Home namma chikmagalur chikamagalur ಶೀಘ್ರದಲ್ಲಿ ಬ್ಯಾಂಕ್ ಎದುರು ಪ್ರತಿಭಟನೆ
chikamagalurHomeLatest Newsnamma chikmagalur

ಶೀಘ್ರದಲ್ಲಿ ಬ್ಯಾಂಕ್ ಎದುರು ಪ್ರತಿಭಟನೆ

Share
Share

ಚಿಕ್ಕಮಗಳೂರು: ರೈತರ ಆಸ್ತಿಯನ್ನು ಹರಾಜುಹಾಕುವುದನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಯುಗಾದಿ ಕಳೆದ ಬಳಿಕ ಕಣತಿ ಬ್ಯಾಂಕಿನ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಡಿ.ಮಹೇಶ್ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಮಂಗಳವಾರ ಮಾತನಾಡಿ,ಕಾಫಿ ಸೇರಿದಂತೆ ಪ್ಲಾಂಟೇಷನ್ ಬೆಳೆಗಾರರ ಸಾಲ ವಸೂಲಾತಿಗಾಗಿ ಬ್ಯಾಂಕುಗಳು ಅನುಸರಿಸುತ್ತಿರುವ ಸರ್ಫೇಸಿ ಕಾಯ್ದೆಯಿಂದ ಬೆಳೆಗಾರರು ಕಂಗಲಾಗಿದ್ದಾರೆ. ಈ ಕಾಯ್ದೆಯನ್ನು ರದ್ದುಪಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ. ಆದರೂ ಈ ಸರ್ಫೇಸಿ ಕಾಯ್ದೆಯನ್ನು ಹಿಂಪಡೆಯಲು ಮುಂದಾಗುತ್ತಿಲ್ಲವೆಂದು ಹೇಳಿದರು.

ಇಬ್ಬರು ಬೆಳೆಗಾರರು ಕಡಬಗೆರೆ ಮತ್ತು ಕಣತಿ ಬ್ಯಾಂಕ್ ಶಾಖೆಯಲ್ಲಿ ಸಾಲ ಪಡೆದು ಮರುಪಾವತಿಸದ ಕಾರಣ ಆಸ್ತಿಯನ್ನು ಹರಾಜುಹಾಕಲು ಕರಪತ್ರಗಳನ್ನು ಹಂಚುವ ಮೂಲಕ ಡಂಗೂರ ಸಾರಲಾಗುತ್ತಿದೆ. ಈ ರೀತಿಯಲ್ಲಿ ಡಂಗೂರು ಸಾರುವ ಮೂಲಕ ರೈತರ ಮಾನವನ್ನು ಹರಾಜು ಹಾಕುತ್ತಿರುವುದು ಖಂಡನೀಯವೆಂದರು.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಅವರೊಂದಿಗೆ ಮಾತುಕತೆ ನಡೆಸಿ ಸರ್ಫೇಸಿ ಕಾಯ್ದೆಯಡಿ ಕಾಫಿತೋಟಗಳನ್ನು ಹರಾಜುಹಾಕುವುದನ್ನು ತಡೆಯುವಂತೆ ತಿಳಿಸಿದ್ದರು. ಈ ಕುರಿತು ಬ್ಯಾಂಕ್‌ಗಳಿಗೆ ನಿರ್ದೇಶನ ನೀಡುವುದಾಗಿ ಸಚಿವರು ಭರವಸೆ ನೀಡಿದ್ದರು. ಆದರೆ ಬ್ಯಾಂಕುಗಳಿಂದ ಹರಾಜು ಪ್ರಕ್ರಿಯೆ ಮುಂದುವರೆದಿದೆ ಎಂದು ತಿಳಿಸಿದರು.

