ಚಿಕ್ಕಮಗಳೂರು: ಚಿಕ್ಕಮಗಳೂರು ನಗರದಲ್ಲಿ ಕಳೆದ ಶನಿವಾರದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸುಮಾರು 15ಕ್ಕೂ ಅಧಿಕ ಮಂದಿ ಪುಡ್ ಪಾಯಿಸನ್ ನಿಂದ ದಾಖಲಾಗುತ್ತಿರುವುದು ಆತಂಕ ಮೂಡಿಸಿದೆ.
ಕಳೆದ ಶನಿವಾರ ನಗರದ ಖಾಸಗಿ ಹೋಟೆಲ್ ಒಂದರಲ್ಲಿ ಆಹಾರ ಸೇವಿಸಿದ ಸುಮಾರು 15ಕ್ಕೂ ಅಧಿಕ ಮಂದಿ ಪುಡ್ ಪಾಯಿಸನ್ ನಿಂದ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿರುವುದು ಕಂಡು ಬಂದಿದೆ.
ಬಹುತೇಕರು ಒಂದೇ ಹೋಟೆಲ್ನಿಂದ ಆಹಾರ ಸೇವನೆ ಮಾಡಿದ್ದಾರೆ. ಹೀಗಾಗಿ, ಆ ಹೋಟೆಲ್ನಿಂದ ಆಹಾರ ಪದಾರ್ಥಗಳ ಮಾದರಿಯನ್ನು ಸಂಗ್ರಹಿಸಿರುವ ಆರೋಗ್ಯ ಇಲಾಖೆಯ ಅಧಿಕಾರಿಗಳು ಪರೀಕ್ಷೆಗೆ ಕಳುಹಿಸಿದ್ದಾರೆ. ಪರೀಕ್ಷಾ ವರದಿ ಬಂದ ಬಳಿಕ ಈ ಕುರಿತು ಮುಂದಿನ ತೀರ್ಮಾನ ತೆಗೆದುಕೊಳ್ಳುವುದಕ್ಕೆ ತೀರ್ಮಾನಿಸಲಾಗಿದೆ.
ಈ ಕುರಿತು ಕನ್ನಡಪ್ರಭದೊಂದಿಗೆ ಮಾತನಾಡಿದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಭರತ್, ಪುಡ್ ಪಾಯಿಜನ್ ನಿಂದ ದಾಖಲಾದ ಬಹುತೇಕರು ಆಸ್ಪತ್ರೆಯಿಂದ ಮನೆಗೆ ವಾಪಾಸ್ ಆಗಿದ್ದಾರೆ. ಕೆಲವರಿಗೆ ಚಿಕಿತ್ಸೆ ಮುಂದುವರೆದಿದೆ. ಒಂದೇ ಕಡೆ ಆಹಾರ ಸೇವೆ ಮಾಡಿದ ಪ್ರಕರಣ ಹೆಚ್ಚಾಗಿರುವುದರಿಂದ ಖಾಸಗಿ ಹೋಟೆಲ್ನ ಆಹಾರದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.
ಇನ್ನೂ ಬೇಸಿಗೆ ಸಮಯದಲ್ಲಿ ಸಾಮಾನ್ಯವಾಗಿ ಪುಡ್ ಪಾಯಿಸಜ್ ಪ್ರಕರಣ ಕಂಡು ಬರುತ್ತವೆ. ಅದು ಆಹಾರ ಮತ್ತು ನೀರು ಎರೆಡರಿಂದಲ್ಲೂ ಆಗುವ ಸಾಧ್ಯತೆ ಇರುತ್ತದೆ ಎಂದು ವಿವರಿಸಿದರು.
More than 15 people have been poisoned in the city
Leave a comment