Home namma chikmagalur chikamagalur ಗ್ರಾಹಕ ಹಕ್ಕುಗಳ ಉಲ್ಲಂಘನೆಯಾದಲ್ಲಿ ಮೌನವಾಗಿರಬೇಡಿ
chikamagalurHomeLatest Newsnamma chikmagalur

ಗ್ರಾಹಕ ಹಕ್ಕುಗಳ ಉಲ್ಲಂಘನೆಯಾದಲ್ಲಿ ಮೌನವಾಗಿರಬೇಡಿ

Share
Share

ಚಿಕ್ಕಮಗಳೂರು: ಪ್ರತಿಯೊಬ್ಬ ಗ್ರಾಹಕನಿಗೂ ವಸ್ತುವಿನ ಸುರಕ್ಷತೆ, ಗುಣಮಟ್ಟದ ಮಾಹಿತಿ ಮತ್ತು ತನಗೆ ಬೇಕಾದ ವಸ್ತುವನ್ನು ಮುಕ್ತವಾಗಿ ಆಯ್ಕೆ ಮಾಡಿಕೊಳ್ಳುವ ಸಂಪೂರ್ಣ ಹಕ್ಕಿದೆ. ಈ ಹಕ್ಕುಗಳ ಉಲ್ಲಂಘನೆಯಾದಾಗ ಗ್ರಾಹಕರು ಮೌನವಾಗಿರಬಾರದು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎನ್.ಆರ್.ಚನ್ನಕೇಶವ ತಿಳಿಸಿದರು.

ನಗರದ ತಾಲ್ಲೂಕು ಪಂಚಾಯಿತಿ ಕಚೇರಿಯ ಸಾಮರ್ಥ್ಯ ಸೌಧದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ವಿಶ್ವ ಗ್ರಾಹಕರ ದಿನಾಚರಣೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗಾಗಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಹಕರು ಮಾರುಕಟ್ಟೆಯಲ್ಲಿ ಕೇವಲ ವಸ್ತುಗಳನ್ನು ಖರೀದಿಸುವವರಲ್ಲ, ಬದಲಾಗಿ ಅವರು ವ್ಯವಸ್ಥೆಯ ಅತಿಥಿಗಳು. ಸುರಕ್ಷಿತ ಉತ್ಪನ್ನಗಳನ್ನು ಪಡೆಯುವುದು ಮತ್ತು ತಮ್ಮ ಹಕ್ಕುಗಳ ಬಗ್ಗೆ ಜಾಗೃತಿ ಹೊಂದುವುದು ಪ್ರತಿಯೊಬ್ಬ ಗ್ರಾಹಕನ ಆದ್ಯ ಕರ್ತವ್ಯ. ಮಹಾತ್ಮ ಗಾಂಧೀಜಿಯವರ ಆಶಯದಂತೆ, ಗ್ರಾಹಕರು ನಮಗೆ ಉಪಕಾರ ಮಾಡುವುದಿಲ್ಲ, ಬದಲಾಗಿ ಅವರಿಗೆ ಸೇವೆ ಸಲ್ಲಿಸಲು ನಮಗೆ ಅವಕಾಶ ನೀಡುವ ಮೂಲಕ ನಾವು ಅವರಿಗೆ ಚಿರಋಣಿಯಾಗಿರಬೇಕು ಎಂಬ ತತ್ವವನ್ನು ನಾವು ಪಾಲಿಸಬೇಕು ಎಂದರು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯೆ ಈ. ಪ್ರೇಮ ಮಾತನಾಡಿ, ಭಾರತದಲ್ಲಿ ೧೯೮೬ರ ಗ್ರಾಹಕ ಕಾಯ್ದೆ ಜಾರಿಗೆ ಬರಲು ಮುಂಬೈನ ಕೇವಲ ಎಂಟು ಮಂದಿ ಮಹಿಳೆಯರು ನಡೆಸಿದ ಹೋರಾಟವೇ ಪ್ರೇರಣೆ. ಅಲ್ಪ ಸಂಖ್ಯೆಯ ಮಹಿಳೆಯರ ಹೋರಾಟ ಇಂದು ದೇಶಾದ್ಯಂತ ದೊಡ್ಡ ಮಟ್ಟದ ಗ್ರಾಹಕ ಚಳುವಳಿಯಾಗಿ ಬೆಳೆದು ನಿಂತಿದೆ ಎಂದರು.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ಯೋಗಾನಂದ ಮಾತನಾಡಿ, ವ್ಯಾಪಾರ ವಹಿವಾಟಿನಲ್ಲಿ ಕಂಡು ಬರುವ ಬೆಲೆ ವ್ಯತ್ಯಾಸದ ಮೋಸ, ಕಳಪೆ ಗುಣಮಟ್ಟದ ವಸ್ತುಗಳು ಹಾಗೂ ಸೇವಾ ನ್ಯೂನತೆಗಳ ಬಗ್ಗೆ ಗ್ರಾಹಕರು ಸದಾ ಜಾಗರೂಕರಾಗಿರಬೇಕು. ಭಾರತದಲ್ಲಿ ೧೯೮೬ರಲ್ಲಿ ಜಾರಿಗೆ ಬಂದ ಗ್ರಾಹಕ ಸಂರಕ್ಷಣಾ ಕಾಯ್ದೆಯು ಈಗ ೨೦೧೯ರ ಹೊಸ ಕಾಯ್ದೆಯಾಗಿ ಮಾರ್ಪಟ್ಟು ಗ್ರಾಹಕರಿಗೆ ಹೆಚ್ಚಿನ ಬಲ ನೀಡಿದೆ ಎಂದು ತಿಳಿಸಿದರು.

