Home namma chikmagalur chikamagalur ಸೈಬರ್ ವಂಚಕರ ಜಾಲದಲ್ಲಿಆಲ್ಲೂರಿನ ಪ್ರದೀಪ್‌ ಗೆ ವಂಚನೆ
chikamagalurCrime NewsHomeLatest Newsnamma chikmagalur

ಸೈಬರ್ ವಂಚಕರ ಜಾಲದಲ್ಲಿಆಲ್ಲೂರಿನ ಪ್ರದೀಪ್‌ ಗೆ ವಂಚನೆ

Share
Share

ಚಿಕ್ಕಮಗಳೂರು : ಸೈಬರ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು ತಾಂತ್ರಿಕತೆಯನ್ನು ಬಳಸಿಕೊಂಡು ಸಾರ್ವಜನಿಕರ ಹಣ ಲೂಟಿ ಮಾಡುವ ಸೈಬರ್ ವಂಚಕರ ಜಾಲಕ್ಕೆ ಹಲವರು ಬಲಿಯಾಗುತ್ತಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರದೀಪ್ ಹೊರಪೇಟೆ ಎಂಬುವವರು ತಮ್ಮ ಕಷ್ಟಾರ್ಜಿತ ಸುಮಾರು ಒಂದು ಲಕ್ಷ ರೂಪಾಯಿಗಳನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ. ಇತ್ತೀಚೆಗೆ ತಮ್ಮ ಮೊಬೈಲ್ ಕಳೆದುಕೊಂಡಿದ್ದ ಪ್ರದೀಪ್ ನಿಯಮಾನುಸಾರ ‘ಇ-ಲಾಸ್ಟ್ ರಿಪೋರ್ಟ್’ ಪೋರ್ಟಲ್‌ನಲ್ಲಿ ದೂರು ದಾಖಲಿಸಿ ಅದೇ ನಂಬರ್‌ನ ಪರ್ಯಾಯ ಸಿಮ್ ಕಾರ್ಡ್ ಪಡೆದುಕೊಂಡಿದ್ದರು.

ಈ ನಡುವೆ ಸಿಮ್ ಸಕ್ರಿಯಗೊಂಡು ಎಸ್‌ಎಂಎಸ್ ಸೇವೆಗಳು ಪುನಾರಂಭಗೊಂಡ ಬೆನ್ನಲ್ಲೇ ವಂಚಕರು ತಮ್ಮ ಕೈಚಳಕ ತೋರಿಸಿದ್ದಾರೆ. ಕಳೆದುಹೋದ ಮೊಬೈಲ್ ಪತ್ತೆ ಹಚ್ಚಲು ಸರ್ಕಾರಿ ಪೋರ್ಟಲ್ ಆದ CEIR ನಲ್ಲಿ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸುತ್ತಿದ್ದ ಪ್ರದೀಪ್ ಅವರಿಗೆ, ಮಾರ್ಚ್ 14 ರಂದು ಹೊಸ ಮೊಬೈಲ್ ಖರೀದಿಸಲು ಮುಂದಾದಾಗ ದೊಡ್ಡ ಆಘಾತ ಕಾಯುತ್ತಿತ್ತು.

ಆನ್‌ಲೈನ್ ಮೂಲಕ ಮೊಬೈಲ್ ಆರ್ಡರ್ ಮಾಡಲು ಪ್ರಯತ್ನಿಸಿದಾಗ ಅವರ ಬ್ಯಾಂಕ್ ಖಾತೆಯಲ್ಲಿ ಹಣವಿಲ್ಲ ಎಂಬ ಸಂದೇಶ ಬಂದಿದೆ. ತಕ್ಷಣ ಖಾತೆಯನ್ನು ಪರಿಶೀಲಿಸಿದಾಗ, ಎಸ್‌ಬಿಐ ಖಾತೆಯಲ್ಲಿದ್ದ 1,03,923 ರೂಪಾಯಿಗಳ ಪೈಕಿ ಬರೋಬ್ಬರಿ 94,050 ರೂಪಾಯಿಗಳು ಮಾಯವಾಗಿ ಕೇವಲ 9,873 ರೂಪಾಯಿಗಳು ಮಾತ್ರ ಬಾಕಿ ಉಳಿದಿತ್ತು.

ತಕ್ಷಣವೇ ಎಚ್ಚೆತ್ತ ಪ್ರದೀಪ್ ಅವರು ಬ್ಯಾಂಕ್ ಗ್ರಾಹಕ ಸೇವೆಗೆ ಕರೆ ಮಾಡಿ ತಮ್ಮ ಖಾತೆಯ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ (Block), ಮೊಬೈಲ್ ಕಳೆದುಹೋದ ಸಂದರ್ಭವನ್ನು ಬಳಸಿಕೊಂಡು ವಂಚಕರು ಅವರ ಬ್ಯಾಂಕಿಂಗ್ ವಿವರಗಳನ್ನು ಲೂಟಿ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಈ ಕುರಿತು ಅಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸೈಬರ್ ಕ್ರೈಂ ವಿಭಾಗದ ನೆರವಿನೊಂದಿಗೆ ಹಣ ವರ್ಗಾವಣೆಯಾದ ಮೂಲವನ್ನು ಪತ್ತೆ ಹಚ್ಚುತ್ತಿದ್ದಾರೆ. ಡಿಜಿಟಲ್ ಯುಗದಲ್ಲಿ ಮೊಬೈಲ್ ಕಳೆದುಕೊಂಡಾಗ ಎಷ್ಟು ಜಾಗರೂಕರಾಗಿರಬೇಕು ಎಂಬುದಕ್ಕೆ ಈ ಪ್ರಕರಣ ಒಂದು ಎಚ್ಚರಿಕೆಯ ಗಂಟೆಯಾಗಿದೆ.

Pradeep from Allur cheated in cyber fraudsters’ network

Share

Leave a comment

Leave a Reply

Your email address will not be published. Required fields are marked *

Don't Miss

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...

Related Articles

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು...

ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಹಲ್ಲೆ

ಮೂಡಿಗೆರೆ:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ...

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ 25ಕ್ಕೂ ಹೆಚ್ಚುಕಡೆ ಬೆಂಕಿ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು  ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ...

3.50 ಕೋಟಿ ರೂ ವೆಚ್ಚದ ವಿವಿಧ ರಸ್ತೆಗಳ ಲೋಕಾರ್ಪಣೆ

ಚಿಕ್ಕಮಗಳೂರು:  ಬಡವರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರ ಧರ್ಮ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ...