ಚಿಕ್ಕಮಗಳೂರು: ತಾಲೂಕಿನ ಅಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಸರಿಕೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಮೈಲಿಮನೆ ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ವಿಲೀನಗೊಳಿಸುವುದನ್ನು ವಿರೋಧಿಸಿ ಬುಧವಾರ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಕೆಸರಿಕೆಯ ಗ್ರಾಮಸ್ಥರು, ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆ ನಡೆಸಿದರು.
ಪ್ರತಿಭಟನಾನಿರತರನ್ನುದ್ದೇಶಿಸಿ ಮಾತನಾಡಿದ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆಯ ಜಿಲ್ಲಾ ಸಂಚಾಲಕಿ ಚೈತ್ರ ಮಾತನಾಡಿ, ರಾಜ್ಯ ಸರ್ಕಾರ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರ ನಡೆಸುತ್ತಿದೆ ಅದರಂತೆ ಚಿಕ್ಕಮಗಳೂರಿನಲ್ಲಿ ಇದರ ವಿರುದ್ಧ ಹಲವಾರು ಹಳ್ಳಿಗಳಲ್ಲಿ ಹೋರಾಟ ನಡೆಸಲಾಗಿದೆ. ಇಂದು ಕೆಸರಿಕೆ ಸರ್ಕಾರಿ ಶಾಲೆ ಮುಚ್ಚಲು ಹೊರಟಿರುವ ಸರ್ಕಾರದ ನಡೆಯ ವಿರುದ್ಧ ನಾವೆಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡೋಣ ಎಂದರು.
ಶಿಕ್ಷಣವನ್ನು ಖಾಸಗೀಕರಣಗೊಳಿಸುವ ಸರ್ಕಾರದ ಇಂತಹ ನೀತಿಗಳ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸಿದಾಗ ಮಾತ್ರ ಗೆಲುವು ಸಾಧಿಸಲು ಸಾಧ್ಯವೆಂದು ತಿಳಿಸಿದ ಅವರು, ಬಳಿಕ ಕೆಸರಿಕೆ ಸರ್ಕಾರಿ ಶಾಲೆ ಉಳಿಸಿ ಸಮಿತಿ ರಚನೆ ಮಾಡಲಾಯಿತು.
ಶಾಲೆ ಉಳಿಸಿ ಸಮಿತಿಯ ಅಧ್ಯಕ್ಷ ಚೇತನ್ ಮಾತನಾಡಿ, ನಮ್ಮೂರಿನಲ್ಲಿ ಸರ್ಕಾರಿ ಶಾಲೆಗೆ ಬರುವ ಮಕ್ಕಳ ಪೋಷಕರೆಲ್ಲರೂ ತೋಟಗಳಿಗೆ ಕೂಲಿ ಮಾಡಲು ಹೋಗುವವರು. ಬೇರೆ ಬೇರೆ ರಾಜ್ಯಗಳಿಂದ ಇಲ್ಲಿ ಕೂಲಿ ಮಾಡಲು ಬರುತ್ತಿದ್ದಾರೆ.೭ ನೇ ತರಗತಿಗೆ ಎಷ್ಟೋ ಮಕ್ಕಳು ಶಾಲೆ ಬಿಡುತ್ತಾರೆ, ಹಾಗಾಗಿ ಹಳ್ಳಿಯಲ್ಲಿ ಶಾಲೆ ಇದ್ದರೆ ಮಾತ್ರ ನಮ್ಮ ಮಕ್ಕಳಿಗೆ ಶಿಕ್ಷಣ. ಅವರಿಗೆ ಜೀವನ ನಡೆಸಲು ಬೇಕಾದ ಮೂಲಭೂತ ಶಿಕ್ಷಣ ಸಿಗುತ್ತದೆ.
ಆದ್ದರಿಂದ ಯಾವುದೇ ಕಾರಣಕ್ಕೂ ಈ ಶಾಲೆ ಮುಚ್ಚಲು ನಾವು ಬಿಡುವುದಿಲ್ಲವೆಂದು ತಿಳಿಸಿದರುಸಮಿತಿಯ ಉಪಾಧ್ಯಕ್ಷ ಕೃಷ್ಣಮೂರ್ತಿ ಮಾತನಾಡಿ, ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಿಂದ ಅನುಕೂಲಕ್ಕಿಂತ ಅನಾನುಕೂಲಗಳೆ ಅಧಿಕವಾಗಿದೆ. ಒಂದರಿಂದ ಐದನೇ ತರಗತಿವರೆಗೆ ಶಾಲೆಗಳು ಸರ್ಕಾರಿ ಶಾಲೆಗಳಾಗಿ ಆ ಊರಿನಲ್ಲೇ ನಡಿಯಬೇಕು ದೂರದ ಊರಿಗೆ ಸಣ್ಣ ಸಣ್ಣ ಮಕ್ಕಳು ನಡೆದುಕೊಂಡು ಹೋಗಲು ಸಾಧ್ಯವಿಲ್ಲ, ಪೋಷಕರು ಕೂಡ ಪ್ರತಿದಿನ ಅವರನ್ನು ಕರೆದುಕೊಂಡು ಹೋಗಿಬಿಟ್ಟು ಬರಲು ಸಾಧ್ಯವಿಲ್ಲ ಹಾಗಾಗಿ ನಾವು ಶಾಲೆ ಮುಚ್ಚಲು ಬಿಡಬಾರದು ಎಂದರು.
ಪ್ರತಿಭಟನೆಯಲ್ಲಿ ಜಿಲ್ಲಾ ಸಹ ಸಂಚಾಲಕಿ ಸುಷ್ಮಾ, ಗ್ರಾಮಸ್ಥರಾದ ಚೇತನ್, ಗಂಗಾಧರ್, ಶಶಿಧರ್, ಸೋಮಶೇಖರ್, ಇಂದಿರಾ, ನಿಂಗರಾಜು ಪಾಲ್ಗೊಂಡಿದ್ದರು.
Protest against merger of government schools
Leave a comment