Home namma chikmagalur chikamagalur ಜಿಲ್ಲೆಯಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್‌ ಗೆ ಹಾಹಾಕಾರ
chikamagalurHomeLatest Newsnamma chikmagalur

ಜಿಲ್ಲೆಯಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್‌ ಗೆ ಹಾಹಾಕಾರ

Share
Share

ಚಿಕ್ಕಮಗಳೂರು: ಕೊಲ್ಲಿ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧದ ಪರಿಣಾಮ ವಾಣಿಜ್ಯ ಸಿಲಿಂಡರ್ ಗಳ ಪೂರೈಕೆಯಲ್ಲಿ ಭಾರೀ ವ್ಯತ್ಯಯವಾಗಿದ್ದು ಕಳಸ ತಾಲ್ಲೂಕಿನಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್‌ಗಳು ತೀವ್ರ ಅಭಾವ ಸೃಷ್ಟಿಯಾಗಿ ಜನಸಾಮಾನ್ಯರ ಹಾಗೂ ವರ್ತಕರ ಬದುಕು ಅಕ್ಷರಶಃ ಬೀದಿಗೆ ಬೀಳುವಂತಾಗಿದೆ.

ಕಳೆದ ಒಂದು ವಾರದಿಂದ ಸಿಲಿಂಡರ್‌ಗಳ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯದಿಂದಾಗಿ ತಾಲ್ಲೂಕಿನಾದ್ಯಂತ ಹಾಹಾಕಾರ ಮುಂದುವರಿದಿದೆ. ಹೋಟೆಲ್, ಕ್ಯಾಂಟೀನ್ ಮತ್ತು ಬೇಕರಿಗಳ ಒಲೆಗಳು ಅರಿಹೋಗಿದ್ದು, ವ್ಯಾಪಾರವಿಲ್ಲದೆ ಮಾಲೀಕರು ಅನಿವಾರ್ಯವಾಗಿ ಅಂಗಡಿಗಳಿಗೆ ಬೀಗ ಜಡಿಯುತ್ತಿದ್ದಾರೆ.

ಇದು ಕೇವಲ ವ್ಯಾಪಾರಸ್ಥರ ಸಮಸ್ಯೆಯಾಗಿ ಉಳಿಯದೆ, ಸಾವಿರಾರು ಪ್ರವಾಸಿಗರು ಮತ್ತು ಭಕ್ತಾದಿಗಳ ಮೇಲೆಯೂ ಗಂಭೀರ ಪರಿಣಾಮ – ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾದ ಕಳಸೇಶ್ವರ ದೇವಸ್ಥಾನ ಮತ್ತು ಪವಿತ್ರ ಕ್ಷೇತ್ರ ಹೊರನಾಡಿನ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಈ ಮಾರ್ಗವಾಗಿಯೇ ಸಂಚರಿಸುತ್ತಾರೆ.

ದೂರದ ಊರುಗಳಿಂದ ಬರುವ ಭಕ್ತಾದಿಗಳಿಗೆ ಮತ್ತು ಪ್ರವಾಸಿಗರಿಗೆ ಕಳಸವೇ ಮುಖ್ಯ ಕೇಂದ್ರವಾಗಿದೆ. ಆದರೆ ಈಗ ಇಲ್ಲಿನ ಹೋಟೆಲ್ಗಳು ಮುಚ್ಚಿರುವುದರಿಂದ ಹಸಿವು ನೀಗಿಸಿಕೊಳ್ಳಲು ದಾರಿ ಕಾಣದೆ ಯಾತ್ರಿಕರು ಪರದಾಡುವಂತಾಗಿದೆ. ಪರ್ಯಾಯ ಇಂಧನಗಳ ವ್ಯವಸ್ಥೆಯೂ ಇಲ್ಲದೆ ಕಂಗಾಲಾಗಿರುವ ವರ್ತಕರು, ಈ ಬಿಕ್ಕಟ್ಟಿನಿಂದಾಗಿ ಆರ್ಥಿಕವಾಗಿ ಭಾರಿ ನಷ್ಟ ಅನುಭವಿಸುತ್ತಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಮಧ್ಯಪ್ರವೇಶಿಸಿ ಸಿಲಿಂಡರ್ ಪೂರೈಕೆಯನ್ನು ಸಹಜ ಸ್ಥಿತಿಗೆ ತರದಿದ್ದರೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಆತಂಕ ಎದುರಾಗಿದೆ.

Commercial gas cylinder shortage in the district

Share

Leave a comment

Leave a Reply

Your email address will not be published. Required fields are marked *

Don't Miss

ಜಯಪುರ ಠಾಣೆಯ ಮಹಿಳಾ ಸಿಬ್ಬಂದಿಗೆ ಬಾಗಿನ

ಕೊಪ್ಪ : ಹಬ್ಬ-ಹರಿದಿನಗಳಲ್ಲೂ ಕರ್ತವ್ಯದಲ್ಲೇ ನಿರತರಾಗಿರುವ ಪೊಲೀಸ್ ಸಿಬ್ಬಂದಿಯ ಮೊಗದಲ್ಲಿ ಹಬ್ಬದ ಸಂಭ್ರಮ ಮೂಡಿಸುವ ಅರ್ಥಪೂರ್ಣ ಕಾರ್ಯಕ್ರಮವೊಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಗೌರಿ ಹಬ್ಬದ...

ಟ್ರಾಕ್ಟರ್ ಹರಿಸಿ ₹1.15 ಲಕ್ಷ ಮೌಲ್ಯದ ರಾಗಿ ಬೆಳೆ ನಾಶ

ತರೀಕೆರೆ : ನ್ಯಾಯಾಲಯದ ಸ್ಪಷ್ಟ ತಡೆಯಾಜ್ಞೆ ಇದ್ದರೂ ಅದ್ಯಾವುದನ್ನೂ ಲೆಕ್ಕಿಸದೆ, ಜಮೀನಿಗೆ ಅಕ್ರಮವಾಗಿ ನುಗ್ಗಿ ಕಟಾವಿಗೆ ಬಂದಿದ್ದ ರಾಗಿ ಬೆಳೆಯ ಮೇಲೆ ಟ್ರಾಕ್ಟರ್ ಹರಿಸಿ ನಾಶಪಡಿಸಿರುವ ಆಘಾತಕಾರಿ ಘಟನೆಯೊಂದು ತರೀಕೆರೆ ತಾಲೂಕಿನ...

Related Articles

ಮೂಡಿಗೆರೆಯಲ್ಲಿ ಮುಸುಕುಧಾರಿ ಖದೀಮರಿಂದ ಸರಗಳ್ಳತನ

ಮೂಡಿಗೆರೆ: ಮುಂಜಾನೆಯ ತಂಪಾದ ವಾತಾವರಣದಲ್ಲಿ ರಸ್ತೆ ಬದಿಯಲ್ಲಿ ನಿರಾತಂಕವಾಗಿ ವಾಕಿಂಗ್ ಮುಗಿಸಿ ಮನೆಗೆ ಮರಳುತ್ತಿದ್ದ ಮಹಿಳೆಯೊಬ್ಬರನ್ನು...

ಅರಸನ ನಾಲೆ ಪುನಶ್ಚೇತನ‌ಕ್ಕೆ ಆಗ್ರಹಿಸಿ ಇಂದು ರೈತರ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸುವುದು ಹಾಗೂ...

ಸವದಳ ಸೂತ್ರದಡಿ ಎಲ್ಲರನ್ನು ಒಂದುಗೂಡಿಸಿ

ಚಿಕ್ಕಮಗಳೂರು: ಸವದಳ ಸೂತ್ರದಡಿ ಎಲ್ಲರನ್ನು ಒಂದುಗೂಡಿಸಿ : ಡಾ.ಮಾತೆ ಗಂಗಾದೇವಿನಾಡಿನ ವೀರಶೈವ-ಲಿಂಗಾಯಿತ ಜನಾಂಗವನ್ನು ಬಸವದಳ ಸೂತ್ರದಡಿ...

ಪ್ರತಾಪ ಸಿಂಹ ವಿರುದ್ಧ ಭೀಮ್ ಆರ್ಮಿ ಪ್ರತಿಭಟನೆ

ಚಿಕ್ಕಮಗಳೂರು: ದಲಿತ ಸಂಘಟನೆಗಳ ಬಗ್ಗೆ ಮಾಜಿ ಸಂಸದ ಪ್ರತಾಪ ಸಿಂಹ ಲಘುವಾಗಿ ಮಾತನಾಡಿದ್ದು, ಕೂಡಲೇ ಕ್ಷಮೆ...