Home namma chikmagalur chikamagalur ಸರ್ಕಾರ ಜ್ಯುವೆಲ್ಲರಿ ಪಾರ್ಕ್ ಸ್ಥಾಪಿಸಿ ಉದ್ಯೋಗಾವಕಾಶ ಕಲ್ಪಿಸಿಕೊಡಬೇಕು
chikamagalurHomeLatest Newsnamma chikmagalur

ಸರ್ಕಾರ ಜ್ಯುವೆಲ್ಲರಿ ಪಾರ್ಕ್ ಸ್ಥಾಪಿಸಿ ಉದ್ಯೋಗಾವಕಾಶ ಕಲ್ಪಿಸಿಕೊಡಬೇಕು

Share
Share

ಚಿಕ್ಕಮಗಳೂರು: ಚಿನ್ನದ ಬೆಲೆ ಹೆಚ್ಚಳದಿಂದಾಗಿ ಶೇ.೮೦ ರಷ್ಟು ಗೋಲ್ಡ್‌ಸ್ಮಿತ್ ಕೆಲಸಗಾರರು ಕೆಲಸವಿಲ್ಲದೆ ಪೇಚಾಡುವಂತಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಜ್ಯುವೆಲ್ಲರಿ ಪಾರ್ಕ್ ಸ್ಥಾಪಿಸಿ ಉದ್ಯೋಗಾವಕಾಶಗಳನ್ನು ಕಲ್ಪಿಸಿಕೊಡಬೇಕು ಎಂದು ದೈವಜ್ಞ ಬ್ರಾಹ್ಮಣ ಸಂಘದ ರಾಜ್ಯಾಧ್ಯಕ್ಷ ರವಿ ಶ್ರೀಕಾಂತ್ ಗಾವಂಕರ್ ಒತ್ತಾಯಿಸಿದರು.

ಅವರು ಭಾನುವಾರ ಅಖಿಲ ಕರ್ನಾಟಕ ಬ್ರಾಹ್ಮಣ ದೈವಜ್ಞ ಸಂಘ, ಚಿಕ್ಕಮಗಳೂರು ದೈವಜ್ಞ ಬ್ರಾಹ್ಮಣ ಸಂಘ ಹಾಗೂ ಚಿಕ್ಕಮಗಳೂರು ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ ವತಿಯಿಂದ ನಗರದ ಗಾಯತ್ರಿ ದೇವಿ ಕಲ್ಯಾಣ ಮಂಟಪದಲ್ಲಿ ಆಯೋಜಿಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ದೈವಜ್ಞ ಬ್ರಾಹ್ಮಣ ಸಮಾಜವು ಸಣ್ಣ ಸಮಾಜವಾಗಿರುವುದರಿಂದ ಹಾವನೂರು ವರದಿಯಲ್ಲಿ ೨ ಎ ವರ್ಗಕ್ಕೆ ಸೇರ್ಪಡೆಗೊಂಡಿದೆ. ಅದನ್ನೇ ಮುಂದುವರಿಸಿಕೊಂಡು ಹೋಗಬೇಕು ಎಂದು ಒತ್ತಾಯಿಸಿದರು.

ದೈವಜ್ಞ ಬ್ರಾಹ್ಮಣ ಸಮಾಜ ಸಂಘಟಿತರಾಗಿ ಎಲ್ಲರಿಗೂ ಮಾದರಿಯಾಗಿ ನಡೆದುಕೊಳ್ಳಬೇಕಿದೆ. ಚಿನ್ನದ ಬೆಲೆ ಹೆಚ್ಚಾಗಿರುವುದರಿಂದ ಸರ್ಕಾರದಿಂದ ಜ್ಯುವೆಲ್ಲರಿ ಪಾರ್ಕ್ ಸ್ಥಾಪಿಸಿದರೆ ಕುಲಕಸುಬು ನಡೆಸುವವರಿಗೆ ಉದ್ಯೋಗಾವಕಾಶಗಳು ಲಭಿಸುತ್ತದೆ. ಉತ್ತರ ಕನ್ನಡ ಭಾಗ ಅಥವಾ ರಾಜ್ಯದ ಎಲ್ಲಿಯಾದರೂ ಜ್ಯುವೆಲ್ಲರಿ ಪಾರ್ಕ್ ಸ್ಥಾಪಿಸಿದರೂ ಅನುಕೂಲವಾಗುತ್ತದೆ ಎಂದು ಹೇಳಿದರು.

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಎಲ್ಲಾ ಮಹಿಳೆಯರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದರು. ಮುಂಬೈನ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಶ್ರೀದೇವಿ ಚಂದ್ರಶೇಖರ ರಾವ್ ಮಾತನಾಡಿ, ದೈವಜ್ಞ ಸಮಾಜದ ಮಹಿಳೆಯರು ಸಹಾನುಭೂತಿಯಿಂದ ಸಬಲೆಯರಾಗಿ ತಮ್ಮ ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಎಂದರು.

ನಮ್ಮಲ್ಲಿ ಚಿನ್ನದ ಕೆಲಸ ಮಾಡುವ ಯುವಕರಿಗೆ ಹೆಣ್ಣು ಕೊಡುತ್ತಿಲ್ಲ. ಇದು ಸರಿಯಲ್ಲ. ಎಷ್ಟೋ ಯುವಕರು ಇಂಜಿನೀಯರ್ ಆಗಿದ್ದರೂ ಅವರ ವಿವಾಹ ವಿಚ್ಛೇದನ ಆಗುತ್ತಿದೆ. ಚಿನ್ನದ ಕೆಲಸ ಮಾಡುವ ಯುವಕರನ್ನು ವಿವಾಹವಾದವರು ನೆಮ್ಮದಿ ಬದುಕು ಸಾಗಿಸುತ್ತಿದ್ದಾರೆ. ಇದನ್ನು ಸಮಾಜ ಗಮನಿಸಿ ಚಿನ್ನದ ಕೆಲಸ ಮಾಡುವ ಯುವಕರ ವಿವಾಹ ಸಂಬಂಧ ಹೋರಾಟವನ್ನೇ ನಡೆಸಬೇಕಿದೆ ಎಂದರು.

ಅಖಿಲ ಕರ್ನಾಟಕ ದೈವಜ್ಞ ಬಾಹ್ಮಣ ಸಮಾಜದ ಅಧ್ಯಕ್ಷರಾದ ಪ್ರೇಮಶೀಧರ್ ಶೇಟ್ ಮಾತನಾಡಿ ಮಹಿಳೆಯರು ಹೆಚ್ಚು ಸಂಘಟಿತರಾಗಬೇಕು, ಎಲ್ಲರು ಒಂದೆಡೆ ಸೇರಿಕೊಂಡು ಅಂತರಾಷ್ಟ್ರೀಯ ಮಹಿಳಾ ದಿನಾಚಾರಣೆ ಮಾಡುತ್ತಿರುವುದು ಸಂತೋಷವಾಗಿದೆ ಎಂದರು.

ಈ ಸಂದರ್ಭದಲ್ಲಿ ಬೆಂಗಳೂರಿನ ರೈಲ್ವೇ ಇಲಾಖೆಯ ಸ್ಮಿತಾ ಎಂ.ರೇವಣ್ಣಕರ್, ಸಿದ್ದಾಪುರು ಆಂಜನೇಯ ದೇವಸ್ಥಾನದ ಧರ್ಮದರ್ಶಿ ಸಾವಿತ್ರಮ್ಮ ಕಾನಾಸೂರ್, ದೈವಜ್ಞ ಬ್ರಾಹ್ಮಣ ಸಂಘದ ಜಿಲ್ಲಾಧ್ಯಕ್ಷ ಕೀರ್ತಿ ಶೇಟ್, ಮಹಿಳಾ ಸಂಘದ ಅಧ್ಯಕ್ಷೆ ಲತಾ ಸುಧೀರ್, ದೈವಜ್ಞ ಸೌಹಾರ್ಧ ಸಹಕಾರ ಸಂಘದ ಅಧ್ಯಕ್ಷೆ ಶಾಲಿನಿ ಅಶೋಕ್ ರಾಯ್ಕರ್, ಉಪಾಧ್ಯಕ್ಷ ಸುಧಾಕರ ಶೇಟ್, ಸತ್ಯನಾರಾಯಣ ರಾಯ್ಕರ್, ಮಂಗಳೂರು ವಲಯ ಅಧ್ಯಕ್ಷ ಗಜೇಂದ್ರ ಶೇಟ್, ಶಿವಮೊಗ್ಗ ಅಧ್ಯಕ್ಷ ಮಂಜುನಾಥ ಶೇಟ್, ಗದಗ ಅಧ್ಯಕ್ಷ ರಾಮ್‌ದೇವ್ ವಿಶ್ವನಾಥ್, ಹಾಗೂ ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

The government should establish a jewelry park and provide employment opportunities.

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....