Home namma chikmagalur chikamagalur ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಹಲ್ಲೆ
chikamagalurHomeLatest Newsnamma chikmagalur

ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಹಲ್ಲೆ

Share
Share

ಮೂಡಿಗೆರೆ:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪ್ರಿನ್ಸಿಪಾಲ್ ಮತ್ತು ಸಿಬ್ಬಂದಿ ಮನಸೋಇಚ್ಛೆ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

ಅನುಮತಿ ಪಡೆಯದೆ ಆಟವಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ 7 ವಿದ್ಯಾರ್ಥಿಗಳನ್ನು ರೂಮಿನಲ್ಲಿ ಕೂಡಿ ಹಾಕಿ ಪ್ಲಾಸ್ಟಿಕ್ ಪೈಪ್ ಮತ್ತು ಬೆಲ್ಟ್‌ನಿಂದ ಥಳಿಸಲಾಗಿದೆ. ಶುಕ್ರವಾರ ರಾತ್ರಿ ವಿದ್ಯಾರ್ಥಿಗಳ ನಡುವೆ ಸಣ್ಣ ಗಲಾಟೆ ನಡೆದಿತ್ತು.

ಈ ಸಿಟ್ಟಿನಲ್ಲಿದ್ದ ಪ್ರಿನ್ಸಿಪಾಲ್, ಶನಿವಾರ ಬೆಳಿಗ್ಗೆ ಅನುಮತಿ ಪಡೆಯದೆ ಮೈದಾನದಲ್ಲಿ ಆಟವಾಡುತ್ತಿದ್ದ 7 ವಿದ್ಯಾರ್ಥಿಗಳ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ.ಪ್ರಿನ್ಸಿಪಾಲ್ ಸತೀಶ್ ಮತ್ತು ಸಿಬ್ಬಂದಿ ಶುಭಮ್ ಸೇರಿ ವಿದ್ಯಾರ್ಥಿಗಳ ಕೈಕಾಲುಗಳಿಗೆ ಬಾಸುಂಡೆ ಬರುವಂತೆ ಪ್ಲಾಸ್ಟಿಕ್ ಪೈಪ್ ಹಾಗೂ ಬೆಲ್ಟ್‌ನಿಂದ ಮನಸೋಇಚ್ಛೆ ಹೊಡೆದಿದ್ದಾರೆ.

ಬಳಿಕ ವಿದ್ಯಾರ್ಥಿಗಳನ್ನು ರೂಮಿನೊಳಗೆ ಹಾಕಿ ಬೀಗ ಹಾಕಿದ್ದಾರೆ. ವಸತಿ ಶಾಲೆಯ ರೂಮಿನೊಳಗಿಂದ ವಿದ್ಯಾರ್ಥಿಗಳ ಕಿರುಚಾಟ ಮತ್ತು ಅಳು ಕೇಳಿ ಪಕ್ಕದ ಕಾಫಿ ತೋಟದ ಕಾರ್ಮಿಕರು ಬಣಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ರೂಮಿನಲ್ಲಿದ್ದ 7 ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಏಳು ವಿದ್ಯಾರ್ಥಿಗಳನ್ನು ಪೊಲೀಸರು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.

ವಿದ್ಯಾರ್ಥಿಗಳು ಪ್ರಿನ್ಸಿಪಾಲ್ ಸತೀಶ್ ಮತ್ತು ಸಿಬ್ಬಂದಿ ಶುಭಮ್ ಅವರ ಹೆಸರನ್ನು ಪೊಲೀಸರಿಗೆ ತಿಳಿಸಿದ್ದು, ಈ ಕುರಿತು ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುವ ಸಾಧ್ಯತೆಯಿದೆ.

Indiscriminate attack on students at Ekalavya Residential School

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....