬ್ಬ ಪೊಲೀಸರನ್ನು ನಿಯೋಜಿಸಲು ನ್ಯಾಯಾಲಯ ಸೂಚಿಸಿದೆ. ದಿನಪೂರ್ತಿ ನಿಂತ ಬಳಿಕ ಇದರ ಕುರಿತು ವರದಿ ಸಲ್ಲಿಸುವಂತೆ ಪೊಲೀಸರಿಗೆ ಆದೇಶ ನೀಡಲಾಗಿದೆ.

Court sentences man to community service for violating traffic rules

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧ ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ’ರಾಷ್ಟ್ರೀಯ ಲೋಕ್ ಅದಾಲತ್’ ಹಮ್ಮಿಕೊಳ್ಳಲಾಗಿದೆ ಎಂದು ಗೌ.ಪ್ರಧಾನ ಜಿಲ್ಲಾ...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ ಸಂಚಾರ) ಬಂದ ಕಾರೊಂದು ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ದುಡುಕುತನದಿಂದ ಡಿಕ್ಕಿ ಹೊಡೆದ ಪರಿಣಾಮ...

Related Articles

ಅಮೃತ್ 2.0 ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ

ಚಿಕ್ಕಮಗಳೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಮೃತ್ 2.0 ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕುಡಿಯುವ ನೀರಿನ...

ವಿಕಲಚೇತನ ವ್ಯಕ್ತಿಯ ₹8 ಲಕ್ಷ ಬ್ಯಾಂಕ್ ಸಾಲ ಕೇವಲ ₹15,000 ಕ್ಕೆ ಇತ್ಯರ್ಥ

ಚಿಕ್ಕಮಗಳೂರು:  ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಮ್ಮಿಕೊಂಡಿದ್ದ ಮೆಗಾ ಲೋಕ ಅದಾಲತ್‌ನಲ್ಲಿ ನ್ಯಾಯಾಂಗದ ವಿಶೇಷ...

ಎಟಿಎಂ ಕಾರ್ಡ್ ಬದಲಿಸಿ ₹3.09 ಲಕ್ಷ ವಂಚನೆ

ಕಡೂರು: ಪಟ್ಟಣದ ಜೈನ್ ಟೆಂಪಲ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಹಣ ಹಿಂಪಡೆಯಲು ಯತ್ನಿಸುತ್ತಿದ್ದ ವೇಳೆ...

ಕೆಪಿಟಿಸಿಎಲ್ ಸಿಎಸ್‌ಆರ್ ಅನುದಾನ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಕಣ್ಣಾವಲಿಗೆ ನೆರವು

ಚಿಕ್ಕಮಗಳೂರು: ಸರ್ಕಾರದ ಅನುದಾನದ ಕೊರತೆ ನಡುವೆ ಕೆಪಿಟಿಸಿಎಲ್ ಸಿಎಸ್‌ಆರ್ (ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ) ಅನುದಾನ...