ಈ ವರ್ಷ ಪ್ರಪಂಚದಾದ್ಯಂತ “ಸುರಕ್ಷಿತ ಉತ್ಪನ್ನಗಳು ಮತ್ತು ಆತ್ಮವಿಶ್ವಾಸದ ಗ್ರಾಹಕರು” ಎಂಬ ಘೋಷವಾಕ್ಯದೊಂದಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳು ನಡೆಯುತ್ತಿವೆ. ಯಾವುದೇ ಸೇವಾ ನ್ಯೂನತೆ ಅಥವಾ ಮೋಸ ಕಂಡುಬಂದಲ್ಲಿ ಗ್ರಾಹಕರು ನೇರವಾಗಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ನೀಡಿ ನ್ಯಾಯ ಪಡೆಯಲು ಅವಕಾಶವಿದೆ. ಸಮಾಜಮುಖಿ ಕೆಲಸಗಳಲ್ಲಿ ಮುಂಚೂಣಿಯಲ್ಲಿರುವ ಅಂಗನವಾಡಿ ಕಾರ್ಯಕರ್ತೆಯರು ಈ ಹಕ್ಕುಗಳ ಬಗ್ಗೆ ಜನಸಾಮಾನ್ಯರಿಗೆ ಪ್ರಚಾರ ಮಾಡಬೇಕು ಎಂದು ಯೋಗಾನಂದ ಸಲಹೆ ನೀಡಿದರು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯ ಡಾ.ಮಂಜುನಾಥ್ ಎಂ.ಬೊಮ್ಮನಕಟ್ಟಿ, ಸಹಾಯಕ ರಿಜಿಸ್ಟ್ರಾರ್ ಬಿ.ಆರ್.ಇಂದುಬಾಯಿ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಜಿ.ಮಹಾಂತೇಶ್ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿದ್ದರು.

Don’t remain silent when consumer rights are violated.

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧ ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ’ರಾಷ್ಟ್ರೀಯ ಲೋಕ್ ಅದಾಲತ್’ ಹಮ್ಮಿಕೊಳ್ಳಲಾಗಿದೆ ಎಂದು ಗೌ.ಪ್ರಧಾನ ಜಿಲ್ಲಾ...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ ಸಂಚಾರ) ಬಂದ ಕಾರೊಂದು ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ದುಡುಕುತನದಿಂದ ಡಿಕ್ಕಿ ಹೊಡೆದ ಪರಿಣಾಮ...

Related Articles

ಅಮೃತ್ 2.0 ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ

ಚಿಕ್ಕಮಗಳೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಮೃತ್ 2.0 ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕುಡಿಯುವ ನೀರಿನ...

ವಿಕಲಚೇತನ ವ್ಯಕ್ತಿಯ ₹8 ಲಕ್ಷ ಬ್ಯಾಂಕ್ ಸಾಲ ಕೇವಲ ₹15,000 ಕ್ಕೆ ಇತ್ಯರ್ಥ

ಚಿಕ್ಕಮಗಳೂರು:  ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಮ್ಮಿಕೊಂಡಿದ್ದ ಮೆಗಾ ಲೋಕ ಅದಾಲತ್‌ನಲ್ಲಿ ನ್ಯಾಯಾಂಗದ ವಿಶೇಷ...

ಎಟಿಎಂ ಕಾರ್ಡ್ ಬದಲಿಸಿ ₹3.09 ಲಕ್ಷ ವಂಚನೆ

ಕಡೂರು: ಪಟ್ಟಣದ ಜೈನ್ ಟೆಂಪಲ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಹಣ ಹಿಂಪಡೆಯಲು ಯತ್ನಿಸುತ್ತಿದ್ದ ವೇಳೆ...

ಕೆಪಿಟಿಸಿಎಲ್ ಸಿಎಸ್‌ಆರ್ ಅನುದಾನ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಕಣ್ಣಾವಲಿಗೆ ನೆರವು

ಚಿಕ್ಕಮಗಳೂರು: ಸರ್ಕಾರದ ಅನುದಾನದ ಕೊರತೆ ನಡುವೆ ಕೆಪಿಟಿಸಿಎಲ್ ಸಿಎಸ್‌ಆರ್ (ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ) ಅನುದಾನ...