ಈ ಹಿಂದೆ ಗೌಪ್ಯವಾಗಿ ಹರಾಜುಹಾಕುತ್ತಿದ್ದ ಬ್ಯಾಂಕುಗಳು ಈಗ ಬಹಿರಂಗವಾಗಿ ಡಂಗೂರು ಹಾಕುವ ಮೂಲಕ ಹರಾಜಿಗೆ ಮುಂದಾಗಿದ್ದು, ರೈತರ ಮಾನ ಹರಾಜುಹಾಕಲು ಸಿದ್ಧತೆ ಮಾಡಿಕೊಂಡಂತೆ ಕಾಣುತ್ತಿದೆ. ಇದನ್ನು ವಿರೋಧಿಸಿ, ಹರಾಜು ತಡೆಗಟ್ಟುವ ನಿಟ್ಟಿನಲ್ಲಿ ರೈತರ ಆಸ್ತಿ ಹರಾಜಿಗೆ ಮುಂದಾಗಿರುವ ಬ್ಯಾಂಕುಗಳ ಎದುರು ರೈತ ಸಂಘದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಭೂ ಮಾಫಿಯಾ ರಿಯಲ್ ಎಸ್ಟೇಟ್ ಏಜೆಂಟರು ಹಾಗೂ ಬ್ಯಾಂಕ್ ಸಿಬ್ಬಂದಿ ಸರ್ಫೇಸಿಕಾಯ್ದೆಯನ್ನು ಬಳಸಿಕೊಂಡು ರೈತರ ಆಸ್ತಿ ಹರಾಜಿಗೆ ಮುಂದಾಗಿದ್ದು, ಹರಾಜು ಪ್ರಕ್ರಿಯೆ ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿದರು. ರೈತ ಸಂಘದ ಜಿಲ್ಲಾ ವಕ್ತಾರ ಜೆ.ಎಸ್.ಶಿವಣ್ಣ, ಮತ್ತಾವರ ಮಂಜುನಾಥ ಇದ್ದರು.

Protest in front of the bank soon

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧ ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ’ರಾಷ್ಟ್ರೀಯ ಲೋಕ್ ಅದಾಲತ್’ ಹಮ್ಮಿಕೊಳ್ಳಲಾಗಿದೆ ಎಂದು ಗೌ.ಪ್ರಧಾನ ಜಿಲ್ಲಾ...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ ಸಂಚಾರ) ಬಂದ ಕಾರೊಂದು ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ದುಡುಕುತನದಿಂದ ಡಿಕ್ಕಿ ಹೊಡೆದ ಪರಿಣಾಮ...

Related Articles

ಅಮೃತ್ 2.0 ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ

ಚಿಕ್ಕಮಗಳೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಮೃತ್ 2.0 ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕುಡಿಯುವ ನೀರಿನ...

ವಿಕಲಚೇತನ ವ್ಯಕ್ತಿಯ ₹8 ಲಕ್ಷ ಬ್ಯಾಂಕ್ ಸಾಲ ಕೇವಲ ₹15,000 ಕ್ಕೆ ಇತ್ಯರ್ಥ

ಚಿಕ್ಕಮಗಳೂರು:  ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಮ್ಮಿಕೊಂಡಿದ್ದ ಮೆಗಾ ಲೋಕ ಅದಾಲತ್‌ನಲ್ಲಿ ನ್ಯಾಯಾಂಗದ ವಿಶೇಷ...

ಎಟಿಎಂ ಕಾರ್ಡ್ ಬದಲಿಸಿ ₹3.09 ಲಕ್ಷ ವಂಚನೆ

ಕಡೂರು: ಪಟ್ಟಣದ ಜೈನ್ ಟೆಂಪಲ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಹಣ ಹಿಂಪಡೆಯಲು ಯತ್ನಿಸುತ್ತಿದ್ದ ವೇಳೆ...

ಕೆಪಿಟಿಸಿಎಲ್ ಸಿಎಸ್‌ಆರ್ ಅನುದಾನ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಕಣ್ಣಾವಲಿಗೆ ನೆರವು

ಚಿಕ್ಕಮಗಳೂರು: ಸರ್ಕಾರದ ಅನುದಾನದ ಕೊರತೆ ನಡುವೆ ಕೆಪಿಟಿಸಿಎಲ್ ಸಿಎಸ್‌ಆರ್ (ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ) ಅನುದಾನ...