Home namma chikmagalur chikamagalur 24 ಗಂಟೆಗಳಲ್ಲಿ ಕಳ್ಳತನ ಆರೋಪಿ ಬಂಧನ
chikamagalurCrime NewsHomeLatest Newsnamma chikmagalur

24 ಗಂಟೆಗಳಲ್ಲಿ ಕಳ್ಳತನ ಆರೋಪಿ ಬಂಧನ

Share
Share

ಚಿಕ್ಕಮಗಳೂರು: ಮನೆ ಕಳ್ಳತನ ಕೃತ್ಯ ವರದಿಯಾದ ಕೇವಲ 24 ಗಂಟೆಗಳಲ್ಲಿ ಆರೋಪಿ ಬಂಧಿಸಿ ಕಳ್ಳತನ ಮಾಡಿದ್ದ ಸುಮಾರು 16 ಲಕ್ಷ ರು. ಮೌಲ್ಯದ 144 ಗ್ರಾಂ ತೂಕವುಳ್ಳ ಚಿನ್ನಾಭರಣ ವಶಕ್ಕೆ ಪಡೆಯುವಲ್ಲಿ ಬಣಕಲ್ ಪೊಲೀಸ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಳೆದ ಮಂಗಳವಾರ ಮೂಡಿಗೆರೆಯ ಬಣಕಲ್‌ ಹೋಬಳಿಯ ಗುಡ್ಡಟ್ಟಿ ಗ್ರಾಮದ ಸುರೇಶ್ ದಂಪತಿ ಕೆಲಸಕ್ಕೆ ಹೋದ ಸಮಯದಲ್ಲಿ ಮನೆಯ ಕಬೋರ್ಡ್ ನಲ್ಲಿಟ್ಟಿದ್ದ 169 ಗ್ರಾಂ ಚಿನ್ನದ ಒಡವೆ ಕಳ್ಳತನ ಮಾಡಿದ ಬಗ್ಗೆ ದೂರು ದಾಖಲಿಸಿದ್ದರು.

ತಕ್ಷಣ ಕಾರ್ಯೋನ್ಮುಕರಾದ ಪೊಲೀಸರು, ಕೇವಲ 24 ಗಂಟೆಯ ಒಳಗೆ ಆರೋಪಿ ಹರೀಶ್‌ (30) ಎಂಬಾತನನ್ನು ಬಂಧಿಸಿದ್ದಾರೆ. ಹರೀಶ್‌, ಅಭಿಗೌಡ ಎಂಬುವವರ ಕಾಫಿತೋಟದ ಕೂಲಿ ಲೈನ್‌ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಗುಡ್ಡಟ್ಟಿ ಗ್ರಾಮದ ನಿವಾಸಿಯಾಗಿದ್ದಾನೆ.

ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪೋಯಗುಡ್ಡೆ ಅವನಾಗಿದ್ದಾರೆ. ಆತನಿಂದ ಕಳವು ಮಾಡಲಾಗಿದ್ದ ಅಂದಾಜು 16 ಲಕ್ಷ ರು. ಮೌಲ್ಯದ 144 ಗ್ರಾಂ ಬಂಗಾರದ ಒಡವೆಗಳನ್ನು ಜಫ್ತು ಮಾಡಲಾಗಿದೆ.

Theft suspect arrested within 24 hours

Share

Leave a comment

Leave a Reply

Your email address will not be published. Required fields are marked *

Don't Miss

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು. ಶೃಂಗೇರಿ ತಾಲೂಕಿನ ಬುಕ್ಕಡಿಬೈಲು ಗ್ರಾಮದ ನಿವಾಸಿಯಾಗಿರುವ ಬಿ.ಜಿ. ಕೃಷ್ಣಮೂರ್ತಿ ವಿರುದ್ಧ ಕರ್ನಾಟಕದಲ್ಲಿ ಒಟ್ಟು 54...

ವಾಹನಗಳ ಮಿರರ್ ತಗುಲಿ-ಕತ್ತಿ-ಬಂದೂಕು ಝಳಪಿಸಿದ ಗಲಾಟೆ

ಚಿಕ್ಕಮಗಳೂರು: ವಾಹನಗಳ ಮಿರರ್ ಪರಸ್ಪರ ತಗುಲಿದ ಸಣ್ಣ ವಿಚಾರ ಕತ್ತಿ-ಬಂದೂಕು ಝಳಪಿಸುವ ಹಂತಕ್ಕೆ ತಲುಪಿರುವ ಆರೋಪವೊಂದು ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಸರವಳ್ಳಿ ಗ್ರಾಮದಲ್ಲಿ ಜುಲೈ 2...

Related Articles

ಮಹಿಳೆ ಗಮನ ಬೇರೆಡೆ ಸೆಳೆದು ₹ 3.90 ಲಕ್ಷ ವಂಚನೆ

ಕಡೂರು: ಕಳೆದ ಜೂನ್‌ನಲ್ಲಿ ಗಮನ ಬೇರೆಡೆಗೆ ಸೆಳೆದು ಗ್ರಾಹಕರೋರ್ವರ ಖಾತೆಯಿಂದ ₹3.90 ಲಕ್ಷಡ್ರಾ ಮಾಡಿರುವ ಪ್ರಕರಣ...

ಶಿವಮೊಗ್ಗ-ಶೃಂಗೇರಿ ಮಾರ್ಗ ಪರಿಗಣಿಸಿ

ಚಿಕ್ಕಮಗಳೂರು: ನೂತನ ರೈಲ್ವೆ ಯೋಜನೆಗೆ ಅಂತಿಮ ಸ್ಥಳ ನಿರ್ಧಾರ ಸಮೀಕ್ಷೆ ಮಾಡುವ ವೇಳೆ ಶಿವಮೊಗ್ಗ, ಭದ್ರಾವತಿ,...

ಕವಿಕಲ್ ಮಠದ ರಸ್ತೆಯಲ್ಲಿ ಹುಲಿ ದಿಢೀರನೆ ಪ್ರತ್ಯಕ್ಷ

ಚಿಕ್ಕಮಗಳೂರು: ಕಾಫಿನಾಡಿನ ಹಸಿರು ಕಾಡುಗಳ ನಡುವೆ ಸಂಚರಿಸುತ್ತಿದ್ದ ಪ್ರವಾಸಿಗರಿಗೆ ಮರೆಯಲಾಗದ ಅನುಭವವೊಂದು ಎದುರಾಗಿದೆ. ಚಿಕ್ಕಮಗಳೂರು ತಾಲೂಕಿನ...

ಭದ್ರಾ ಜಲಾಶಯದ ನೀರು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಲು ಸೂಚನೆ

ಚಿಕ್ಕಮಗಳೂರು: ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಿದ್ದು,...